ಉಡುಪಿ : ಜಿಲ್ಲೆಯಲ್ಲಿ ಪ್ರತಿದಿನ ಪತ್ತೆಯಾಗಿವ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡು ಬಂದಿದೆ. ಉಡುಪಿ, ಕುಂದಾಪುರ ಹಾಗೂ ಕಾರ್ಕಳದಲ್ಲಿ ಮೂರಂಕಿಯಲ್ಲಿ ಪತ್ತೆಯಾಗುತ್ತಿದ್ದ ಪ್ರಕರಣಗಳು ಇಂದು ಎರಡಂಕಿಗೆ ಇಳಿದಿದೆ.
ಜಿಲ್ಲೆಯಲ್ಲಿ ಇಂದು 204 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿಯಲ್ಲಿ 95, ಕುಂದಾಪುರ 49, ಕಾರ್ಕಳ 51 ಹಾಗೂ ಹೊರ ಜಿಲ್ಲೆಯ 9 ಮಂದಿಯಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 3783 ಕೋವಿಡ್ ಸಕ್ರಿಯ ಪ್ರಕರಣಗಳಿವೆ.
ಇಂದು ಜಿಲ್ಲೆಯಲ್ಲಿ ಕುಂದಾಪುರದ 23 ವರ್ಷದ ಓರ್ವ ಯುವತಿ ಹಾಗೂ ಉಡುಪಿಯ 75 ವರ್ಷದ ಓರ್ವ ಮಹಿಳೆ ಸೋಂಕಿನಿಂದ ಮೃತಪಟ್ಟಿದ್ದಾರೆ. ಜೂ.7 ರಂದು ಜಿಲ್ಲೆಯಲ್ಲಿ 504ಸೋಂಕಿತರು ಆಸ್ಪತ್ರೆಯಿಂದ ಗುಣಮುಖರಾಗಿ ಹೊರ ಬಂದಿದ್ದು, ಈ ವರೆಗೆ ಒಟ್ಟು 58,752 ಮಂದಿ ಗುಣಮುಖರಾಗಿದ್ದಾರೆ.
ಜೂ.7 ರ ವೇಳೆಗೆ ಜಿಲ್ಲೆಯಲ್ಲಿ ಒಟ್ಟು 6,19,238 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 62,883 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈ ವರೆಗೆ ಜಿಲ್ಲೆಯಲ್ಲಿ ಒಟ್ಟು 348 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇನ್ನು ಜಿಲ್ಲೆಯಲ್ಲಿ 10 ಬ್ಲಾಕ್ ಫಂಗಸ್ ಪ್ರಕರಣಗಳು ಸಕ್ರಿಯವಾಗಿದೆ. ಈ ವರೆಗೆ ಉಡುಪಿಯಲ್ಲಿ 3, ಕುಂದಾಪುರದಲ್ಲಿ 4 ಹಾಗೂ ಹೊರ ಜಿಲ್ಲೆಯ 11ಮಂದಿಯಲ್ಲಿ ಈ ಕಪ್ಪು ಶಿಲೀಂಧ್ರ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ 6 ಮಂದಿ ಸೋಂಕಿನಿಂದ ಗುಣ ಮುಖರಾಗಿದ್ದು ಇಬ್ಬರು ಬ್ಲಾಕ್ ಫಂಗಸ್ ಗೆ ಬಲಿಯಾಗಿದ್ದಾರೆ. ಒಟ್ಟು 18 ಬ್ಲಾಕ್ ಫಂಗಸ್ ನ ಪ್ರಕರಣಗಳು ಜಿಲ್ಲೆಯಲ್ಲಿ ಪತ್ತೆಯಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…