ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಜಿಲ್ಲೆಯಲ್ಲಿ ಇಂದು 394 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.
ಈ ಪೈಕಿ ಉಡುಪಿಯಲ್ಲಿ 207, ಕುಂದಾಪುರ 110, ಕಾರ್ಕಳ 70 ಹಾಗೂ ಹೊರ ಜಿಲ್ಲೆಯ 7 ಮಂದಿಯಲ್ಲಿ ಸೋಂಕು ಇರುವುದು ಪತ್ತೆ ಯಾಗಿದೆ. ಸದ್ಯ ಜಿಲ್ಲೆಯಲ್ಲಿ 4085 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಜಿಲ್ಲೆಯಲ್ಲಿ ಕುಂದಾಪುರದ 61 ವರ್ಷದ ಓರ್ವ ವ್ಯಕ್ತಿ ಹಾಗೂ 85 ವರ್ಷದ ಓರ್ವ ಮಹಿಳೆ ಸೋಂಕಿನಿಂದ ಮೃತಪಟ್ಟಿದ್ದಾರೆ.
ಜೂ. 6 ರಂದು ಜಿಲ್ಲೆಯಲ್ಲಿ 628 ಸೋಂಕಿತರು ಆಸ್ಪತ್ರೆ ಯಿಂದ ಗುಣಮುಖರಾಗಿ ಹೊರ ಬಂದಿದ್ದು, ಈ ವರೆಗೆ ಒಟ್ಟು 58,248 ಮಂದಿ ಗುಣಮುಖರಾಗಿದ್ದಾರೆ. ಜೂ.6 ರ ವೇಳೆಗೆ ಜಿಲ್ಲೆಯಲ್ಲಿ ಒಟ್ಟು 6,16,622 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 62,679 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈ ವರೆಗೆ ಜಿಲ್ಲೆಯಲ್ಲಿ ಒಟ್ಟು 346 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಇನ್ನು ಜಿಲ್ಲೆಯಲ್ಲಿ 10 ಬ್ಲಾಕ್ ಫಂಗಸ್ ಪ್ರಕರಣಗಳು ಸಕ್ರಿಯವಾಗಿದೆ. ಈ ವರೆಗೆ ಉಡುಪಿಯಲ್ಲಿ 3, ಕುಂದಾಪುರ 4 ಹಾಗೂ ಹೊರ ಜಿಲ್ಲೆಯ 11ಮಂದಿಯಲ್ಲಿ ಈ ಕಪ್ಪು ಶಿಲೀಂಧ್ರ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ 6 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು ಇಬ್ಬರು ಬ್ಲಾಕ್ ಫಂಗಸ್ ಗೆ ಬಲಿಯಾಗಿದ್ದಾರೆ. ಒಟ್ಟು 18 ಬ್ಲಾಕ್ ಫಂಗಸ್ ನ ಪ್ರಕರಣಗಳು ಜಿಲ್ಲೆಯಲ್ಲಿ ಪತ್ತೆಯಾಗಿದೆ.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…