Featured

ಉಡುಪಿ ಜಿಲ್ಲೆಯಲ್ಲಿ ಉತ್ತಮವಾಗಿ ಕೆಲಸ ಮಾಡಲು ಪೂರಕ ವಾತಾವರಣ- ಪ್ರಿಯಾಂಕ ಮೇರಿ ಫ್ರಾನ್ಸಿಸ್ – Vishwanews24

ಉಡುಪಿ  : ಉಡುಪಿ ಜಿಲ್ಲೆಯಲ್ಲಿ ಉತ್ತಮವಾಗಿ ಕರ್ತವ್ಯಕ್ಕಾಗಿ ನಿರ್ವಹಿಸಲು ಎಲ್ಲಾ ಸಿಬ್ಬಂದಿ, ಅಧಿಕಾರಿಗಳು ಪೂರಕ ವಾತಾವರಣ ನಿರ್ಮಿಸಿದ್ದು, ಇಲ್ಲಿ ತುಂಬ ಬುದ್ದಿವಂತ ಮತ್ತು ಉತ್ತಮ ಸಹಕಾರ ನೀಡುವ ಸಿಬ್ಬಂದಿ ಇದ್ದಾರೆ ಎಂದು ಬೆಂಗಳೂರಿಗೆ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರಾಗಿ ಭಡ್ತಿ ಹೊಂದಿ ಉಡುಪಿ ಜಿಲ್ಲೆಯಿಂದ ನಿರ್ಗಮಿಸುತ್ತಿರುವ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಹೇಳಿದ್ದಾರೆ.

ಗುರುವಾರ ರಜತಾದ್ರಿಯ ಅಟಲ್‍ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿ.ಪಂ.,ಪೊಲೀಸ್ ಇಲಾಖೆ, ಜಿಲ್ಲಾಧಿಕಾರಿಗಳ ಸಂಕೀರ್ಣದಲ್ಲಿರುವ ವಿವಿಧ ಇಲಾಖೆಗಳು, ತಾಲೂಕು ಆಡಳಿತ, ತಾ.ಪಂ. ಮೊದಲಾದ ಕಚೇರಿಗಳ ವತಿಯಿಂದ ಏರ್ಪಡಿಸಿದ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಉಡುಪಿ ಜಿಲ್ಲೆಯಲ್ಲಿ 3 ವರ್ಷ 2 ತಿಂಗಳುಗಳ ಕಾಲ ಕರ್ತವ್ಯ ನಿರ್ವಹಿಸುವುದಕ್ಕೆ ಅವಕಾಶ ಸಿಕ್ಕಿದೆ. ಈ ಅವಧಿಯಲ್ಲಿ ತುಂಬ ಅನುಭವಗಳನ್ನು ಪಡೆದುಕೊಂಡಿದ್ದೇನೆ. ಇಲ್ಲಿ ಟೀಮ್ ವರ್ಕ್ ಮಾಡುವುದಕ್ಕೆ ಸಾಧ್ಯವಾಗಿದೆ. ಕಳೆದ ಮಳೆಗಾಲದಲ್ಲಿ ನೆರೆ ಬಂದಾಗ, ಚುನಾವಣಾ ಸಮಯದಲ್ಲಿ, ರಾಷ್ಟ್ರಪತಿ ಭೇಟಿ ಮೊದಲಾದ ಸಂದರ್ಭಗಳಲ್ಲಿ ಇದು ಅನುಭವಕ್ಕೆ ಬಂದಿದೆ. ಅಧಿಕಾರಿ ಮತ್ತು ಸಿಬ್ಬಂದಿಗಳಲ್ಲಿ ಯಾರಿಗೇ ಆಗಲಿ ಇಂಥ ಕೆಲಸವನ್ನು ವಹಿಸಿದರೆ ಅದನ್ನು ಪೂರ್ಣ ಪರಿಶ್ರಮದಿಂದ ಸಾಮರ್ಥ್ಯ ಮೀರಿ ಕೆಲಸ ಮಾಡುತ್ತಾರೆ, ಎಲ್ಲರು ಉತ್ತಮ ಸಹಕಾರ, ಬೆಂಬಲ ನೀಡಿದ್ದಾರೆ. ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿರುವ ಹೆಫ್ಸಿಬಾ ರಾಣಿ ಅವರಿಗೆ ಕೂಡ ಎಲ್ಲ ಅಧಿಕಾರಿ ಸಿಬ್ಬಂದಿ ಅವರು ಸಹಕಾರ, ಬೆಂಬಲ ನೀಡಿ ಎಂದು ಪ್ರಿಯಾಂಕ ಮೇರಿ ತಿಳಿಸಿದರು.

Vishwa News 24

Recent Posts

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್  – vishwanews24

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…

1 hour ago

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ – vishwanews24

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…

1 hour ago

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ – vishwanews24

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…

2 hours ago

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ – vishwanews24

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…

2 hours ago

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ – vishwanews24

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…

2 hours ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

4 hours ago