Featured

ಉಡುಪಿ  : ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆ ಹರಡುವುದನ್ನು ನಿಯಂತ್ರಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು : ಅಧಿಕಾರಿಗಳಿಗೆ ಬಸವರಾಜ ಬೊಮ್ಮಾಯಿ ಸೂಚನೆ -Vishwanews24

ಉಡುಪಿ : ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆ ಹರಡುವುದನ್ನು ನಿಯಂತ್ರಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು : ಅಧಿಕಾರಿಗಳಿಗೆ ಬಸವರಾಜ ಬೊಮ್ಮಾಯಿ ಸೂಚನೆ -Vishwanews24

ಜಿಲ್ಲೆಯಲ್ಲಿ ಹೆಚ್ಚು ಕೋವಿಡ್ ಟೆಸ್ಟ್ ನೆಡೆಸಿ, ಸೋಂಕಿತರಿಗೆ ಕೂಡಲೇ ಚಿಕಿತ್ಸೆ ನೀಡಿ..

ಉಡುಪಿ : ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಪರೀಕ್ಷೆಗಳನ್ನು ನಡೆಸಿ, ತ್ವರಿತವಾಗಿ ಸೋಂಕಿತರನ್ನು ಪತ್ತೆ ಹಚ್ಚಿ, ಕೂಡಲೇ ಅವರಿಗೆ ಚಿಕಿತ್ಸೆ
ಆರಂಬಿಸುವುದರ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆ ಹರಡುವುದನ್ನು ನಿಯಂತ್ರಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು, ನಿಲರ್ಕ್ಷಿಸದರೆ.
ಸೋಂಕು ವ್ಯಾಪಕವಾಗಿ ಹರಡಲಿದೆ ಎಂದು ರಾಜ್ಯದ ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ
ಸೂಚಿಸಿದ್ದಾರೆ.

ಅವರು ಇಂದು ಬೆಂಗಳೂರಿನ ವಿಕಾಸಸೌಧದಿಂದ ವೀಡಿಯೋ ಕಾನ್ನರೆನ್ಸ್ ಮೂಲಕ ಜಿಲ್ಲೆಯಲ್ಲಿ ಕೋವಿಚ್ ನಿಯಂತ್ರಣಕ್ಕೆ ತೆಗೆದುಕೊಂಡಿರುವ ಕ್ರಮಗಳ ಕುರಿತ ಸಭೆಯಲ್ಲಿ ಮಾತನಡಿದರು. ಪ್ರಸ್ತುತ ಜಿಲ್ಲೆಯಲ್ಲಿ ಪ್ರತೀ ದಿನ 3000 ಪರೀಕ್ಷೆಗಳನ್ನು ನಡೆಸುತ್ತಿದ್ದು ಈ ಪ್ರಮಾಣವನ್ನು 4000ಕ್ಕೆ ಹೆಚ್ಚಿಸಿ, ಪರೀಕ್ಷೆ ವರದಿಯ ವಿವರಗಳನ್ನು ಶೀಘ್ರದಲ್ಲಿ ಪಡೆದು, ಸ್ವಾಬ್ ಸಂಗ್ರಹದ ಪರೀಕ್ಷೆಯನ್ನು ಅವಶ್ಯವಿದ್ದಲ್ಲಿ ಜಿಲ್ಲೆಯ ಖಾಸಗಿ ಲ್ಯಾಬ್ ಗಳ ಮೂಲಕ ಸಹ ನಡೆಸಿ, ಸೋಂಕಿತರನ್ನು ಶೀಘ್ರದಲ್ಲಿ ಪತ್ತೆ ಹಚ್ಚಿ ಅವರ ಚಿಕಿತ್ಸೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಿ, ಪ್ರತೀ ಸೋಂಕಿತರ ಪ್ರಾಥಮಿಕ ಸಂಪರ್ಕದ 30ಮಂದಿಯ ಕೋವಿಡ್ ಪರೀಕ್ಷೆ ನಡೆಸಿ, ಎಲ್ಲಾ ನಗರ ವ್ಯಾಪ್ತಿಯಲ್ಲಿ ಟೆಸ್ಟಿಂಗ್ಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಿ ಆಸ್ಪತ್ರೆಗಳಲ್ಲಿ ದಾಖಲಾದ ಸೋಂಕಿತರ
ಚಿಕಿತ್ಸೆಗೆ ಹೆಚ್ಚಿನ ಕಾಳಜಿ ವಹಿಸಿ , ಆಸ್ಪತ್ರೆಗಳಲ್ಲಿ ಬೆಡ್ ಗಳ ಕೊರತೆಯದಂತೆ ಎಚ್ಚರವಹಿಸಿ ಎಂದು ಸಚಿವ ಬೊಮ್ಮಾಯಿ ಸೂಚನೆ ನೀಡಿದರು. ಕೋವಿಡ್
ದೃಡಪಟ್ಟು ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯದ ಸುದಾರಣೆಯನ್ನು ಆಶಾ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತರು ಆಗಿಂದಾಗ್ಗೆಮನೆ ಬೇಟಿ ನೀಡಿ ಪರಿಶೀಲಿಸಬೇಕು, ಅವರು ಮನೆ ಬಿಟ್ಟು ಹೊರೆಗೆ ತಿರುಗಾಡದಂತೆ ನಿಗಾ ವಹಿಸಬೇಕು.

ಕೊರೊನಾ ಪಾಸಿಟಿವ್ ಬಂದ್ರೆ ಹೆದರಬೇಡಿ, ಧೃತಿಗೆಡಬೇಡಿ ; ಆತ್ಮವಿಶ್ವಾಸದಿಂದ ಇರಿ, ಸರ್ಕಾರ ನಿಮ್ಮ ಜೊತೆಗಿದೆ : ಸುಧಾಕರ್ -Vishwanews24

ಕರೋನಾ ನಿಯಂತ್ರಣಕ್ಕೆ ಜಾರಿಗೆ ತರಲಾಗಿರುವ ರಾತ್ರಿ ಹಾಗೂ ವೀಕೆಂಡ್ ಕೊರೋನಾ ಕರ್ಪ್ಯೂವನ್ನು ಸಾರ್ವಜನಿರನ್ನು  ವಿಶ್ವಾಸಕ್ಕೆ ತೆಗೆದಕೊಳ್ಳುವದರೊಂದಿಗೆ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು. ಸಾರ್ವಜನಿಕರು ಹೆಚ್ಚು ಹೆಚ್ಚು ಒಂದಡೆ ಸೇರದಂತೆ ಎಚ್ಚರವಹಿಸಿಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚನೆ ನೀಡಿದರು. ಕರೋನ ಪೀಡಿತರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುವುದು ಅವಶ್ಯವೆಂದು ಕಂಡುಬಂದಲ್ಲಿ ತಕ್ಷಣದಲ್ಲಿಯೇ ಖಾಸಗಿ ಆಸ್ಪತ್ರೆಗಳಲ್ಲಿ ಎಬಿಆರ್‌ಕೆ ಅಡಿಯಲ್ಲಿ ಚಿಕಿತ್ಸೆ ಪಡೆಯಲು ಶಿಫಾರಸ್ಸು ಮಾಡಬೇಕೆಂದ ಅವರು ಸಾಮಾನ್ಯ ರೋಗಿಗಳಾಗಿದ್ದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಂಬೇಕೆಂದು ಸೂಚನೆ ನೀಡಿದರು. ಜಿಲ್ಲೆಯಲ್ಲಿ ಸಾಮಾಜಿಕ ಅಂತರ ಉಲ್ಲಂಘನೆಯಾಗುವ ಕಾರ್ಯಕ್ರಮಗಳಿಗೆ ಅನುಮತಿ ನೀಡಬೇಡಿ , ಧಾರ್ಮಿಕ ಕಾರ್ಯಗಳನ್ನು ದೇವಾಲಯದೊಳಗೆ ನಿಗಧಿತ ಸಂಖ್ಯೆಗೆ ಸೀಮಿತಗೊಳಿಸಿ ಆಚರಣೆ ನಡೆಸಿ, ಮೆರವಣಿಗೆಗೆ ಅವಕಾಶ ನೀಡಬೇಡಿ, ಕುಂಭಮೇಳದಂತಹ ಮಹಾ ಆಚರಣೆಯನ್ನೆ ಪ್ರಧಾನ ಮಂತ್ರಿಗಳು ಮೊಟಕುಗೊಳಿಸಿದ್ದಾರೆ. ಅಲ್ಲದೇ ಸುಪ್ರಸಿದ್ದ ಬೆಂಗಳೂರು ಕರಗವನ್ನೂ ಸಹ ನಿಲ್ಲಿಸಲಾಗಿದೆ, ಕೋವಿಡ್ ನಿಯಮಾವಳಿ ಉಲ್ಲಂಘನೆ ಆಗದಂತೆ ಧಾರ್ಮಿಕ ಕಾರ್ಯಕ್ರಮ ನಡೆಸಿ ಎಂದು
ಸಚಿವರು ಸೂಚನೆ ನೀಡಿದರು,

ಹಳೆಯಂಗಡಿ : ಸಿಡಿಲು ಬಂಡಿದು ಗಂಭೀರ ಸ್ಥಿತಿಯಲ್ಲಿದ್ದ ಮತ್ತೋರ್ವ ಬಾಲಕ ಸಾವು -Vshwanews24

ಪ್ರಸ್ತುತ ಮುಂಬೈ ಲಾಕ್ ಡೌನ್ ಆಗಿರುವ ಕಾರಣ ಅಲ್ಲಿಂದ ಹೆಚ್ಚಿನ ಸಂಖ್ಯೆಯಲ್ಲಿ ಹಾಗೂ ಕೇರಳದಿಂದ ಸಹ ನಾಗರೀಕರು ಜಿಲ್ಲೆಗೆ ಆಗಮಿಸುತ್ತಿದ್ದು, ಇದರಿಂದ ಜಿಲ್ಲೆಯಲ್ಲಿ ಸೋಂಕು ಉಲ್ಬಣಗೊಳ್ಳುವ ಸಾಧ್ಯತೆಗಳಿದ್ದು, ಹೊರಗಿನಿಂದ ಬಂದವರ ಸ್ವಾಬ್ ಸಂಗ್ರಹಿಸಿ ಪರೀಕ್ಷೆ ನಡೆಸಿ, ಜಿಲ್ಲೆಗೆ ಅಗತ್ಯಕ್ಕನುಗುಣವಾಗಿ ರೆಮಿಡಿಸಿವರ್‌ ಮತ್ತು ಕೋವಿಡ್ ಲಸಿಕೆಯನ್ನು ಸರಬರಾಜು ಮಾಡುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು, ಆಕ್ಷಿಜಿನ್ ಕೊರೆತೆಯಾಗಂತೆ ಎಚ್ಚರವಹಿಸಿ, ಮೀನುಗಾರಿಕೆಗೆ ತೊಂದರೆಯಾಗದಂತೆ ಕ್ರಮಗಳನ್ನು ಕೈಗೊಳ್ಳಿ ಎಂದು ಸಚಿವರು ಹೇಳಿದರು. ಕೋವಿಡ್ ನಿಯಂತ್ರಣ ಕಾರ್ಯಗಳಿಗೆ ಅಗತ್ಯವಿದ್ದಲ್ಲಿ ವೈದ್ಯಕೀಯ ಸಿಬ್ಬಂದಿ ವರ್ಗ ಒಳಗೊಂಡಂತೆ ಇತರೆ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವನ್ನು ಬಳಕೆ ಮಾಡಿಕೊಳ್ಳಬೇಕೆಂದು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಎರಡನೇ ಅಲೆ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ವಿವರಿಸಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಕೋವಿಚ್ ಪರೀಕ್ಷೆಗಳನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು, ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಗಳನ್ನು ಮೀಸಲಿಡಲು ಈಗಾಗಲೇ ಸೂಚನೆ ನೀಡಲಾಗಿದೆ ಎಂದರು. ಸಭೆಯಲ್ಲಿ ಶಾಸಕ ರಘುಪತಿ ಭಟ್, ಲಾಲಾಜಿ ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಪಂಚಾಯತ್ ಸಿಇಓ ಡಾ.ನವೀನ್ ಭಟ್, ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪವಿಭಾಗಾಧಿಕಾರಿ ರಾಜು, ಡಿಹೆಚ್‌ಓ ಡಾ.ಸುದೀರ್ ಚಂದ್ರ ಸೂಡಾ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಮೈಸೂರು: ಹೆಚ್ಚುತ್ತಿರುವ ಕೊರೋನಾ ಪ್ರಕರಣ : ಮೇ.4ರವರೆಗೆ ಚಾಮುಂಡಿಬೆಟ್ಟಕ್ಕೆ ಪ್ರವೇಶ ನಿಷೇಧ -Vishwanews24

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

7 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

16 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

16 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

16 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

16 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago