Featured

ಉಡುಪಿ : ಜಿಲ್ಲೆಯಲ್ಲಿ ಕೋವಿಡ್‌ ನಿರ್ಬಂಧ ಹಿನ್ನಲೆಯಲ್ಲಿ ಸರಳ ಗಣೇಶೋತ್ಸವ ಆಚರಿಸಲು  ಜಿಲ್ಲಾಧಿಕಾರಿಯಿಂದ ಮಾರ್ಗಸೂಚಿ ಬಿಡುಗಡೆ -Vishwanews24

ಉಡುಪಿ : ಜಿಲ್ಲೆಯಲ್ಲಿ ಕೋವಿಡ್‌ ನಿರ್ಬಂಧ ಹಿನ್ನಲೆಯಲ್ಲಿ ಸರಳ ಗಣೇಶೋತ್ಸವ ಆಚರಿಸಲು  ಜಿಲ್ಲಾಧಿಕಾರಿಯಿಂದ ಮಾರ್ಗಸೂಚಿ ಬಿಡುಗಡೆ -Vishwanews24

ಉಡುಪಿ: ಜಿಲ್ಲೆಯಲ್ಲಿ ಕೋವಿಡ್‌ ನಿರ್ಬಂಧ ಹಿನ್ನಲೆಯಲ್ಲಿ ಸರಳ ಗಣೇಶೋತ್ಸವ ಆಚರಿಸುವ ಕುರಿತು ಜಿಲ್ಲಾಧಿಕಾರಿ ಎಂ ಕೂರ್ಮರಾವ್‌ ಅವರು ಮಾರ್ಗಸೂಚಿಸಿಗಳನ್ನು ಹೊರಡಿಸಿದ್ದಾರೆ.

ಸರಳ ಶ್ರೀ ಗಣೇಶೋತ್ಸವ ಆಚರಿಸುವ ಸಂಬಂಧ ಮಾರ್ಗಸೂಚಿಗಳು:

1) ಶ್ರೀ ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ದೇವಸ್ಥಾನದೊಳಗೆ ಮತ್ತು ತಮ್ಮ-ತಮ್ಮ ಮನೆಗಳಲ್ಲಿ ಅಥವಾ ಸರ್ಕಾರಿ/ಖಾಸಗಿ ಸಾರ್ವಜನಿಕ ಬಯಲು ಪ್ರದೇಶದಲ್ಲಿ ಕನಿಷ್ಠ ಸಂಖ್ಯೆಯೊಂದಿಗೆ ಆಚರಿಸುವುದು.

2) ಈ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವುದು, ಗಣೇಶ ಮೂರ್ತಿಯನ್ನು ನಾಲ್ಕು ಅಡಿ ಎತ್ತರ ಮೀರದಂತೆ ಹಾಗೂ ಮನೆಯೊಳಗೆ ಎರಡು ಅಡಿ ಮೀರದಂತೆ ಪ್ರತಿಷ್ಠಾಪಿಸುವುದು.

3) ಪಾರಂಪರಿಕ ಗಣೇಶೋತ್ಸವಕ್ಕಾಗಿ ಗಣೇಶೋತ್ಸವ ಸಮಿತಿಗಳು/ ಮಂಡಳಿಗಳು ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲು ಮುನಿಸಿಪಲ್ ಕಾರ್ಪೋರೇಷನ್/ ಸ್ಥಳೀಯ ಆಡಳಿತದಿಂದ ಪೂರ್ವನುಮತಿಯನ್ನು ಪಡೆಯತಕ್ಕದ್ದು ಒಂದು ನಗರ ಪ್ರದೇಶಗಳಲ್ಲಿ ವಾರ್ಡಿಗೆ ಒಂದರಂತೆ ಸಾರ್ವಜನಿಕ ಗಣೇಶೋತ್ಸವನ್ನು ಮಾತ್ರ ಆಚರಿಸಲು ಪ್ರೋತ್ಸಾಹಿಸುವುದು. ಗಣೇಶ ಆಚರಣೆಯನ್ನು ಗರಿಷ್ಠ 5 ದಿನಗಳಿಗಿಂತ ಹೆಚ್ಚಿನ ದಿನ ಆಚರಿಸುವಂತಿಲ್ಲ. ನಗರ ಪ್ರದೇಶಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳಿಂದ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸಂಬಂಧಪಟ್ಟ ಗ್ರಾಮ ಪಂಚಾಯತ್ ಗಳಿಂದ ಪೂರ್ವನುಮತಿಯನ್ನು ಪಡೆಯತಕ್ಕದ್ದು.)

4) ಇಂತಹ ಸ್ಥಳಗಳಲ್ಲಿ 20 ಜನಕ್ಕೆ ಸೀಮಿತವಾದ ಆವರಣವನ್ನು ನಿರ್ಮಿಸುವುದು. ಒಮ್ಮಲೆ 20ಕ್ಕಿಂತ ಹೆಚ್ಚಿನ ಜನ ಸೇರಿದಂತೆ ಭಕ್ತಾಧಿಗಳಿಗೆ ಅನುವು ಮಾಡುವುದು.

5) ಶ್ರೀ ಗಣೇಶ ಆಚರಣೆಯ ಆಯೋಜಕರು ಕೋವಿಡ್-19 ನೆಗೆಟಿವ್ ರಿಪೋರ್ಟ್ ಮತ್ತು ಲಸಿಕೆ ಪಡೆದಿರುವ ಬಗ್ಗೆ ಪ್ರಮಾಣ ಪತ್ರವನ್ನು ಹೊಂದಿರುವುದು ಕಡ್ಡಾಯ.

6) ಶ್ರೀ ಗಣೇಶ ಆಚರಣೆಯನ್ನು ಆಯೋಜಿಸುವ ಸ್ಥಳದಲ್ಲಿ ಸ್ಥಳೀಯ ಮಟ್ಟದಲ್ಲಿ ಆಯೋಜಕರು ಲಸಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದು.

7) ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಯಾವುದೇ ಅಡ್ಡಿಯಾಗದಂತೆ ಶ್ರೀ ಗಣೇಶ ಪ್ರತಿಷ್ಠಾಪನೆ ಮಾಡಬೇಕು.

8) ಶ್ರೀ ಗಣೇಶ ಮೂರ್ತಿ ಪ್ರತಿಷ್ಠಾಪನೆ ಸ್ಥಳದಲ್ಲಿ ಯಾವುದೇ ರೀತಿ ಸಾಂಸ್ಕೃತಿಕ/ ಸಂಗೀತ/ನೃತ್ಯ ಹಾಗೂ ಮುಖ್ಯವಾಗಿ ಡಿ.ಜೆ.ಯ ಮೂಲಕ ಹಾಗೂ ಇನ್ನಿತರ ಯಾವುದೇ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶವಿರುವುದಿಲ್ಲ.

9) ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ಕಾರಣಕ್ಕಾಗಲಿ ಅಥವಾ ಯಾವುದೇ ಸಂದರ್ಭದಲ್ಲಿ ಯಾವುದೇ ಮೆರವರಣಿಗೆಯನ್ನು ಹೊರಡಿಸತಕ್ಕದಲ್ಲ. ಮಾಡತಕ್ಕದ್ದಲ್ಲ. ಇದನ್ನು ಸಂಪೂರ್ಣವಾಗಿ ನಿರ್ಬಂಧಿಸಿದೆ.

10) ಪಾರಂಪರಿಕ ಗಣೇಶ ಮೂರ್ತಿ ಮತ್ತು ಮನೆಯಲ್ಲಿ ವಿಗ್ರಹಗಳನ್ನು ಪೂಜಿಸುವುದು ಅವುಗಳನ್ನು ಮನೆಯಲ್ಲಿಯೇ ವಿಸರ್ಜಿಸುವುದು ಮತ್ತು ಸರ್ಕಾರಿ/ಖಾಸಗಿ ಬಯಲು ಪ್ರದೇಶಗಳಲ್ಲಿ ಪ್ರತಿಷ್ಠಾಪಿಸಿರುವ ಗಣೇಶ ಮೂರ್ತಿಗಳನ್ನು ಅತೀ ಕನಿಷ್ಠ ಜನಸಂಖ್ಯೆಯೊಂದಿಗೆ ಸಮೀಪವಾಗುವಂತಹ ಮಾರ್ಗಗಳನ್ನು ಬಳಸಿಕೊಂಡು ಮಹಾನಗರ ಪಾಲಿಕೆ ಜಿಲ್ಲಾಡಳಿತ ಹತ್ತಿರದ ಸ್ಥಳೀಯ ಸಂಸ್ಥೆಗಳ/ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಈಗಾಗಲೇ ನಿರ್ಮಿಸಲಾದ ಹೊಂಡ ಅಥವಾ ಮೊಬೈಲ್ ಟ್ಯಾಂಕ್‌ಗಳಲ್ಲಿ ಅಥವಾ ಕೃತಕ ವಿಸರ್ಜನಾ ಟ್ಯಾಂಕರ್‌ಗಳಲ್ಲಿ ವಿಸರ್ಜಿಸುವುದು.

11) ಗಣೇಶ ಚತುರ್ಥಿ ಆಚರಿಸುವ ದೇವಸ್ಥಾನ, ಸಾರ್ವಜನಿಕ ಸ್ಥಳಗಳಲ್ಲಿ ದಿನನಿತ್ಯ ಸ್ಯಾನಿಟೈಸೇಷನ್ ಮಾಡುವುದು. ಸಾರ್ವಜನಿಕ ದರ್ಶನಕ್ಕಾಗಿ ಆಗಮಿಸುವ ಭಕ್ತಾಧಿಗಳಿಗೆ ಸ್ಯಾನಿಟೈಸರ್ ಹಾಗೂ ಧರ್ಮಲ್ ಸ್ಟೀನಿಂಗ್ ವ್ಯವಸ್ಥೆಯನ್ನು ಕಲ್ಪಿಸುವುದು.

12) ದರ್ಶನಕ್ಕಾಗಿ ಬರುವ ಭಕ್ತಾಧಿಗಳಿಗೆ ಕನಿಷ್ಠ 06 ಅಡಿ ಸಾಮಾಜಿಕ ಅಂತರವನ್ನು ಗುರುತಿಸುವುದು ಹಾಗೂ ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದು.

13) ಭಕ್ತಾಧಿಗಳು ಮತ್ತು ಸಾರ್ವಜನಿಕರು ಕಡ್ಡಾಯವಾಗಿ ಮುಖಗವಸು ಧರಿಸಿರತಕ್ಕದ್ದು.

14) ಕೋವಿಡ್-19 ಸಾಂಕ್ರಿಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಪಾಲಿಸತಕ್ಕದ್ದು, ಅಲ್ಲದೇ ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ, ಗ್ರಾಮಪಂಚಾಯತ್, ಇತರೆ ಸ್ಥಳೀಯ ಸಂಸ್ಥೆ ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಇತರೆ ಇಲಾಖೆಗಳಿಂದ ಹೊರಡಿಸಲಾದ ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಸಹ ಕಡ್ಡಾಯವಾಗಿ ಪಾಲಿಸತಕ್ಕದ್ದು.

15) ಶ್ರೀ ಗಣೇಶೋತ್ಸವ ಆಚರಣೆ ಕಾಲಕ್ಕೆ ಸಂದರ್ಭಕ್ಕನುಗುಣವಾಗಿ ಸರ್ಕಾರ, ಜಿಲ್ಲಾಡಳಿತ, ಪೊಲೀಸ್ ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆ ಪ್ರಾಧಿಕಾರಗಳಿಂದ ಹೊರಡಿಸಲಾಗುವ ಎಲ್ಲಾ ಆದೇಶ/ನಿರ್ದೇಶನ ಹಾಗೂ ಸೂಚನೆಗಳನ್ನು ಸಹ ಕಡ್ಡಾಯವಾಗಿ ಪಾಲಿಸತಕ್ಕದ್ದು.

16) ಹಬ್ಬ-ಹರಿದಿನಗಳು ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಾಮರಸ್ಯಗಳು ಉಂಟಾಗಲು ಪೂರಕವಾಗಿರುವುದರಿಂದ ಶ್ರೀ ಗಣೇಶೋತ್ಸವ ಹಬ್ಬವನ್ನು ಅದೇ ರೀತಿಯಿಂದಲೇ ಆಚರಿಸುವ ಮೂಲಕ ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಭಂಗ ಬಾರದಂತೆ ಕಾಪಾಡುವುಂತೆ ಜಿಲ್ಲಾಧಿಕಾರಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago