Featured

ಉಡುಪಿ : ಜಿಲ್ಲೆಯಲ್ಲಿ ತಾಯಿ ಮತ್ತು ಶಿಶು ಮರಣ ಪ್ರಮಾಣ ಇಳಿಕೆ :  ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24

ಉಡುಪಿ : ಜಿಲ್ಲೆಯಲ್ಲಿ ತಾಯಿ ಮತ್ತು ಶಿಶು ಮರಣ ಪ್ರಮಾಣ ಇಳಿಕೆ :  ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24

ಉಡುಪಿ : ಜಿಲ್ಲೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನದಿಂದ ತಾಯಿ ಮತ್ತು ಶಿಶು ಮರಣ ಪ್ರಮಾಣ ಇಳಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು.

ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ, ಜಿಲ್ಲೆಯ ತಾಯಿ ಮತ್ತು ಮರಣ ಪ್ರಮಾಣ ನಿಯಂತ್ರಣ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಷ್ಟç ಮತ್ತು ರಾಜ್ಯದಲ್ಲಿನ ಸರಾಸರಿಯನ್ನು ಹೋಲಿಸಿದಾಗ ಜಿಲ್ಲೆಯಲ್ಲಿ ತಾಯಿ ಮತ್ತು ಶಿಶು ಮರಣ ಪ್ರಮಾಣ ಕಡಿಮೆ ಇದೆ ಎಂದ ಅವರು ಜಿಲ್ಲೆಯು
ರಾಷ್ಟ್ರೀಯ ಆರೋಗ್ಯ ಅಭಿಯಾನದ ಅನುಷ್ಠಾನದಲ್ಲಿ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ ಎಂದರು.

ಜಿಲ್ಲೆಯಲ್ಲಿ ಶಿಶು ಮರಣವು 1000 ಕ್ಕೆ 2.9 ಇದೆ. ಇದು ರಾಜ್ಯದಲ್ಲಿ ಸರಾಸರಿ 25, ರಾಷ್ಟçದ ಸರಾಸರಿ 29 ಇದೆ. ಪಕ್ಕದ ಕೇರಳ ರಾಜ್ಯದಲ್ಲಿ 10 ಇದೆ. ತಾಯಿ ಮರಣದ ಸಂಖ್ಯೆಯು ಜಿಲ್ಲೆಯಲ್ಲಿ 1 ಲಕ್ಷಕ್ಕೆ 85 ಇದ್ದರೆ, ಅದು ರಾಜ್ಯದಲ್ಲಿ ಸರಾಸರಿ 108, ದೇಶದಲ್ಲಿ 134 ಇದೆ. ನೆರೆ ರಾಜ್ಯ ಕೇರಳದಲ್ಲಿ 100 ಇದೆ ಎಂದರು.

ಆರೋಗ್ಯ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಹೆರಿಗೆ ಮೊದಲು ಹಾಗೂ ನಂತರದ ದಿನಗಳಲ್ಲಿ ಉತ್ತಮ ಆರೋಗ್ಯ ಸೇವೆ ನೀಡಬೇಕು. ಆಗ ಮಾತ್ರ ತಾಯಿ ಮತ್ತು ಶಿಶು ಮರಣದ ಸಂಖ್ಯೆ  ಕಡಿಮೆಯಾಗುತ್ತದೆ ಎಂದ ಅವರು ಗರ್ಭಿಣಿಯರಿಗೆ ತಪ್ಪದೇ ತಾಯಿ ಕಾರ್ಡ್ಗಳನ್ನು ಪ್ರತಿಯೊಬ್ಬರಿಗೂ ವಿತರಿಸುವುದರೊಂದಿಗೆ ಅವರುಗಳಿಗೆ ಉತ್ತಮ ಆರೋಗ್ಯದಿಂದಿರಲು ಸೂಕ್ತ ಸಲಹೆಗಳನ್ನು ನೀಡುವುದರ ಜೊತೆಗೆ ಪೌಷ್ಟಿಕ ಆಹಾರಗಳನ್ನು ಒದಗಿಸಬೇಕು ಎಂದರು.

ಸಾಮಾನ್ಯವಾಗಿ ರಕ್ತ ಹೀನತೆ, ರಕ್ತಸ್ರಾವ, ತಾಯಿ ಮರಣ ಪ್ರಮಾಣಕ್ಕೆ ಪ್ರಮುಖ ಅಂಶವಾಗಿದೆ. ಇದರ ಬಗ್ಗೆ ಆರೋಗ್ಯ ಇಲಾಖೆಯವರು ಹೆಚ್ಚು ಒತ್ತು ನೀಡಬೇಕು ಎಂದ ಅವರು ಗರ್ಭೀಣಿ ಮಹಿಳೆಯರು ತಿಂಗಳ  ಚಿಕಿತ್ಸೆಗೆ ಬಂದಾಗ  ಅವರಿಗೆ  ಇತರ ಯಾವುದೇ ಕಾಯಿಲೆಗಳು ಇವೆ ಎಂಬುದರ ಬಗ್ಗೆ ಪರೀಕ್ಷೆ ಮಾಡುವುದರೊಂದಿಗೆ ಅವುಗಳನ್ನು ಗುರುತಿಸಿ, ಸೂಕ್ತ ಚಿಕಿತ್ಸೆ ನೀಡಬೇಕು ಎಂದರು.

ಜಿಲ್ಲೆಯಲ್ಲಿ ಪ್ರಸ್ತುತ ಸಾಲಿನಲ್ಲಿ 10 ಜನ ತಾಯಂದಿರು ಮರಣ ಹೊಂದಿದ್ದಾರೆ ಹಾಗೂ 30 ಶಿಶುಗಳ ಮರಣ ಸಂಭವಿಸಿರುತ್ತದೆ ಎಂದ ಅವರು 6 ಪ್ರಕರಣಗಳಲ್ಲಿ ಮರಣ ಸಂಭವಿಸುವ0ತಹ ಸಾಧ್ಯತೆ ಇರುವ ಗರ್ಭಿಣಿ ಮಹಿಳೆಯರಿಗೆ ಸೂಕ್ತ  ಚಿಕಿತ್ಸೆ ನೀಡಿ ಅವರ ಪ್ರಾಣ ಉಳಿಸಲಾಗಿದೆ ಎಂದರು.

ತಾಯಿ ಶಿಶು ಮರಣ ಸಂಭವಿಸಿದಾಗ ಮರಣೋತ್ತರ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಬೇಕು ಎಂದ ಅವರು ಹೊರ ಜಿಲ್ಲೆಯಿಂದ ಈ ಜಿಲ್ಲೆಗೆ ವೈದ್ಯಕೀಯ ಚಿಕಿತ್ಸೆಗೆ ಆಗಮಿಸಿ, ಮರಣ ಹೊಂದಿದಾಗ ಆ ಜಿಲ್ಲೆಯ ಜಿಲ್ಲಾ ಮಟ್ಟದ ಸಮಿತಿಯು ಈ ಬಗ್ಗೆ ಪರಿಶೀಲಿಸಲು ಪತ್ರವನ್ನು ಬರೆಯಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ, ಜಿಲ್ಲಾ ಸರ್ಜನ್ ಡಾ. ಮಧುಸೂದನ ನಾಯಕ್, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಎಂ.ಜಿ. ರಾಮ ಹಾಗೂ ಮತ್ತಿತರ ಆರೋಗ್ಯ ಅಧಿಕಾರಿಗಳು ಉಪಸ್ಥಿತರಿದ್ದರು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 day ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago