Featured

ಉಡುಪಿ : ಜಿಲ್ಲೆಯಲ್ಲಿ ತುಳುನಾಡಿನ ಧಾರ್ಮಿಕ ಆಚರಣೆಗೆ ಅವಕಾಶ ನೀಡಿ ಸಹಕರಿಸುವಂತೆ ಎಸ್ಪಿಗೆ ಯಶ್ ಪಾಲ್ ಮನವಿ – vishwanews24

ಉಡುಪಿ : ಜಿಲ್ಲೆಯಲ್ಲಿ ತುಳುನಾಡಿನ ಧಾರ್ಮಿಕ ಆಚರಣೆಗೆ ಅವಕಾಶ ನೀಡಿ ಸಹಕರಿಸುವಂತೆ ಎಸ್ಪಿ ಹಾಗೂ ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲೆಯಲ್ಲಿ ತುಳುನಾಡಿನ ಧಾರ್ಮಿಕ ಆಚರಣೆ ಹಾಗೂ ಜನಜೀವನದ ಸಂಸ್ಕೃತಿಯ ಭಾಗವಾಗಿ ಗುರುತಿಸಿಕೊಂಡಿರುವ ಕಂಬಳ, ಕೋಳಿ ಪಡೆ, ಯಕ್ಷಗಾನ, ನೇಮೋತ್ಸವ, ನಾಗಮಂಡಲ ಮೊದಲಾದ ಕಾರ್ಯಕ್ರಮಗಳ ಆಯೋಜನೆ ಸಂದರ್ಭದಲ್ಲಿ ಜಿಲ್ಲಾಡಳಿತ ಕಠಿಣ ನಿಯಮಾವಳಿಗಳನ್ನು ರೂಪಿಸಿರುವುದರಿಂದ ಧಾರ್ಮಿಕ ಕಾರ್ಯಕ್ರಮಗಳ ಆಯೋಜನೆಗೆ ಅನಾನುಕೂಲವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ಬಗ್ಗೆ ನಿರ್ಧಾರವನ್ನು ಪುನರ್ ಪರಿಶೀಲಿಸಿ ಸಹಕರಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭೇಟಿಯಾಗಿ ಮನವಿ ಮಾಡಿದರು.

ದೈವಾರಾಧನೆಯ ಚೌಕಟ್ಟಿನಲ್ಲಿ ದೈವಗಳಿಗೆ ರಕ್ತಹಾರದ ಕಲ್ಪನೆಯಲ್ಲಿ ಹಲವು ದೈವಸ್ಥಾನ, ಮಂದಿರಗಳಲ್ಲಿ ಹಲವಾರು ದಶಕಗಳಿಂದ ಕೋಳಿಪಡೆ ಆಯೋಜಿಸುವ ಪದ್ಧತಿ ಇದೆ, ಹಾಗೂ ಜಿಲ್ಲೆಯಾದ್ಯಂತ ಯಕ್ಷಗಾನ, ನೇಮೋತ್ಸವ ಕಾರ್ಯಕ್ರಮಗಳು ಈ ಹಿಂದಿನಿಂದಲೂ ನಿರಂತರವಾಗಿ ನಡೆಯುತ್ತಿದ್ದು ಈ ಬಗ್ಗೆ ಜಿಲ್ಲಾಡಳಿತ ತುಳುನಾಡಿನ ಸಾಂಸ್ಕೃತಿಕ ಹಿನ್ನೆಲೆ, ಧಾರ್ಮಿಕ ನಂಬಿಕೆಗಳಿಗೆ ಪೂರಕವಾಗಿ ಅವಕಾಶ ನೀಡಿ ಸಹಕರಿಸಬೇಕು.

ತುಳುನಾಡಿನಲ್ಲಿ ಧಾರ್ಮಿಕ ಆಚರಣೆಗಳನ್ನು ಶ್ರದ್ದಾ ಭಕ್ತಿಯಿಂದ ನಡೆಸಿಕೊಂಡು ಬರುವ ಭಕ್ತರಿಗೆ ಭಾವನಾತ್ಮಕ ವಿಷಯವಾಗಿದ್ದು ಈ ಹಿಂದಿನಂತೆ ಆಚರಣೆಗೆ ಅವಕಾಶ ನೀಡಬೇಕು ಈ ಬಗ್ಗೆ ಸಾರ್ವಜನಿಕರ ಪರವಾಗಿ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೂ ಮನವಿ ಮಾಡುವುದಾಗಿ ತಿಳಿಸಿದರು.
ಮುಂದಿನ ದಿನಗಳಲ್ಲಿ ಧಾರ್ಮಿಕ ಆಚರಣೆಗೆ ಜಿಲ್ಲಾಡಳಿತ ಸಹಕಾರ ನೀಡದಿದ್ದಲ್ಲಿ ಜಿಲ್ಲೆಯ ಸಮಸ್ತ ಭಕ್ತರು, ದೇವಸ್ಥಾನದ ಪ್ರಮುಖರು, ಸಾರ್ವಜನಿಕರು ಪಕ್ಷಾತೀತವಾಗಿ ತುಳುನಾಡಿನ ಆಚರಣೆಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಹೋರಾಟ ನಡೆಸುವ ಸನ್ನಿವೇಶ ನಿರ್ಮಾಣವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಉಡುಪಿ ನಗರಸಭೆ ಅಧ್ಯಕ್ಷರಾದ ಶ್ರೀ ಪ್ರಭಾಕರ ಪೂಜಾರಿ, ಮುಖಂಡರಾದ ಮಟ್ಟಾರು ರತ್ನಾಕರ ಹೆಗ್ಡೆ, ಹರಿಮಕ್ಕಿ ರತ್ನಾಕರ ಶೆಟ್ಟಿ, ಶ್ರೀ ಸುರೇಶ್ ನಾಯಕ್ ಕುಯಿಲಾಡಿ, ಶ್ರೀ ದಿನಕರ ಬಾಬು, ಕಿರಣ್ ಕುಮಾರ್ ಬೈಲೂರು, ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಶ್ರೀ ದಿನೇಶ್ ಅಮೀನ್, ಶ್ರೀ ರಾಜೀವ್‌ ಕುಲಾಲ್, ಶ್ರೀ ಬಾಲಕೃಷ್ಣ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

 

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

9 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

10 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

10 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

10 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

10 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

11 hours ago