Featured

ಉಡುಪಿ : ಜಿಲ್ಲೆಯಲ್ಲಿ ದಸರಾ ಆಚರಣೆಗೆ ಮಾರ್ಗಸೂಚಿ ಬಿಡುಗಡೆ  – Vishwanews24

ಉಡುಪಿ: ಜಿಲ್ಲೆಯಲ್ಲಿ ದಸರಾ ಆಚರಣೆಗೆ ಮಾರ್ಗಸೂಚಿ ಬಿಡುಗಡೆ  – Vishwanews24

ಉಡುಪಿ: ಜಿಲ್ಲೆಯಲ್ಲಿ ದಸರಾ ಆಚರಣೆಗೆ ಜಿಲ್ಲಾಧಿಕಾರಿ ಕೂರ್ಮ ರಾವ್‌ ಎಂ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ.

1. ದಿನಾಂಕ: 07-10-2021 ರಿಂದ ದಿನಾಂಕ: 15.10.2021 ರವರೆಗೆ ನಡೆಯುವ ದಸರಾ ಆಚರಣೆಯ ಕಾರ್ಯಕ್ರಮಗಳಲ್ಲಿ 400 ಕ್ಕಿಂತ ಹೆಚ್ಚು ಜನರು ಒಮ್ಮೆಲೆ ಸೇರುವಂತಿಲ್ಲ ಹಾಗೂ ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು.

2. ದಸರಾ ಆಚರಣೆಯಲ್ಲಿ ಸಾಮಾಜಿಕ ಅಂತರವಿಲ್ಲದೆ ನಡೆಸಲಾಗುವ ಎಲ್ಲಾ ಕಾರ್ಯಕ್ರಮಗಳನ್ನುನಿಷೇಧಿಸಲಾಗಿದೆ.

3. ದೇವಾಲಯದಲ್ಲಿ ಕರ್ತವ್ಯ ನಿರ್ವಹಿಸುವ ಆಡಳಿತ ಮಂಡಳಿ ಅರ್ಚಕರು/ ಸಿಬ್ಬಂದಿಗಳು ಸೇರಿದಂತೆ ಎಲ್ಲಾ ವರ್ಗದವರು ಕೋವಿಡ್ ಸಮುಚಿತ ವರ್ತನೆಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು.

4. ಕಾರ್ಯಕ್ರಮದ ಆಯೋಜಕರು /ದೇವಸ್ಥಾನದ ಆಡಳಿತಾಧಿಕಾರಿಯವರು ಕಾರ್ಯಕ್ರಮ ನಡೆಯುವಲ್ಲಿ ಸ್ಯಾನಿಟೈಸರ್, ಮಾಸ್ಕ್ ಬಳಕೆ , ಸಾಮಾಜಿಕ ಅಂತರ ಪಾಲನೆಗೆ ಕ್ರಮಕೈಗೊಳ್ಳತಕ್ಕದ್ದು .

5. ಕೋವಿಡ್-19 ಸಾಂಕ್ರಾಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು ತಪ್ಪದೇ ಕಟ್ಟುನಿಟ್ಟಾಗಿ ಪಾಲಿಸತಕ್ಕದು. ಅಲ್ಲದೇ ಸಾರ್ವಜನಿಕರ ಆರೋಗ್ಯದ ದೃಷ್ಠಿಯಿಂದ ಆರೋಗ್ಯಇಲಾಖೆ,ಪೊಲೀಸ್ ಇಲಾಖೆ,ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಸ್ಥಳೀಯಸಂಸ್ಥೆ/ಪ್ರಾಧಿಕಾರಗಳಿಂದ ಹೊರಡಿಸಲಾಗುವ ಎಲ್ಲಾ ಆದೇಶ/ನಿರ್ದೇಶನ ಹಾಗೂ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು.

ಆದುದರಿಂದ ಸರಕಾರದ ಆದೇಶದಂತೆ ದಸರಾ ಆಚರಣೆಯನ್ನು ಕೋವಿಡ್ ಪಾಸಿಟಿವಿಟಿ ದರದ ಏರಿಕೆಗೆ ಕಾರಣವಾಗದಂತೆ ಅತ್ಯಂತ ಸರಳವಾಗಿ ಮತ್ತು ಭಕ್ತಿಪೂರ್ವಕವಾಗಿ ಕೋವಿಡ್-19 ಸಮುಚಿತ ವರ್ತನೆಗಳನ್ನು ಕಟ್ಟು ನಿಟ್ಟಾಗಿ ಅನುಸರಿಸಿಕೊಂಡು ಆಚರಿಸುವಂತೆ ಸಂಬಂಧಪಟ್ಟ ಎಲ್ಲಾ ಆಯೋಜಕರಲ್ಲಿ ಹಾಗೂ ಸಾರ್ವಜನಿಕರಲ್ಲಿ ಕೋರಿದ್ದಾರೆ.

ಉಡುಪಿ : ಪ್ರಿಯಾಂಕರನ್ನು ಬಂಧ ಮುಕ್ತ ಗೊಳಿಸದಿದ್ದರೆ ಉಡುಪಿ ಜಿಲ್ಲಾ ಕಾಂಗ್ರೆಸ್‌ನಿಂದ ಉಗ್ರ ಹೋರಾಟ – Vishwanews24

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

15 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago