ಉಡುಪಿ : ಜಿಲ್ಲೆಯಲ್ಲಿ ಪತ್ತೆಯಾದ ಮಂಗನ ಕಾಯಿಲೆ ಪ್ರಕರಣ – Vishwanews24
ಉಡುಪಿ : ಜಿಲ್ಲೆಯಲ್ಲಿ ಪತ್ತೆಯಾದ ಮಂಗನ ಕಾಯಿಲೆ ಪ್ರಕರಣ
ಉಡುಪಿ : ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಾಗಿ ಕಂಡು ಬರುತ್ತಿದ್ದ ಮಂಗನ ಕಾಯಿಲೆ ಪ್ರಕರಣ ಇದೀಗ ಉಡುಪಿ ಜಿಲ್ಲೆಯಲ್ಲಿ ಕಂಡು ಬಂದಿದೆ. ಶುಕ್ರವಾರ ಶಿವಮೊಗ್ಗದಲ್ಲಿ 1, ಚಿಕ್ಕಮಗಳೂರು 4, ಉಡುಪಿಯಲ್ಲಿ 1 ಪಾಸಿಟಿವ್ ಬಂದಿದೆ.
ವಂಡ್ಸೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 58 ವರ್ಷದ ಮಹಿಳೆಗೆ ಮಂಗನ ಕಾಯಿಲೆ ದೃಢಪಟ್ಟಿದೆ. ಉಡುಪಿಯಲ್ಲಿ ಈ ವರ್ಷದ ಮೊದಲ ಪ್ರಕರಣ ಇದಾಗಿದೆ. ಈವರೆಗೆ 117 ಮಂದಿಗೆ ಪಾಸಿಟಿವ್ ಬಂದಿದ್ದು, 82 ಮಂದಿ ಗುಣಮುಖರಾಗಿ ಮೂವರು ಮೃತ ಪಟ್ಟಿದ್ದಾರೆ. 19 ಸಕ್ರಿಯ ಪ್ರಕರಣಗಳಿವೆ. ವಂಡ್ಸೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 58 ವರ್ಷದ ಮಹಿಳೆಗೆ ಮಂಗನ ಕಾಯಿಲೆ ದೃಢಪಟ್ಟಿದೆ.
ಉಡುಪಿ : ಸಿದ್ಧರಾಮಯ್ಯ ಸರಕಾರದಲ್ಲಿ ರಾಮ ಭಕ್ತರಿಗೆ ರಕ್ಷಣೆ ಇಲ್ಲ: ಯಶ್ಪಾಲ್ ಸುವರ್ಣ ಆಕ್ರೋಶ – Vishwanews24
ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಎಫ್ಡಿ ಸೋಂಕು ಹೇಗೆ ತಗಲಿತು ಎಂಬ ಬಗ್ಗೆ ಈ ಭಾಗದ ಆಸುಪಾಸಿನಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಕುಂದಾಪುರ ಭಾಗದಲ್ಲಿ ಹೆಚ್ಚಿನ ತಪಾಸಣೆ ಮಾಡಲಾಗುತ್ತಿದೆ. 2019ರಲ್ಲಿ ಒಂದು ಪ್ರಕ ರಣ ಕಂಡುಬಂದಿತ್ತು. ಆ ಬಳಿಕ ಯಾವುದೇ ಪ್ರಕರಣಗಳು ಕಂಡುಬಂದಿರಲಿಲ್ಲ ಎಂದು ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.
