ಉಡುಪಿ ಜಿಲ್ಲೆಯಲ್ಲಿ ಮಧ್ಯರಾತ್ರಿ 12.30 ಗಂಟೆಯವರೆಗೆ ಮಾತ್ರ ಹೊಸ ವರ್ಷಾಚರಣೆಗೆ ಅವಕಾಶ : SP ಡಾ. ಅರುಣ್ ಕುಮಾರ್ – vishwanews24
ಉಡುಪಿಯಲ್ಲಿ ನ್ಯೂ ಇಯರ್ ಸೆಲೆಬ್ರೇಷನ್ಗೆ ಷರತ್ತು
ಮಧ್ಯರಾತ್ರಿ 12.30 ಗಂಟೆಯವರೆಗೆ ಹೊಸ ವರ್ಷಾಚರಣೆಗೆ ಅವಕಾಶ ..
ರಾತ್ರಿ 10 ಗಂಟೆಯವರೆಗೆ ಮಾತ್ರ ಧ್ವನಿವರ್ಧಕ ಬಳಕೆಗೆ ಅವಕಾಶ..: SP ಡಾ. ಅರುಣ್ ಕುಮಾರ್
ಉಡುಪಿ: ಮಧ್ಯರಾತ್ರಿ 12.30 ಗಂಟೆಯವರೆಗೆ ಮಾತ್ರ ಉಡುಪಿ ಜಿಲ್ಲೆಯಲ್ಲಿ ಹೊಸ ವರ್ಷಾಚರಣೆಗೆ ಅವಕಾಶ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್ ಹೇಳಿದ್ದಾರೆ.
ಹೊಸ ವರ್ಷ ಆಚರಣೆಯ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಇಂದು ಮಾಹಿತಿ ನೀಡಿರುವ ಎಸ್ಪಿ ಡಾ. ಅರುಣ್, ರಾತ್ರಿ 10 ಗಂಟೆಯವರೆಗೆ ಮಾತ್ರ ಧ್ವನಿವರ್ಧಕ ಬಳಕೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.
ಸಂಭ್ರಮಾಚರಣೆಯ ಬಳಿಕ ಅಪಘಾತಗಳ ಸಂಖ್ಯೆಯಲ್ಲಿ ಹೆಚ್ಚಳವಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಕಡ್ಡಾಯವಾಗಿ ದ್ವಿಚಕ ವಾಹನ ಸವಾರರು ಹೆಲ್ಮಟ್ ಮತ್ತು ಕಾರು ಸವಾರರು ಸೀಟ್ ಬೆಲ್ಟ್ ಧರಿಸಬೇಕು ಎಂದು ಎಸ್ಪಿ ಸೂಚನೆ ನೀಡಿದ್ದಾರೆ.
ಕೇರಳ ಮೂಲದ ನರ್ಸ್‌ಗೆ ಯೆಮನ್‌ನಲ್ಲಿ ಮರಣದಂಡನೆ; ನೆರವಿನ ಹಸ್ತ ಚಾಚಿದ ಭಾರತ – vishwanews24
