Featured

ಉಡುಪಿ : ಜಿಲ್ಲೆಯಲ್ಲಿ  ಮಾರ್ಚ್ 1 ರಿಂದ ತುರ್ತು ಸೇವೆ ಹೊರತುಪಡಿಸಿ ಇತರೇ ಸರ್ಕಾರಿ ಸೇವೆ ಸ್ಥಗಿತ – Vishwanews24

ಉಡುಪಿ : ಜಿಲ್ಲೆಯಲ್ಲಿ  ಮಾರ್ಚ್ 1 ರಿಂದ ತುರ್ತು ಸೇವೆ ಹೊರತುಪಡಿಸಿ ಇತರೇ ಸರ್ಕಾರಿ ಸೇವೆ ಸ್ಥಗಿತ

ಜಿಲ್ಲೆಯಲ್ಲಿ ಮಾರ್ಚ್ ೧ ರಿಂದ ಸರ್ಕಾರಿ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ ನಡೆಯಲಿದ್ದು, ಈ ಸಂದರ್ಭದಲ್ಲಿ ತುರ್ತು ವೈದ್ಯಕೀಯ ಸೇವೆ ಹೊರತುಪಡಿಸಿ ಇತರೆ ಎಲ್ಲಾ ಸರ್ಕಾರಿ ಸೇವೆಗಳು ಸ್ಥಗಿತಗೊಳ್ಳಲಿವೆ ಎಂದು ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ಆಧ್ಯಕ್ಷ ಅಂಪಾರು ದಿನಕರ ಶೆಟ್ಟಿ ಹೇಳಿದರು.

ಅವರು ಇಂದು ಉಡುಪಿ ತಾಲೂಕು ಪಂಚಾಯತ್ ಸಭಾ ಭವನದಲ್ಲಿ ನಡೆದ, ಜಿಲ್ಲೆಯಲ್ಲಿ ಮಾರ್ಚ್ ೧ ರಿಂದ ನಡೆಯುವ ನೌಕರರ ಅರ್ನಿದಿಷ್ಟಾವಧಿ ಮುಷ್ಕರದ ರೂಪು ರೇಷೆ ಕುರಿತ , ಜಿಲ್ಲೆಯ ಸರಕಾರಿ ನೌಕರರ ವಿವಿಧ ವೃಂದ ಮತ್ತು ಸಂಘಟನೆಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಸಭೆಯಲ್ಲಿ ಮಾತನಾಡಿದರು.

ಫೆಬ್ರವರಿ 21ರಂದು ಜರುಗಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲೆ ತಾಲ್ಲೂಕು ಯೋಜನಾ ಶಾಖೆಗಳ ಚುನಾಯಿತ ಪ್ರತಿನಿಧಿಗಳ ಹಾಗೂ ವೃಂದ ಸಂಘಗಳ ಅಧ್ಯಕ್ಷರು-ಪದಾಧಿಕಾರಿಗಳ “ತುರ್ತು ರಾಜ್ಯ ಕಾರ್ಯಕಾರಿಣಿ ಸಭೆ” ಯಲ್ಲಿ ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವಂತೆ ಸರ್ಕಾರಕ್ಕೆ ಆಗ್ರಹಪಡಿಸಿ ದಿನಾಂಕ. ೧-೩-೨೦೨೩ ರಿಂದ ರಾಜ್ಯದ ಸಮಸ್ತ ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ‘ಅನಿರ್ಧಿಷ್ಟಾವಧಿ ಮುಷ್ಕರ’ಕ್ಕೆ ಕರೆ ನೀಡಲಾಗಿದೆ ಎಂದರು.

ಮುಷ್ಕರದ ಸಂದರ್ಭದಲ್ಲಿ ಎಲ್ಲಾ ನೌಕರರು ಕಚೇರಿಗೆ ಗೈರು ಹಾಜರಾಗಬೇಕು, ಸರ್ಕಾರದ ಯಾವುದೇ ಒತ್ತಡ, ಬೆದರಿಕೆಗಳಿಗೆ ಮಣಿಯದೇ , ಅತ್ಯಂತ ದಿಟ್ಟವಾಗಿ , ಬೇಡಿಕೆಗಳು ಸಂಪೂರ್ಣ ಈಡೇರುವವರೆಗೂ ಮುಷ್ಕರದಲ್ಲಿ ಪಾಲ್ಗೊಳ್ಳಬೇಕು ಎಂದರು.

ರಾಜ್ಯದ ೨೦೨೩-೨೪ ನೇ ಸಾಲಿನ ಆಯ-ವ್ಯಯದಲ್ಲಿ ಸರ್ಕಾರಿ ನೌಕರರ ವೇತನ-ಭತ್ಯೆಗಳ ಪರಿಷ್ಕರಣೆಗೆ ಸಂಬAಧಿಸಿದAತೆ ಯಾವುದೇ ಪ್ರಸ್ತಾಪ ಮಾಡದಿರುವುದು ಸಹಜವಾಗಿಯೇ ನೌಕರರಲ್ಲಿ ನಿರಾಶೆ ಮೂಡಿಸಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರಿ ನೌಕರರ ವೇತನದಲ್ಲಿ ಶೇ.೨೫ ಕ್ಕೂ ಅಧಿಕ ವ್ಯತ್ಯಾಸವಿದ್ದು ದೇಶದ ಇತರೇ ರಾಜ್ಯಗಳಿಗೆ ಹೋಲಿಸಿದ್ದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳು ಅತ್ಯಂತ ಕಡಿಮೆ ಇವೆ ಎಂದರು.

ನೌಕರರ ಪ್ರಮುಖ ಬೇಡಿಕೆಯಾದ, ರಾಜ್ಯ ಸರ್ಕಾರಿ ನೌಕರರು ಹಾಗೂ ಸರ್ಕಾರದ ಅಧೀನಕ್ಕೊಳಪಡುವ ನೌಕರರಿಗೆ ೭ನೇ ವೇತನ ಆಯೋಗದಿಂದ ಶೀಘ್ರವಾಗಿ ಮಧ್ಯಂತರ ವರದಿಯನ್ನು ಪಡೆದು, ಚುನಾವಣೆ ನೀತಿ ಸಂಹಿತೆಜಾರಿಗೆ ಮೊದಲು ಶೇ. ೪೦% ಫಿಟ್‌ಮೆಂಟ್ ಸೌಲಭ್ಯವನ್ನು ದಿನಾಂಕ: ೦೧-೦೭-೨೦೨೨ರಿಂದ ಜಾರಿಗೆ ಬರುವಂತೆ ಸರ್ಕಾರಿಆದೇಶ ಹೊರಡಿಸುವುದು. ಮತ್ತು ರಾಜ್ಯದಲ್ಲಿ ಎನ್.ಪಿ.ಎಸ್. ಯೋಜನೆಯನ್ನು ರದ್ದುಪಡಿಸಿ ಹಳೇ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಕುರಿತಂತೆ ಸರಕಾರದಿಂದ ಸ್ಪಷ್ಟ ಆದೇಶ ದೊರೆಯುವ ವರೆಗೂ ಮುಷ್ಕರ ಮುಂದುವರೆಯಲಿದೆ ಎಂದರು.
ಸಭೆಯಲ್ಲಿ ಶಿಕ್ಷಣ, ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ದಿ ಇಲಾಖೆ, ಆರೋಗ್ಯ ಇಲಾಖೆ ,ಅರಣ್ಯ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಗಳ ಪದಾಧಿಕಾರಿಗಳು ಮುಷ್ಕರಕ್ಕೆ ಸಂಪೂರ್ಣವಾಗಿ ಬೆಂಬಲ ನೀಡುವುದರ ಜೊತೆಗೆ ಇಲಾಖೆಯ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಸರಕಾರಿ ನೌಕರರ ಸಂಘದ ಕಾರ್ಯದರ್ಶಿ ಉದಯ ಕುಮಾರ್ ಶೆಟ್ಟಿ. ನಿಕಟಪೂರ್ವ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್ ಹಾಗೂ ಜಿಲ್ಲೆಯ ಎಲ್ಲಾ ನೌಕರರ ವೃಂದ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

5 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

6 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

6 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

6 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

7 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

8 hours ago