Featured

ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ ಸಂಜೆ 7 ರಿಂದ ಸೋಮವಾರ ಬೆಳಿಗ್ಗೆ 5 ರ ವರೆಗೆ ವಾರಾಂತ್ಯ ಕರ್ಫ್ಯೂ ಜಾರಿ : ಜಿಲ್ಲಾಧಿಕಾರಿ -Vishwanews24

ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ ಸಂಜೆ 7 ರಿಂದ ಸೋಮವಾರ ಬೆಳಿಗ್ಗೆ 5 ರ ವರೆಗೆ ವಾರಾಂತ್ಯ ಕರ್ಫ್ಯೂ ಜಾರಿ : ಜಿಲ್ಲಾಧಿಕಾರಿ -Vishwanews24

ಉಡುಪಿ: ಜಿಲ್ಲೆಯಲ್ಲಿ ಲಾಕ್ಡೌನ್ ನಿರ್ಬಂಧಗಳನ್ನು ಸಡಿಲಗೊಳಿಸಿದ ಬಳಿಕ ಮೊದಲ ಬಾರಿ ವಾರಾಂತ್ಯದ ಕರ್ಫ್ಯೂ ಶುಕ್ರವಾರ ಸಂಜೆ 7 ರಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಜಾರಿಗೊಳ್ಳಲಿದ್ದು, ಈ ವೇಳೆ ಅಗತ್ಯ ಮತ್ತು ತುರ್ತು ಚಟುವಟಿಕೆಗಳನ್ನು ಹೊರತು ಪಡಿಸಿ ಉಳಿದೆಲ್ಲಾ ಚಟುವಟಿಕೆಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಹಾರ, ದಿನಸಿ, ಹಣ್ಣುಗಳು ಮತ್ತು ತರಕಾರಿಗಳು, ಮಾಂಸ ಮತ್ತು ಮೀನು, ಡೈರಿ ಮತ್ತು ಹಾಲಿನ ಕೇಂದ್ರ ಹಾಗೂ ಪ್ರಾಣಿಗಳ ಮೇವನ್ನು ವ್ಯಾಪಾರ ಮಾಡುವ ಅಂಗಡಿಗಳಿಗೆ ಬೆಳಗೆ, 6 ರಿಂದ ಅಪರಾಹ 2 ರವರೆಗೆ ಕಾರ್ಯನಿರ್ವಹಿಸಲು ಅವಕಾಶವಿರುತ್ತದೆ. ಬೀದಿ ಬದಿ ವ್ಯಾಪಾರಿ ಗಳು ಸಹ ಬೆಳಗೆ, 6 ರಿಂದ ಅಪರಾಹ, 2 ರವರೆಗೆ ಕಾರ್ಯನಿರ್ವಹಿಸಬಹುದು. ಆದರೆ ಯಾವುದೇ ತಯಾರಿಸಿದ ಆಹಾರ, ಪಾನಿಪುರಿ, ಚಾಟ್ ಮಾರಲು ಅವಕಾಶವಿಲ್ಲ.

ಸಾರ್ವಜನಿಕ ವಿತರಣಾ ವ್ಯವಸ್ಥೆ ಸಹ ಇದೇ ಅವಧಿಗೆ ಕಾರ್ಯನಿರ್ವಹಿಸಲು ಅವಕಾಶವಿದೆ. ಸ್ವತಂತ್ರ ಮದ್ಯದಂಗಡಿಗಳು ಮತ್ತು ಮಳಿಗೆಗಳು ಈ ಅವಧಿಯಲ್ಲಿ ಪಾರ್ಸೆಲ್ಗಳನ್ನು ಮಾತ್ರ ನೀಡಬೇಕು. ಹೋಮ್ ಡೆಲಿವರಿ ಸೇವೆಗಳು ದಿನ 24 ಗಂಟೆ ಕಾರ್ಯನಿರ್ವಹಿಸಬಹುದು. ರೆಸ್ಟೋರೆಂಟ್ಗಳು, ತಿನಿಸು ಕೇಂದ್ರಗಳಲ್ಲಿ ಆಹಾರವನ್ನು ಪಾರ್ಸೆಲ್ ಕೊಂಡೊಯ್ಯಬಹುದು.

ಬಸ್ ಸೇವೆಗಳು, ರೈಲುಗಳು ಮತ್ತು ವಿಮಾನ ಪ್ರಯಾಣಿಕರಿಗೆ ನಿಲ್ದಾಣಗಳಿಗೆ ತೆರಳಲು ಅನುಮತಿ ಇದೆ. ಬಸ್ ನಿಲ್ದಾಣಗಳಿಂದ ಹೊರಡುವ ಸಾರ್ವಜನಿಕ ಸಾರಿಗೆ ವಾಹನ, ಖಾಸಗಿ ವಾಹನಗಳ, ಟ್ಯಾಕ್ಸಿಗಳ ಓಡಾಟಕ್ಕೆ ಅನುಮತಿ ಇದೆ. ಈಗಾಗಲೇ ನಿಗದಿಯಾಗಿರುವ ಮದುವೆಗೆ 40 ಮಂದಿಯ ಭಾಗವಹಿಸುವಿಕೆ ಯೊಂದಿಗೆ ಸರಳವಾಗಿ ಮನೆಯಲ್ಲಿ ನಡೆಸಲು ಅನುಮತಿ ಇದೆ. ಅದೇ ರೀತಿ ಶವಸಂಸ್ಕಾರವನ್ನೂ ಐದು ಮಂದಿಯ ಪಾಲ್ಗೊಳ್ಳುವಿಕೆಯೊಂದಿಗೆ ನಡೆಸಬಹುದು.

ಎಲ್ಲಾ ಕೇಂದ್ರ ಮತ್ತು ರಾಜ್ಯ ಸರಕಾರಗಳ ಕಚೇರಿಗಳು, ಅವುಗಳ ಸ್ವಾಯತ್ತ ಸಂಸ್ಥೆಗಳು ಹಾಗೂ ಅದರಲ್ಲಿ ದುಡಿಯುವ ಅಧಿಕಾರಿಗಳು ಸಿಬ್ಬಂದಿಗಳ ಸಂಚಾರಕ್ಕೆ ಅನುಮತಿ ಇದೆ, ತುರ್ತು ಮತ್ತು ಅಗತ್ಯ ಸೇವೆಗಳ ಕೈಗಾರಿಕೆಗಳು, ಸಂಸ್ಥೆಗಳಿಗೆ ಕಾರ್ಯನಿರ್ವಹಿಸಲು ಅನುಮತಿ ಇದೆ. ರೋಗಿಗಳು, ಅವರ ಪರಿಚಾರಕರು, ಲಸಿಕೆ ತೆಗೆದುಕೊಳ್ಳುವವರು ಅಗತ್ಯ ದಾಖಲೆಗಳೊಂದಿಗೆ ಸಂಚರಿಸಲು ಅವಕಾಶವಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Vishwa News 24

Recent Posts

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

1 hour ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

1 hour ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

1 hour ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

2 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

2 hours ago

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago