ಉಡುಪಿ: ಉಡುಪಿಯ ಅಜ್ಜರಕಾಡು ಮಹಾತ್ಮ ಗಾಂಧೀ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮೀನುಗಾರಿಕೆ ,ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಧ್ವಜಾರೋಹಣ ನೆರವೇರಿಸಿ, ಮಹಾತ್ಮ ಗಾಂಧೀ ಮತ್ತು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ , ಗಣರಾಜ್ಯೋತ್ಸವದ ಸಂದೇಶ ನೀಡಿದರು.
ಪೊಲೀಸ್, ಕರಾವಳಿ ಕಾವಲು ಪಡೆ, ಅಗ್ನಿಶಾಮಕ, ಗೃಹ ರಕ್ಷಕ, ಅಬಕಾರಿ ,ಅರಣ್ಯ ಮತ್ತು ಕಾಲೇಜು ಎನ್.ಸಿ.ಸಿ ತಂಡಗಳಿAದ ಆಕರ್ಷಕ ಪಥ ಸಂಚಲನ ನಡೆಯಿತು.
ಸಾಧನೆ ಮಾಡಿದ ವಿಕಲಚೇತನ ಮಕ್ಕಳಾದ ಶ್ರೀಕೃಷ್ಣ ಮತ್ತು ಅರ್ಚನಾ ಅವರನ್ನು ಸನ್ಮಾನಿಸಲಾಯಿತು. ಜಿಲ್ಲಾ ಮತ್ತು ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಯನ್ನು ಕೃಷಿಕರಿಗೆ ನೀಡಲಾಯಿತು. ಕಾರ್ಮಿಕ ಇಲಾಖೆಯ ಆಶಾದೀಪ ಯೋಜನೆಯಡಿ ಚೆಕ್ ವಿತರಿಸಲಾಯಿತು.
ಉಡುಪಿ ಶಾಸಕ ಕೆ. ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಕರಾವಳಿ ಕಾವಲು ಪಡೆಯ ಎಸ್ಪಿ ಅಂಶುಕುಮಾರ್ , ನಗರಸಭಾ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್ ಉಪಸ್ಥಿತರಿದ್ದರು.
ಕೋವಿಡ್ 19 ಹಿನ್ನಲೆಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಯೂಟ್ಯೂಬ್ ಮತ್ತು ಸ್ಥಳೀಯ ಕೇಬಲ್ ಟಿವಿಯಲ್ಲಿ ನೇರ ಪ್ರಸಾರ ವ್ಯವಸ್ಥೆ ಮಾಡಲಾಗಿತ್ತು. ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಸ್ವಾಗತಿಸಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.
ರೋಷನ್ ಕುಮಾರ್ ಶೆಟ್ಟಿ ವಂದಿಸಿದರು. ಪ್ರಶಾಂತ್ ಶೆಟ್ಟಿ ಹಾವಂಜೆ ನಿರೂಪಿಸಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…