Featured

ಉಡುಪಿ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡ್ರಗ್ಸ್ ಪ್ರಕರಣ ಇದು ಆತಂಕದ ವಿಚಾರ : ಎಸ್ಪಿ ಕಳವಳ – vishwanews24

ಉಡುಪಿ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡ್ರಗ್ಸ್ ಪ್ರಕರಣ ಇದು ಆತಂಕದ ವಿಚಾರ : ಎಸ್ಪಿ‌ ಕಳವಳ

ಉಡುಪಿ: ಕರ್ನಾಟಕ ರಾಜ್ಯದಲ್ಲಿ ಬೆಂಗಳೂರು ಸಿಟಿಯಲ್ಲಿ ಅತೀ ಹೆಚ್ಚು ಡ್ರಗ್ಸ್ ಕೇಸ್ ಪತ್ತೆಯಾಗುತ್ತಿದೆ. ನಂತರದ ಸ್ಥಾನದಲ್ಲಿ‌ ಮಂಗಳೂರು ಸಿಟಿ ಇದೆ. ಮೂರನೇ ಸ್ಥಾನದಲ್ಲಿ ಉಡುಪಿ ಜಿಲ್ಲೆ ಇದೆ. ಇದು ನಿಜಕ್ಕೂ ಆತಂಕದ ವಿಚಾರ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಕಳವಳ ವ್ಯಕ್ತಪಡಿಸಿದರು.

ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಬನ್ನಂಜೆ ನಾರಾಯಣಗುರು ಸಭಾಂಗಣದಲ್ಲಿ ಗುರುವಾರ ನಡೆದ ಶಾಲಾ ಕಾಲೇಜುಗಳಲ್ಲಿ ಮಾದಕದ್ರವ್ಯ ವಿರೋಧಿ ಮತ್ತು ಜಾಗೃತಿ ಸಮಿತಿ ರಚನೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವೈಜ್ಞಾನಿಕ, ದೇವಾಲಯಗಳ ನಗರಿ ಎಂದೇ ಕರೆಯಲ್ಪಡುವ ಉಡುಪಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಡ್ರಗ್ಸ್ ಪ್ರಕರಣಗಳು ದಾಖಲಾಗುತ್ತಿದೆ. ಕಾಲೇಜಿಗೆ ಹೋಗುವ ಮಕ್ಕಳಲ್ಲೇ ಹೆಚ್ಚು ಕೇಸ್ ಪತ್ತೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸುಮಾರು ಸಮಸ್ಯೆಗಳು ನಮಗೆ ಕಂಡುಬಂದಿದೆ.

ಈ ಸಮಸ್ಯೆಯನ್ನು ಸರಿಪಡಿಸುವ ಉದ್ದೇಶದಿಂದ ಶಾಲಾ ಕಾಲೇಜುಗಳಲ್ಲಿ ಮಾದಕದ್ರವ್ಯ ವಿರೋಧಿ ಮತ್ತು ಜಾಗೃತಿ ಸಮಿತಿ ರಚನೆ ಮಾಡಿದ್ದೇವೆ. ಕಾಲೇಜು ಪ್ರಾಂಶುಪಾಲರು ಪೊಲೀಸರೊಂದಿಗೆ ನಿರಂತರ ಸಂಪರ್ಕದಲ್ಲಿ ಇದ್ದಾರೆ ಎಂಬ ವಿಷಯ ಮಕ್ಕಳಿಗೆ ಗೊತ್ತಾದರೆ ಅವರಲ್ಲಿ ಒಂದು ರೀತಿಯ ಭಯ ಬರುತ್ತದೆ‌. ಡ್ರಗ್ಸ್ ವಿಚಾರಕ್ಕೆ ಅವರು ಹೆಚ್ಚಾಗಿ ಹೋಗಲ್ಲ‌ ಎಂದರು.

ಎಎಸ್ಪಿ ಸುಧಾಕರ್ ನಾಯ್ಕ್, ಡಿವೈಎಸ್ಪಿ ಡಿ.ಟಿ. ಪ್ರಭು, ಕಾರ್ಕಳ ವಿಭಾಗದ ಎಎಸ್ಪಿ ಡಾ. ಹರ್ಷ ಪ್ರಿಯಂವದಾ, ಕಾಲೇಜು ಪ್ರಾಂಶುಪಾಲರ ಸಂಘದ ಅಧ್ಯಕ್ಷ ವರ್ಗೀಸ್ ಇದ್ದರು.

Vishwa News 24

Recent Posts

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

11 hours ago

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ – vishwanews24

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ  ಸಂಭ್ರಮದ ನಡುವೆಯೇ…

11 hours ago

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ  – vishwanews24

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ   ಮಂಗಳೂರು:…

11 hours ago

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ – vishwanews24

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…

11 hours ago

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

2 days ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

2 days ago