ಉಡುಪಿ : ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಜಿಲ್ಲೆಯಲ್ಲಿ ಇಂದು 174 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.
ಈ ಪೈಕಿ ಉಡುಪಿಯಲ್ಲಿ 72, ಕುಂದಾಪುರ 55, ಕಾರ್ಕಳ 44 ಹಾಗೂ ಹೊರ ಜಿಲ್ಲೆಯ 3 ಮಂದಿಯಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 1885 ಕ್ಕೆ ಇಳಿಕೆಯಾಗಿದೆ.
ಇಂದು ಜಿಲ್ಲೆಯಲ್ಲಿ ಕಾರ್ಕಳದ ಇಬ್ಬರು ವ್ಯಕ್ತಿಗಳು ಸೋಂಕಿನಿಂದ ಮೃತಪಟ್ಟಿದ್ದಾರೆ. ಜೂ.18ರಂದು ಜಿಲ್ಲೆಯಲ್ಲಿ 454 ಮಂದಿ ಸೋಂಕಿತರು ಆಸ್ಪತ್ರೆಯಿಂದ ಗುಣಮುಖರಾಗಿ ಹೊರ ಬಂದಿದ್ದು, ಕೋವಿಡ್ 2ನೇ ಅಲೆ ಆರಂಭ ಆದಾಗಿನಿಂದ ಈವರೆಗೆ 39,513 ಮಂದಿ ಗುಣಮುಖರಾಗಿದ್ದಾರೆ. ಹಾಗೂ ಜಿಲ್ಲೆಯಲ್ಲಿ ಒಟ್ಟು ಈವರೆಗೆ ಪತ್ತೆಯಾದ 65,190 ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ 62,934 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಇನ್ನು ಜಿಲ್ಲೆಯಲ್ಲಿ 5 ಬ್ಲಾಕ್ ಫಂಗಸ್ ಪ್ರಕರಣಗಳು ಸಕ್ರಿಯವಾಗಿದೆ. ಈ ವರೆಗೆ ಉಡುಪಿಯಲ್ಲಿ 4, ಕುಂದಾಪುರದಲ್ಲಿ 6 ಹಾಗೂ ಹೊರ ಜಿಲ್ಲೆಯ 15 ಮಂದಿಯಲ್ಲಿ ಈ ಕಪ್ಪು ಶಿಲೀಂಧ್ರ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ 18 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇಬ್ಬರು ಬ್ಲಾಕ್ ಫಂಗಸ್ ಗೆ ಬಲಿಯಾಗಿದ್ದಾರೆ. ಒಟ್ಟು 25 ಬ್ಲಾಕ್ ಫಂಗಸ್ ನ ಪ್ರಕರಣಗಳು ಜಿಲ್ಲೆಯಲ್ಲಿ ಪತ್ತೆಯಾಗಿದೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…