Featured

ಉಡುಪಿ  : ಜಿಲ್ಲೆಯಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೋವಿಡ್ ಲಸಿಕೆ ನೀಡಲು ಕ್ರಮ : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24

ಉಡುಪಿ  : ಜಿಲ್ಲೆಯಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೋವಿಡ್ ಲಸಿಕೆ ನೀಡಲು ಕ್ರಮ : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24

ಉಡುಪಿ  (Vishwanews24): ಕೋವಿಡ್ 2 ನೇ ಅಲೆಯನ್ನು ನಿಯಂತ್ರಿಸಲು ಜಿಲ್ಲೆಯಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೋವಿಡ್ ಲಸಿಕೆ ನೀಡಲು ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

ಅವರು  ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಲಸಿಕಾ ಕಾರ್ಯಪಡೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಈಗಾಗಲೇ ರಚಿಸಲಾಗಿರುವ ಕೋವಿಡ್ ನಿಯಂತ್ರಣ ಕುರಿತ ಕಾರ್ಯಪಡೆಗಳು ಹಾಗೂ ಗ್ರಾಮೀಣ ಪ್ರದೇಶದಲ್ಲಿನ ಕಾರ್ಯಪಡೆಗಳು ಶೀಘ್ರದಲ್ಲಿ ಸಭೆಗಳನ್ನು ನಡೆಸಿ ತಮ್ಮ ವ್ಯಾಪ್ತಿಯಲ್ಲಿನ 45 ವರ್ಷ ಮೇಲ್ಪಟ್ಟ ನಾಗರೀಕರನ್ನು ಗುರುತಿಸಿ ಅವರು ಲಸಿಕಾ ಕೇಂದ್ರಗಳಿಗೆ ಬಂದು ಲಸಿಕೆ ಪಡೆಯುವ ಕುರಿತು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಡಿಸಿ ಸೂಚಿಸಿದರು.

ಶಿಕ್ಷಣ ಇಲಾಖೆಯಲ್ಲಿ 45 ವರ್ಷ ಮೇಲ್ಪಟ್ಟ ಹಲವು ಶಿಕ್ಷಕರಿದ್ದು, ಜಿಲ್ಲೆಯ ಎಲ್ಲಾ ಸರಕಾರಿ, ಖಾಸಗಿ, ಅನುದಾನಿತ ಶಾಲೆಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿನ ಶಿಕ್ಷಕರು ಲಸಿಕೆ ಪಡೆಯುವ ಕುರಿತಂತೆ ಸೂಚನೆ ನೀಡುವಂತೆ ಡಿಡಿಪಿಐಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಎಲ್ಲಾ ಖಾಸಗಿ ಬಸ್‌ಗಳ 45 ವರ್ಷ ಮೇಲ್ಪಟ್ಟ ಚಾಲಕರು ಮತ್ತು ನಿರ್ವಾಹಕರು ಲಸಿಕೆ ಪಡೆಯುವ ಕುರಿತು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಜಿಲ್ಲೆಯಲ್ಲಿ ಎಲ್ಲಾ ಅಟೋ ಮತ್ತು ಟ್ಯಾಕ್ಸಿ ಚಾಲಕರು, ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು, ಹೋಟೆಲ್ ಕಾರ್ಮಿಕರು ಸೇರಿದಂತೆ ಎಲ್ಲಾ ಸಂಘ ಸಂಸ್ಥೆಗಳ ಪದಾಧಿಕಾರಿಗಳಿಗೆ ಜಿಲ್ಲಾಡಳಿತದ ಮೂಲಕ ಪತ್ರ ಬರೆದು ತಮ್ಮ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಲಸಿಕೆ ಪಡೆಯುವಂತೆ ಮಾಡಲಾಗುವುದು ಎಂದು ತಿಳಿಸಿದರು.

ಚರ್ಚ್, ಮಸೀದಿಗಳು ಸೇರಿದಂತೆ ಎಲ್ಲಾ ಧಾರ್ಮಿಕ ಪ್ರದೇಶದಲ್ಲಿ ಕೋವಿಡ್ ಲಸಿಕೆ ಪಡೆಯುವ ಕುರಿತಂತೆ ತಿಳಿಸಲಾಗುವುದು ಎಂದ ಡಿಸಿ, ವಕ್ಫ್ ಇಲಾಖೆ ಅಧಿಕಾರಿಗಳು ಮಸೀದಿಗಳಲ್ಲಿ ಪ್ರಾರ್ಥನಾ ಸಮಯದಲ್ಲಿ ಲಸಿಕೆ ಪಡೆಯುವ ಕುರಿತು ಅಗತ್ಯ ಸಂದೇಶ ನೀಡುವಂತೆ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಜಿಲ್ಲೆಗೆ ಅಗತ್ಯ ಪ್ರಮಾಣದಲ್ಲಿ ಲಸಿಕೆ ತರಿಸಲಾಗುತ್ತಿದ್ದು, ಜಿಲ್ಲೆಯಲ್ಲಿ ಲಸಿಕೆಯ ಕೊರತೆ ಇಲ್ಲ. ಅಲ್ಲದೆ ಲಸಿಕೆ ಪಡೆಯುವುದರಿಂದ ಯಾವುದೇ ಅಡ್ಡ ಪರಿಣಾಮಗಳು ಇಲ್ಲದೇ ಇದ್ದು ಸಾರ್ವಜನಿಕರು ನಿರ್ಭೀತಿಯಿಂದ ಲಸಿಕೆ ಪಡೆಯುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

ಜಿಲ್ಲೆಯಲ್ಲಿ ಲಸಿಕೆ ವಿತರಣೆ ಸಂಪೂರ್ಣ ಗುರಿ ಸಾಧಿಸುವ ಕುರಿತಂತೆ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ
ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು.

ಸಭೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಪ್ರತಿನಿಧಿ ಡಾ. ಸತೀಶ್ಚಂದ್ರ ಮಾತನಾಡಿ, ವಿಶ್ವ ಆರೋಗ್ಯ ಸಂಸ್ಥೆಯಿ0ದ ಕೋವಿಡ್ ನಿಯಂತ್ರಣ ಕುರಿತು ಎಲ್ಲಾ ಜಿಲ್ಲೆಗಳಲ್ಲಿ ಕೈಗೊಂಡಿರುವ ನಿಯಂತ್ರಣ ಕ್ರಮಗಳ ಕುರಿತು ಪರಿಶೀಲನೆ ನಡೆಸುತ್ತಿದ್ದು, ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ ಹಾಗೂ ಉಡುಪಿ ನಗರ ವ್ಯಾಪ್ತಿಯಲ್ಲಿ ರಿಸ್ಕ್ ಜಾಸ್ತಿ ಇದ್ದು, ಈ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ನೀಡುವುದು ಅಗತ್ಯವಿದೆ. ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸರ್ವೇಕ್ಷಣ ಚಟುವಟಿಕೆಗಳು ನಡೆಯುತ್ತಿದ್ದು,

ಪ್ರಕರಣ ಕಂಡು ಬಂದ ಕೂಡಲೆ ಕಂಟೈನ್ಮೆ0ಟ್ ಝೋನ್ ರಚಿಸುವುದು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಟೆಸ್ಟಿಂಗ್ ನಡೆಸುತ್ತಿದ್ದು, ಕೋವಿಡ್ ಹರಡದಂತೆ ತಕ್ಷಣದಲ್ಲೇ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಜಿಲ್ಲಾಧಿಕಾರಿ ಅವರು ತ್ವರಿತವಾಗಿ ನಿರ್ಧಾರಗಳನ್ನು ಕೈಗೊಂಡು ಅವುಗಳ ಅನುಷ್ಠಾನವಾಗುವಂತೆ ನೋಡಿಕೊಳ್ಳುತ್ತಿರುವುದೇ ಇದಕ್ಕೇ ಕಾರಣ ಎಂದು ಡಿಸಿ ಜಿ.ಜಗದೀಶ್ ಅವರ ಕಾರ್ಯವೈಖರಿಯನ್ನು ಅಭಿನಂದಿಸಿದರು.

ಸಭೆಯಲ್ಲಿ ಡಿಹೆಚ್‌ಓ ಡಾ.ಸುಧೀರ್ ಚಂದ್ರ ಸೂಡಾ, ಜಿಲ್ಲಾ ಸರ್ಜನ್ ಡಾ.ಮಧುಸೂಧನ್ ನಾಯಕ್, ಜಿಲ್ಲಾ ಕೋವಿಡ್ ನಿಯಂತ್ರಣಾಧಿಕಾರಿ ಡಾ.ಪ್ರಶಾಂತ್ ಭಟ್, ಕೋವಿಡ್ ವಿಶೇಷಾಧಿಕಾರಿ ಡಾ.ಪ್ರೇಮಾನಂದ, ಜಿಲ್ಲಾ ಕೋವಿಡ್ ಲಸಿಕಾ ಅಧಿಕಾರಿ ಡಾ. ಎಂ.ಜಿ.ರಾಮ ಹಾಗೂ ಆರೋಗ್ಯ ಇಲಾಖೆ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

10 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

19 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

19 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

19 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

19 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago