ಉಡುಪಿ : ಜಿಲ್ಲೆಯಲ್ಲಿ ಇಂದು 98 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿ 47, ಕುಂದಾಪುರ 28, ಕಾರ್ಕಳ 23 ಮಂದಿಯಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 872 ಕೋವಿಡ್ ಸಕ್ರಿಯ ಪ್ರಕರಣಗಳಿವೆ.
ಇಂದು ಜಿಲ್ಲೆಯಲ್ಲಿ ಕುಂದಾಪುರದ 78 ವರ್ಷದ ಓರ್ವ ಮಹಿಳೆ ಸೋಂಕಿನಿಂದ ಮೃತಪಟ್ಟಿದ್ದಾರೆ. ಜು. 26 ರಂದು ಜಿಲ್ಲೆಯಲ್ಲಿ 107 ಮಂದಿ ಸೋಂಕಿತರು ಆಸ್ಪತ್ರೆಯಿಂದ ಗುಣಮುಖರಾಗಿ ಹೊರ ಬಂದಿದ್ದು, ಕೋವಿಡ್ 2ನೇ ಅಲೆ ಆರಂಭ ಆದಾಗಿನಿಂದ ಈವರೆಗೆ 44,485 ಮಂದಿ ಗುಣಮುಖರಾಗಿದ್ದಾರೆ. ಹಾಗೂ ಜಿಲ್ಲೆಯಲ್ಲಿ ಒಟ್ಟು ಈವರೆಗೆ ಪತ್ತೆಯಾದ 69,189 ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ 67,906 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಕೋವಿಡ್ 2 ನೇ ಅಲೆಯಲ್ಲಿ ಜು.26 ರ ವೇಳೆಗೆ ಜಿಲ್ಲೆಯಲ್ಲಿ 3,98,950 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 45,578 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈ ವರೆಗೆ 2ನೇ ಅಲೆಯಲ್ಲಿ ಜಿಲ್ಲೆಯಲ್ಲಿ ಒಟ್ಟು 221ಮಂದಿ ಸೋಂಕಿಗೆ ಬಲಿಯಾಗಿ ದ್ದಾರೆ. ಇನ್ನು ಜಿಲ್ಲೆಯಲ್ಲಿ 9 ಬ್ಲಾಕ್ ಫಂಗಸ್ ಪ್ರಕರಣಗಳು ಸಕ್ರಿಯವಾಗಿದೆ. ಈ ವರೆಗೆ ಉಡುಪಿಯಲ್ಲಿ 5, ಕಾರ್ಕಳದಲ್ಲಿ 6 ಹಾಗೂ ಹೊರ ಜಿಲ್ಲೆಯ 35 ಮಂದಿಯಲ್ಲಿ ಈ ಕಪ್ಪು ಶಿಲೀಂಧ್ರ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ 32 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, 5 ಮಂದಿ ಬ್ಲಾಕ್ ಫಂಗಸ್ ಗೆ ಬಲಿಯಾಗಿದ್ದಾರೆ. ಒಟ್ಟು 46 ಬ್ಲಾಕ್ ಫಂಗಸ್ ನ ಪ್ರಕರಣಗಳು ಜಿಲ್ಲೆಯಲ್ಲಿ ಪತ್ತೆಯಾಗಿದೆ.
ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…
ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…
ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…
ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…