ಉಡುಪಿ: ಜಿಲ್ಲೆಯಲ್ಲಿ ಸದ್ಯ ಶೇ.85ರಷ್ಟು ಬಿಪಿಎಲ್ ಪಡಿತರ ಕಾರ್ಡುಗಳಿದ್ದು, ಒಟ್ಟು 1.92 ಲಕ್ಷ ಕುಟುಂಬಗಳು ಬಿಪಿಎಲ್ ಕಾರ್ಡ್ ಹೊಂದಿವೆ. ಅವುಗಳ ನೈಜತೆ ಕುರಿತಂತೆ ಈಗ ಸರ್ವೆ ನಡೆಸಲಾಗುತ್ತಿದೆ. ಅದನ್ನು ಶೇ.40ಕ್ಕೆ ಇಳಿಸಬೇಕಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ.
ತಮ್ಮ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತಿದ್ದ ಅವರು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮೂಲಕ ಪ್ರತಿಯೊಬ್ಬ ಕಾರ್ಡುದಾರರ ಆದಾಯ ಹಾಗೂ ಇತರ ವಿಷಯಗಳ ತನಿಖೆ ನಡೆಸಲಾಗುತ್ತಿದೆ. ಅದೇ ರೀತಿ ಬಿಪಿಎಲ್ ಕಾರ್ಡ್ ಪಡೆದಿರುವ ಸರಕಾರಿ ನೌಕರರಿಂದ ಕಾರ್ಡ್ ಹಿಂಪಡೆದು ದಂಡ ವಸೂಲಿ ಮಾಡಲಾಗುತ್ತದೆ ಎಂದರು.
ಈ ವೇಳೆ ಬಡ, ನೈಜ ಫಲಾನುಭವಿಗಳಿಗೆ ಯಾವುದೇ ತೊಂದರೆ ಯಾಗದಂತೆ ನೋಡಿಕೊಳ್ಳಲಾಗುವುದು. ಕಾನೂನಿಗೆ ವಿರುದ್ಧವಾಗಿ ಬಿಪಿಎಲ್ ಕಾರ್ಡ್ ಪಡೆದವರು ಸುವೋಮೋಟೊ ಆಗಿ ಕಾರ್ಡ್‌ನ್ನು ಹಿಂದಿರುಗಿಸಿ ಎಂದು ಮನಿ ಮಾಡಿದ ಅವರು, ಬೇಕಿದ್ದರೆ ತಮ್ಮ ಅಗತ್ಯತೆಗಾಗಿ ಎಪಿಎಲ್ ಕಾರ್ಡು ಪಡೆದುಕೊಳ್ಳಬಹುದು. ಜಿಲ್ಲೆಯಲ್ಲಿ ಬಿಪಿಎಲ್ ಕಾರ್ಡ್‌ನ ದುರುಪಯೋಗ ವಾಗದಂತೆ ನೋಡಿಕೊಳ್ಳಲಾಗುವುದು. ಸುಳ್ಳು ಮಾಹಿತಿ ನೀಡಿ ಕಾರ್ಡ್ ಪಡೆದಿರುವುದು ಕಂಡುಬಂದರೆ ಕ್ರಮ ಜರಗಿಸಲಾಗುವುದು ಎಂದರು.
ಗೃಹಲಕ್ಷ್ಮೀ ಯೋಜನೆಯಲ್ಲಿ ಜಿಲ್ಲೆಯ ಕೆಲವರಿಗೆ ಹಣ ಬಾರದಿರುವ ಕುರಿತು ಜಿಲ್ಲಾಧಿಕಾರಿಗಳನ್ನು ಪ್ರಶ್ನಿಸಿದಾಗ, ಜಿಲ್ಲೆಯ 452 ಮಂದಿಯಿಂದ ಇನ್‌ಕಮ್ ಟ್ಯಾಕ್ಸ್ ರಿಟರ್ನ್ ಕುರಿತಂತೆ ಸ್ಪಷ್ಟನೆಯನ್ನು ಕೇಳಲಾಗಿದೆ. ಅವರಿಂದ ದೃಢೀಕರಣ ಹೇಳಿಕೆ ಪಡೆದು ಕಳುಹಿಸಲಾಗಿದೆ ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…