Featured

ಉಡುಪಿ : ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಮೊಳಗಿದ ಕನ್ನಡ ಗಾಯನ : ಎಲ್ಲಡೆ ಅಭೂತಪೂರ್ವ ಸ್ಪಂದನೆ -Vishwanews24

ಉಡುಪಿ : ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಮೊಳಗಿದ ಕನ್ನಡ ಗಾಯನ : ಎಲ್ಲಡೆ ಅಭೂತಪೂರ್ವ ಸ್ಪಂದನೆ -Vishwanews24

ಉಡುಪಿ : ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಲಕ್ಷ ಕಂಠ ಗಾಯನ ಕಾರ್ಯಕ್ರಮದಡಿ ,ನಾಡಗೀತೆ ಜಯ ಭಾರತ ಜನನಿಯ ತನುಜಾತೆ ಸೇರಿದಂತೆ, ಕನ್ನಡದ ಶ್ರೇಷ್ಠತೆಯನ್ನು ಸಾರುವ , ಬಾರಿಸು ಕನ್ನಡ ಡಿಂಡಿಮವ, ಜೋಗದ ಸಿರಿ ಬೆಳಕಿನಲ್ಲಿ, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಈ ಗೀತೆಗಳನ್ನು , ರಜತಾದ್ರಿಯ ಜಿಲ್ಲಾಡಳಿತ ಸಂಕೀರ್ಣದ ಆವರಣ ಸೇರಿದಂತೆ ಜಿಲ್ಲೆಯಾದ್ಯಂತ ಇಂದು ಬೆಳಗ್ಗೆ 11 ಗಂಟೆಗೆ ಏಕಕಾಲದಲ್ಲಿ ಹಾಡುವ ಮೂಲಕ ಜಿಲ್ಲೆಯಾದ್ಯಂತ ಕನ್ನಡದ ಕಂಪನ್ನು ಹರಡಲಾಯಿತು.

ರಜತಾದ್ರಿಯ ಜಿಲ್ಲಾಡಳಿತ ಸಂಕೀರ್ಣದ ಆವರಣದಲ್ಲಿ ಸುಮಾರು 750 ಕ್ಕೂ ಅಧಿಕ ಮಂದಿಯಿAದ ಕನ್ನಡ ಗೀತೆಗಳ ಗಾಯನ ನಡೆಯಿತು, ಪ್ರಬಾರ ಜಿಲ್ಲಾಧಿಕಾರಿ ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ,ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿ.ಪಂ. ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್ ಸೇರಿದಂತೆ ವಿವಿಧ ಇಲಾಖೆಗಳು ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಮಣಿಪಾಲ ಜೂನಿಯರ್ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮಕ್ಕಾಗಿ ಬಹುತೇಕ ಪುರುಷ ಸಿಬ್ಬಂದಿಗಳು ಬಿಳಿ ಬಣ್ಣದ ಶರ್ಟ್ ಗಳು ಮತ್ತು ಮಹಿಳಾ ಸಿಬ್ಬಂದಿಗಳು ಹಳದಿ ಬಣ್ಣದ ಉಡುಪುಗಳನ್ನು ಧರಿಸಿದ್ದು ವಿಶೇಷವಾಗಿತ್ತು. ಇದೇ ಸಂದರ್ಭದಲ್ಲಿ ಕನ್ನಡವನ್ನು ಎಲ್ಲಾ ಸ್ಥಳದಲ್ಲಿ , ಎಲ್ಲಾ ಕಾರ್ಯದಲ್ಲೂ ಬಳಸುವುದಾಗಿ ಸಂಕಲ್ಪ ಕೈಗೊಳ್ಳಲಾಯಿತು.

ಜಿಲ್ಲೆಯ ಪ್ರತೀ ಗ್ರಾಮ ಪಂಚಾಯತ್ ಸೇರಿದಂತೆ ಜಿಲ್ಲೆಯ 20 ಕ್ಕೂ ಅಧಿಕ ಪ್ರೇಕ್ಷಣಿಯ ಸ್ಥಳಗಳಲ್ಲಿ ಏಕಕಾಲದಲ್ಲಿ ಈ ಗಾಯನ ಕಾರ್ಯಕ್ರಮ ನಡೆದಿದ್ದು, ಜಿಲ್ಲೆಯಾದ್ಯಂತ ಸುಮಾರು 60 ರಿಂದ 63 ಸಾವಿರ ಮಂದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು,ಎಲ್ಲರಿಗೂ ಕಾರ್ಯಕ್ರಮ ಅತ್ಯಂತ ಸಂತೋಷ ತಂದಿದೆ ಎಂದು ಪ್ರಭಾರ ಜಿಲ್ಲಾಧಿಕಾರಿ ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ಹೇಳಿದರು.

ಮಲ್ಪೆ ಕಡಲಿನಲ್ಲಿಯೂ ಮೊಳಗಿದ ಕನ್ನಡ ಗೀತೆಗಳ ಕಹಳೆ: ಮಲ್ಪ ಕಡಲ ಮಧ್ಯದಲ್ಲಿ ಬೋಟ್ ನಲ್ಲಿ 100 ಮಂದಿ ವೃತ್ತಪರ ಸಂಗೀತ ಕಲಾವಿದರಿಂದ ನಡೆದ ಕನ್ನಡ ಗೀತೆಗಳ ಗಾಯನ ಕಾರ್ಯಕ್ರಮ ಅತ್ಯಂತ ವಿಶೇಷವಾಗಿತ್ತು.

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಲ್ಪೆ ಅಭಿವೃಧ್ದಿ ಸಮಿತಿ, ದಕ ಮತ್ತು ಉಡುಪಿ ಮೀನುಗಾರಿಕಾ ಫೆಡರೇಷನ್ ಸಹಯೋಗದಲ್ಲಿ ಸಮುದ್ರ ನಡೆದ ಕಾಯಕ್ರಮದಲ್ಲಿ 100 ಮಂದಿ ಕಲಾವಿದರ ತಮ್ಮ ಗಾಯನದ ಮೂಲಕ ಕಡಲಿನ ಅಲೆಗಳ ನಡುವೆ ಕನ್ನಡದ ಕಹಳೆಯನ್ನು ಮೊಳಗಿಸಿದರು. ಇವರೊಂದಿಗೆ ಮಲ್ಪೆ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ತಮ್ಮ ದನಿಗೂಡಿಸಿದ್ದು, ಒಟ್ಟು 200 ಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು.

ದಕ ಮತ್ತು ಉಡುಪಿ ಮೀನುಗಾರಿಕಾ ಫೆಡರೇಷನ್ ಅಧ್ಯಕ್ಷ ಯಶ್‌ಪಾಲ್ ಸುವರ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ ಮತ್ತಿತರರು ಉಪಸ್ಥಿತರಿದ್ದರು.

ಶ್ರೀಕೃಷ್ಣ ಮಠದಲ್ಲಿ : ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ,ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ, ಪರ್ಯಾಯ ಶ್ರೀಅದಮಾರು ಶ್ರೀಕೃಷ್ಣ ಮಠ ಉಡುಪಿ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ, ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು,ಶ್ರೀ ಕೃಷ್ಣ ಮಠದ ಸಿಬ್ಬಂದಿ, ಸಾರ್ವಜನಿಕರು ಮತ್ತು ಪ್ರವಾಸಿಗರು ಸೇರಿದಂತೆ ಸುಮಾರು 800 ಕ್ಕೂ ಅಧಿಕ ಕನ್ನಡ ಗೀತೆಗಳ ಗಾಯನಕ್ಕೆ ದನಿಗೂಡಿಸಿದರು.

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಸದಸ್ಯೆ ಪೂರ್ಣ ಸುರೇಶ್,ಯುವ ಸಬಲೀಕರಣ ಮತ್ತುಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳು,ಶಾಲೆಗಳು,ಕೈಗಾರಿಕೆಗಳು,ಪ್ರವಾಸಿ ಕೇಂದ್ರಗಳು,ಪ್ರಮುಖ ದೇವಾಲಯಗಳು, ಬ್ಯಾಂಕ್‌ಗಳು, ಬಸ್ ನಿಲ್ದಾಣ,ರಿಕ್ಷಾ ನಿಲ್ದಾಣ,ಮೆಸ್ಕಾಂ ಸೇರಿದಂತೆ ಎಲ್ಲಡೆ ಏಕಕಾಲದಲ್ಲಿ ಕನ್ನಡದ ಕಂಪು ಪಸರಿಸಿದ್ದು, ಒಟ್ಟು 62000 ಕ್ಕೂ ಅಧಿಕ ಮಂದಿ ಅತ್ಯುತ್ಸಾಹದಿಂದ ಕನ್ನಡದ ಬಗೆಗಿನ ತಮ್ಮ ಒಲುಮೆಯನ್ನು ಕನ್ನಡದ ಶ್ರೇಷ್ಠತೆ ಸಾರುವ ಗೀತೆಗಳ ಗಾಯನದ ಮೂಲಕ ಪ್ರದರ್ಶಿಸಿದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago