ಉಡುಪಿ: ಹವಾಮಾನ ಬದಲಾವಣೆಯಿಂದಾಗಿ ಉಡುಪಿ ಜಿಲ್ಲೆಯಾದ್ಯಂತ ಕೆಂಗಣ್ಣು ರೋಗ ಕಾಣಿಸಿಕೊಳ್ಳುತ್ತಿದೆ.
ಕೆಂಗಣ್ಣು ಅಥವಾ ಕಂಜಕ್ಟಿವಿಟಿಸ್‌ಗೆ ಕಾರಣ ವೈರಾಣು ಅಥವಾ ಬ್ಯಾಕ್ಟೀರಿಯಾ. ಕಣ್ಣಿನ ಬಿಳಿಭಾಗದ ಮೇಲೆ ಮತ್ತು ಕಣ್ಣಿನ ರೆಪ್ಪೆಗಳ ಒಳಭಾಗ ಉರಿಯೂತಕ್ಕೆ ಈಡಾಗಿ ಕೆಂಪು ಅಥವಾ ಗುಲಾಬಿ ಬಣ್ಣ ಹೊಂದಿ ಊದಿಕೊಳ್ಳುವುದು ಇದರ ಲಕ್ಷಣವಾಗಿದೆ. ಇದು ಬಹುಬೇಗನೆ ಹರಡುವ ರೋಗವಾಗಿದೆ. ಬಾಧಿತರು ಪದೇ ಪದೇ ಕಣ್ಣನ್ನು ಉಜ್ಜಬಾರದು ಎನ್ನುತ್ತಾರೆ ವೈದ್ಯರು.
ಕಾರ್ಕಳದಲ್ಲಿ ಗರಿಷ್ಠ: ಉಡುಪಿ ತಾಲೂಕಿನಲ್ಲಿ ನವೆಂಬರ್‌ನಲ್ಲಿ 60, ಡಿಸೆಂಬರ್‌ನಲ್ಲಿ ಈವರೆಗೆ 15, ಕುಂದಾಪುರ ತಾಲೂಕಿನಲ್ಲಿ ನವೆಂಬರ್‌ನಲ್ಲಿ 80, ಡಿಸೆಂಬರ್‌ನಲ್ಲಿ 117, ಕಾರ್ಕಳದಲ್ಲಿ ನವೆಂಬರ್‌ಗೆ 124, ಡಿಸೆಂಬರ್‌ನಲ್ಲಿ 395 ಮಂದಿಗೆ ಕೆಂಗಣ್ಣು ಬಾಧಿಸಿದೆ.
ಕೆಂಗಣ್ಣು ಕಾಯಿಲೆ ಅತೀ ಶೀಘ್ರವಾಗಿ ಇನ್ನೊಬ್ಬರಿಗೆ ಹರಡುತ್ತದೆ. ಈಗಾಗಲೇ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಈ ರೋಗ ಬಂದು ಹೋಗಿವೆ. ಇದಕ್ಕೆಂದೇ ಕೆಲವು ವಿದ್ಯಾರ್ಥಿಗಳು ರಜೆ ತೆಗೆದುಕೊಂಡ ಘಟನೆಗಳೂ ಜಿಲ್ಲೆಯಲ್ಲಿ ನಡೆದಿವೆ.
ಶೀತ, ಜ್ವರ ಪ್ರಕರಣ:
ಜಿಲ್ಲೆಯಲ್ಲಿ ಶೀತ, ಜ್ವರ ಪ್ರಕರಣದಲ್ಲಿಯೂ ಹೆಚ್ಚಳ ಕಂಡುಬಂದಿದೆ. ನವೆಂಬರ್‌ನಲ್ಲಿ ಉಡುಪಿ ತಾಲೂಕಿನಲ್ಲಿ 1,456, ಕುಂದಾಪುರದಲ್ಲಿ 1,145, ಕಾರ್ಕಳ 1,087, ಡಿಸೆಂಬರ್ ತಿಂಗಳಲ್ಲಿ ಉಡುಪಿ ತಾಲೂಕಿನಲ್ಲಿ 324, ಕುಂದಾಪುರ 224, ಕಾರ್ಕಳದಲ್ಲಿ 191 ಮಂದಿಗೆ ವಿವಿಧ ರೀತಿಯ ಜ್ವರ ಹಾಗೂ ಶೀತ ಲಕ್ಷಣಗಳು ಕಂಡುಬಂದಿವೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…