ಉಡುಪಿ: ‘ಜಿಲ್ಲೆಯಾದ್ಯಂತ ವೀಕೆಂಡ್‌ ಲಾಕ್‌ಡೌನ್, ನೈಟ್‌ ಕರ್ಪ್ಯೂ ಕಟ್ಟುನಿಟ್ಟಾಗಿ ಜಾರಿ’ : ಜಿಲ್ಲಾಧಿಕಾರಿ -Vishwanews24

Featured, ಉಡುಪಿ

ಉಡುಪಿ: ‘ಜಿಲ್ಲೆಯಾದ್ಯಂತ ವೀಕೆಂಡ್‌ ಲಾಕ್‌ಡೌನ್, ನೈಟ್‌ ಕರ್ಪ್ಯೂ ಕಟ್ಟುನಿಟ್ಟಾಗಿ ಜಾರಿ’ : ಜಿಲ್ಲಾಧಿಕಾರಿ -Vishwanews24

ಉಡುಪಿ : ಜಿಲ್ಲೆಯಾದ್ಯಂತ ವೀಕೆಂಡ್‌ ಲಾಕ್‌ಡೌನ್ ಮತ್ತು ನೈಟ್‌ ಕರ್ಪ್ಯೂ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಕುರ್ಮಾ ರಾವ್ ತಿಳಿಸಿದ್ದಾರೆ.

ವೀಕೆಂಡ್‌ ಲಾಕ್‌ಡೌನ್ ಮತ್ತು ನೈಟ್‌ ಕರ್ಪ್ಯೂ ಕುರಿತು ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿ, ಜಿಲ್ಲೆಯಾದ್ಯಂತ ರಾತ್ರಿ 9 ಗಂಟೆಯಿಂದ ಬೆಳ್ಳಗೆ 5 ಗಂಟೆವರೆಗೆ ನೈಟ್‌ ಕರ್ಪ್ಯೂ ಜಾರಿಯಲ್ಲಿದ್ದು, ಅಗತ್ಯ ಚಟುವಟಿಕೆಗಳಿಗೆ ಹೊರತು ಪಡಿಸಿ ಜನರ ಓಡಾಟವನ್ನು ಕಡ್ದಾಯವಾಗಿ ನಿಷೇಧಿಸಲಾಗಿದೆ” ಎಂದು ತಿಳಿಸಿದ್ದಾರೆ.

ಪ್ರತಿ ಶುಕ್ರವಾರ ರಾತ್ರಿ 9 ಗಂಟೆಯಿಂದ ಪ್ರತಿ ಸೋಮವಾರ ಬೆಳ್ಳಗೆ 5 ಗಂಟೆವರೆಗೆ ವಾರಾಂತ್ಯ ಕರ್ಪ್ಯೂ ಜಾರಿಯಲ್ಲಿರಲಿದ್ದು, ಈ ಸಮಯದಲಿ ಅಗತ್ಯ ತುರ್ತು ಸೇವೆಗಳು ಮತ್ತು ಕೊರೊನಾ ಕಂಟೈನೈಂಟ್ ಮತ್ತು ಮ್ಯಾನೆಜ್ಮೆಂಟ್ ಕರ್ತವ್ಯಗಳು ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತಿದ್ದ ಅಂತಹ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳಿಗೆ ಮತು ಸಿಬ್ಬಂಧಿಗಳಿಗೆ ಮಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

ಇನ್ನು ವೀಕೆಂಡ್‌ ಲಾಕ್‌ಡೌನ್, ನೈಟ್‌ ಕರ್ಪ್ಯೂ ಆದೇಶವನ್ನು ಪಾಲಿಸದೇ ಇದ್ದವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಗೆ ನೀಡಿದ್ದಾರೆ.

ಈ ಆದೇಶಗಳು ಸರಕಾರದಿಂದ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ, ಸಭೆಗಳಿಗೆ ಅನ್ವಯಿಸುವುದಿಲ್ಲ ಎಂದು ತಿಳಿಸಿದ್ದಾರೆ.