ಉಡುಪಿ : ಜಿಲ್ಲೆಯಾದ್ಯಂತ ವೀಕೆಂಡ್ ಲಾಕ್‌ಡೌನ್ ಮತ್ತು ನೈಟ್ ಕರ್ಪ್ಯೂ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಕುರ್ಮಾ ರಾವ್ ತಿಳಿಸಿದ್ದಾರೆ.
ವೀಕೆಂಡ್ ಲಾಕ್‌ಡೌನ್ ಮತ್ತು ನೈಟ್ ಕರ್ಪ್ಯೂ ಕುರಿತು ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿ, ಜಿಲ್ಲೆಯಾದ್ಯಂತ ರಾತ್ರಿ 9 ಗಂಟೆಯಿಂದ ಬೆಳ್ಳಗೆ 5 ಗಂಟೆವರೆಗೆ ನೈಟ್ ಕರ್ಪ್ಯೂ ಜಾರಿಯಲ್ಲಿದ್ದು, ಅಗತ್ಯ ಚಟುವಟಿಕೆಗಳಿಗೆ ಹೊರತು ಪಡಿಸಿ ಜನರ ಓಡಾಟವನ್ನು ಕಡ್ದಾಯವಾಗಿ ನಿಷೇಧಿಸಲಾಗಿದೆ” ಎಂದು ತಿಳಿಸಿದ್ದಾರೆ.
ಪ್ರತಿ ಶುಕ್ರವಾರ ರಾತ್ರಿ 9 ಗಂಟೆಯಿಂದ ಪ್ರತಿ ಸೋಮವಾರ ಬೆಳ್ಳಗೆ 5 ಗಂಟೆವರೆಗೆ ವಾರಾಂತ್ಯ ಕರ್ಪ್ಯೂ ಜಾರಿಯಲ್ಲಿರಲಿದ್ದು, ಈ ಸಮಯದಲಿ ಅಗತ್ಯ ತುರ್ತು ಸೇವೆಗಳು ಮತ್ತು ಕೊರೊನಾ ಕಂಟೈನೈಂಟ್ ಮತ್ತು ಮ್ಯಾನೆಜ್ಮೆಂಟ್ ಕರ್ತವ್ಯಗಳು ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತಿದ್ದ ಅಂತಹ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳಿಗೆ ಮತು ಸಿಬ್ಬಂಧಿಗಳಿಗೆ ಮಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.
ಇನ್ನು ವೀಕೆಂಡ್ ಲಾಕ್‌ಡೌನ್, ನೈಟ್ ಕರ್ಪ್ಯೂ ಆದೇಶವನ್ನು ಪಾಲಿಸದೇ ಇದ್ದವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಗೆ ನೀಡಿದ್ದಾರೆ.
ಈ ಆದೇಶಗಳು ಸರಕಾರದಿಂದ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ, ಸಭೆಗಳಿಗೆ ಅನ್ವಯಿಸುವುದಿಲ್ಲ ಎಂದು ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…