Featured

ಉಡುಪಿ : ಜಿಲ್ಲೆಯಾದ್ಯಂತ ಸಂಭ್ರಮದ ಬಕ್ರಿದ್ ಹಬ್ಬ ಆಚರಣೆ – Vishwanews24

ಉಡುಪಿ : ಜಿಲ್ಲೆಯಾದ್ಯಂತ ಸಂಭ್ರಮದ ಬಕ್ರಿದ್ ಹಬ್ಬ ಆಚರಣೆ

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಅಝಾ(ಬಕ್ರೀದ್ ಹಬ್ಬ)ವನ್ನು ಇಂದು ಸಂಭ್ರಮ ಸಡಗರದಿಂದ ಆಚರಿಸಿದರು.

ಉಡುಪಿ ನಗರ ಕಾಪು ಬ್ರಹ್ಮಾವರ ಕುಂದಾಪುರ ಬೈಂದೂರ್ ಹೆಬ್ರಿ ಕಾರ್ಕಳ ತಾಲೂಕುಗಳ ವಿವಿಧ ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್ ನೆರವೇರಿಸಲಾಯಿತು. ಮುಸ್ಲಿಂ ಬಾಂಧವರು ಬೆಳಗ್ಗೆ ಹೊಸ ಬಟ್ಟೆಗಳನ್ನು ಧರಿಸಿ ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಕೆಲವು ಮಸೀದಿಗಳಲ್ಲಿ ಮಹಿಳೆಯರಿಗೂ ಈದ್ ನಮಾಜ್ ನಿರ್ವಹಿಸಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿತ್ತು. ನಮಾಜ್ ಬಳಿಕ ಮುಸ್ಲಿಮ್ ಬಾಂಧವರು ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.

ಉಡುಪಿ ಜಾಮೀಯ ಮಸೀದಿಯಲ್ಲಿ ಮೌಲಾನಾ ಅಬ್ದುರ್ರಶೀದ್ ನದ್ವಿ ನೇತೃತ್ವದಲ್ಲಿ ಮತ್ತು ಉಡುಪಿ ಅಂಜುಮಾನ್ ಮಸೀದಿಯಲ್ಲಿ ಮೌಲಾನ ಇನಾಯುತುಲ್ಲಾ ರಝ್ವಿ ನೇತೃತ್ವದಲ್ಲಿ ಈದ್ ನಮಾಝ್ ನಿರ್ವಹಿಸಲಾಯಿತು.

ಉಡುಪಿ ಜಿಲ್ಲಾ ಸಂಯುಕ್ತ ಜಮಾತಿನ ಕೇಂದ್ರ ಮಸೀದಿಯಾದ ಮೂಳೂರು ಜುಮಾ ಮಸೀದಿಯಲ್ಲಿ ಖತೀಬ್ ಹಾಫಿಲ್ ಮುಹಮ್ಮದ್ ಅಶ್ರಫ್ ಸಖಾಫಿ ನೇತೃತ್ವದಲ್ಲಿ ಈದ್ ವಿಶೇಷ ನಮಾಝ್ ಮತ್ತು ಖುತ್ಬಾ ಪಾರಾಯಣ ನಡೆಯಿತು.

ಕುಂದಾಪುರ ಜುಮಾ ಮಸೀದಿಯಿಂದ ಬೆಳಗ್ಗೆ ಈದ್ ಮೆರವಣಿಗೆ ಹೊರಟು, ಕುಂದಾಪುರ ಮಸೀದಿಯ ಧರ್ಮಗುರು ಮೌಲಾನಾ ಕರಾರ್ ಹುಸೇನ್ ನೇತೃತ್ವದಲ್ಲಿ ಈದ್ ವಿಶೇಷ ನಮಾಝ್ ನೆರವೇರಿಸಲಾಯಿತು.

ಉಡುಪಿ ಕೊಲಂಬೆಯ ಮದೀನ ಮಸೀದಿಯಲ್ಲಿ ಮೌಲಾನ ಶೌಕತ್ ಅಲಿ ರಝ್ವಿ, ಕಾಪು ಪೊಲಿಪು ಮಸೀದಿಯಲ್ಲಿ‌ ಖತೀಬ್ ಇರ್ಷಾದ್ ಸಅದಿ ನೇತೃತ್ವದಲ್ಲಿ ನಮಾಝ್ ನಿರ್ವಹಿಸಲಾಯಿತು.

ಗಂಗೊಳ್ಳಿಯ ಜುಮ್ಮಾ ಮಸೀದಿಯಲ್ಲಿ ಮೌಲಾನ ಮುಝಮ್ಮಿಲ್ ನದ್ವಿ, ಮೋಹಿದೀನ್ ಜುಮ್ಮಾ ಮಸೀದಿಯಲ್ಲಿ ಖತೀಬ್ ಮೌಲಾನ ಅಬ್ದುಲ್ ಕರೀಂ ನದ್ವಿ, ಶಾಹಿ ಜುಮ್ಮಾ ಮಸೀದಿಯಲ್ಲಿ ಮೌಲಾನ ಅಬ್ದುಲ್ ಮತಿನ್ ಸಿದ್ದಿಕಿ ಅವರ ನೇತೃತ್ವದಲ್ಲಿ ವಿಶೇಷ ನಮಾಝ್ ನಿರ್ವಹಿಸಲಾಯಿತು. ಇದರಲ್ಲಿ ನೂರಾರು ಮಂದಿ ಮುಸ್ಲಿಂ ಬಾಂಧವರು ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಧರ್ಮಗುರುಗಳು ಈದ್ ಸಂದೇಶ ನೀಡಿದರು. ಹಬ್ಬದ ದಿನ ಯಾವುದೇ ಅಹಿತಕರ ಘಟನೆ ನಡೆದಂತೆ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 days ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 days ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 days ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

2 days ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

2 days ago