Featured

ಉಡುಪಿ : ಜಿಲ್ಲೆಯ ಅಕ್ರಮ ಹೋಂಸ್ಟೇ  ರೆಸಾರ್ಟ್‌ಗಳಿಗೆ ಸಕ್ರಮ ಮಾಡಲು ಒಂದು ತಿಂಗಳ ಗಡುವು : ಜಿಲ್ಲಾಧಿಕಾರಿ ಎಚ್ಚರಿಕೆ – vishwanews24

ಉಡುಪಿ : ಜಿಲ್ಲೆಯ ಅಕ್ರಮ ಹೋಂಸ್ಟೇ  ರೆಸಾರ್ಟ್‌ಗಳಿಗೆ ಸಕ್ರಮ ಮಾಡಲು ಒಂದು ತಿಂಗಳ ಗಡುವು : ಜಿಲ್ಲಾಧಿಕಾರಿ ಎಚ್ಚರಿಕೆ

ಮಣಿಪಾಲ: ಜಿಲ್ಲೆಯಲ್ಲಿ ಅಕ್ರಮವಾಗಿ ಹೋಂಸ್ಟೇ, ರೆಸಾರ್ಟ್‌ ನಡೆಸುತ್ತಿರುವವರು ಒಂದು ತಿಂಗಳೊಳಗೆ ಸಕ್ರಮ ಮಾಡಿಕೊಳ್ಳಬೇಕು. ಇಲ್ಲವಾದಲ್ಲಿ ಕಠಿಣ ಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಎಚ್ಚರಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗುರುವಾರ ಜಿಲ್ಲೆಯ ಹೋಂಸ್ಟೇ, ರೆಸಾರ್ಟ್‌ ಮಾಲಕರ ಸಭೆಯಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಪ್ರಸ್ತುತ ಸುಮಾರು 200 ಹೋಂ ಸ್ಟೇಗಳು ಅಧಿಕೃತವಾಗಿ ನಡೆಯುತ್ತಿವೆ. ಅನಧಿಕೃತ ಹೋಂಸ್ಟೇಗಳಿಗೆ ನೋಟಿಸ್‌ ಜಾರಿ ಮಾಡಲಾಗಿದೆ. ಒಂದು ವರ್ಷದಿಂದ ಸಕ್ರಮಕ್ಕೆ ಸೂಚನೆ ನೀಡುತ್ತಿದ್ದರೂ ನಿರ್ಲಕ್ಷಿಸಲಾಗಿದೆ. ಮುಂದಿನ ಒಂದು ತಿಂಗಳಲ್ಲಿ ಸಕ್ರಮ ಮಾಡಿಕೊಳ್ಳದಿದ್ದರೆ ಕ್ರಮ ಅನಿವಾರ್ಯ. ಜೊತೆಗೆ ಯಾವುದೇ ಕಾನೂನು ಬಾಹಿರ ಚಟುವಟಿಕೆ ನಡೆಸುತ್ತಿಲ್ಲ ಎಂದು ಜಿಲ್ಲಾಡಳಿತಕ್ಕೆ ಮುಚ್ಚಳಿಕೆ ಬರೆದುಕೊಡಬೇಕು ಎಂದರು.

ಸರಕಾರಿ ಭೂಮಿ ಹಾಗೂ ಸಿಆರ್‌ಝಡ್‌ ವ್ಯಾಪ್ತಿಯಲ್ಲಿ ಹೋಂಸ್ಟೇ ಕಟ್ಟಿಕೊಂಡಿರುವ ಬಗ್ಗೆ ಮಾಹಿತಿ ಇದೆ. ಅಕ್ರಮವಾಗಿ ಕಟ್ಟಿದ್ದರೆ ಕೂಡಲೇ ತೆರವು ಮಾಡಬೇಕು. ಇಲ್ಲವಾದರೆ ತೆರವು ಮಾಡಿಸಲಾಗುವುದು. ಹೋಂ ಸ್ಟೇಗಳಲ್ಲಿ ಮಾಲಕರು ಇರುವುದು ಕಡ್ಡಾಯ. ಒಂದೊಮ್ಮೆ ಮಾಲಕರು ಇಲ್ಲದೇ ಇದ್ದರೆ ಈಗ ಕೇಂದ್ರ ಸರಕಾರ ರೂಪಿಸಿರುವ ಬ್ರೆಡ್‌ ಆ್ಯಂಡ್‌ ಬ್ರೇಕ್‌ಫಾಸ್ಟ್‌ ಯೋಜನೆ (ಬಿಆ್ಯಂಡ್‌ಬಿ)ಯಡಿ ನೋಂದಣಿ ಮಾಡಬೇಕು ಎಂದರು.

ಹೋಂಸ್ಟೇಗಳಿಗೆ ಬರುವ ಪ್ರವಾಸಿಗರನ್ನು ದಟ್ಟಾರಣ್ಯ, ನದಿ, ಬೀಚ್‌ಗಳಿಗೆ ರಾತ್ರಿ ವೇಳೆ ಕರೆದುಕೊಂಡು ಹೋಗಿ ಪಾರ್ಟಿ ಆಯೋ ಜನೆ ಮಾಡುವಂತಿಲ್ಲ. ನಡುರಾತ್ರಿ ಡಿಜೆ ಹಾಕಿ ಅಕ್ಕಪಕ್ಕದವರಿಗೆ ಸಮಸ್ಯೆ ನೀಡಬಾರದು ಎಂದರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಅರುಣ್‌ ಕೆ. ಮಾತನಾಡಿ, ಹೋಂಸ್ಟೇಗಳಲ್ಲಿ ಪ್ರವಾಸಿಗರ ಮಾಹಿತಿ ಕಡ್ಡಾಯವಾಗಿ ದಾಖಲಿಸಿಕೊಳ್ಳಬೇಕು. ಸಿಸಿಟಿವಿ ಅಳವಡಿಕೆ ಕಡ್ಡಾಯ. ಪ್ರವಾಸಿಗರಿಂದ ನಿಮಗೇನಾದರೂ ಸಮಸ್ಯೆಯಾದರೆ ಕೂಡಲೇ ಪೊಲೀಸ್‌ ಇಲಾಖೆಗೆ ಮಾಹಿತಿ ನೀಡಬೇಕು ಎಂದರು.

ಜಿಪಂ ಸಿಇಒ ಪ್ರತೀಕ್‌ ಬಾಯಲ್‌ ಮಾತನಾಡಿ, ಪ್ರವಾಸಿಗರ ಸುರಕ್ಷತೆಯೂ ಅಷ್ಟೇ ಮುಖ್ಯ. ವಿದೇಶಿ ಪ್ರವಾಸಿಗರು ಬಂದಾಗ ಅವರಿಗೆ ಸಮಸ್ಯೆ ಆಗದಂತೆ ಎಚ್ಚರ ವಹಿಸಬೇಕು ಎಂದರು. ಪ್ರವಾಸೋದ್ಯಮ ಇಲಾಖೆಯ ಸ. ನಿರ್ದೇಶಕ ಕುಮಾರ್‌ ಸಿ.ಯು. ನಿರೂಪಿಸಿದರು.

ಹೋಂಸ್ಟೇ, ರೆಸಾರ್ಟ್‌ಗಳ ವಿವರ

ಚಟುವಟಿಕೆ ಅಧಿಕೃತ ಅನಧಿಕೃತ ನವೀಕರಣ ಬಾಕಿ

ಹೋಂ ಸ್ಟೇ 188 102 14

ರೆಸಾರ್ಟ್‌ 36 153 0

ಹೌಸ್‌ಬೋಟ್‌ 4 0 4

ಕಯಾಕಿಂಗ್‌ 21 0 3

ಪ್ರವಾಸಿ ಬೋಟ್‌ 11 0 3

ಟೂರ್/ಟ್ರಾವೆಲ್ಸ್‌ 4 23 0

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago