ಮಣಿಪಾಲ: ಜಿಲ್ಲೆಯಲ್ಲಿ ಅಕ್ರಮವಾಗಿ ಹೋಂಸ್ಟೇ, ರೆಸಾರ್ಟ್ ನಡೆಸುತ್ತಿರುವವರು ಒಂದು ತಿಂಗಳೊಳಗೆ ಸಕ್ರಮ ಮಾಡಿಕೊಳ್ಳಬೇಕು. ಇಲ್ಲವಾದಲ್ಲಿ ಕಠಿಣ ಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಎಚ್ಚರಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗುರುವಾರ ಜಿಲ್ಲೆಯ ಹೋಂಸ್ಟೇ, ರೆಸಾರ್ಟ್ ಮಾಲಕರ ಸಭೆಯಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಪ್ರಸ್ತುತ ಸುಮಾರು 200 ಹೋಂ ಸ್ಟೇಗಳು ಅಧಿಕೃತವಾಗಿ ನಡೆಯುತ್ತಿವೆ. ಅನಧಿಕೃತ ಹೋಂಸ್ಟೇಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಒಂದು ವರ್ಷದಿಂದ ಸಕ್ರಮಕ್ಕೆ ಸೂಚನೆ ನೀಡುತ್ತಿದ್ದರೂ ನಿರ್ಲಕ್ಷಿಸಲಾಗಿದೆ. ಮುಂದಿನ ಒಂದು ತಿಂಗಳಲ್ಲಿ ಸಕ್ರಮ ಮಾಡಿಕೊಳ್ಳದಿದ್ದರೆ ಕ್ರಮ ಅನಿವಾರ್ಯ. ಜೊತೆಗೆ ಯಾವುದೇ ಕಾನೂನು ಬಾಹಿರ ಚಟುವಟಿಕೆ ನಡೆಸುತ್ತಿಲ್ಲ ಎಂದು ಜಿಲ್ಲಾಡಳಿತಕ್ಕೆ ಮುಚ್ಚಳಿಕೆ ಬರೆದುಕೊಡಬೇಕು ಎಂದರು.
ಸರಕಾರಿ ಭೂಮಿ ಹಾಗೂ ಸಿಆರ್‌ಝಡ್ ವ್ಯಾಪ್ತಿಯಲ್ಲಿ ಹೋಂಸ್ಟೇ ಕಟ್ಟಿಕೊಂಡಿರುವ ಬಗ್ಗೆ ಮಾಹಿತಿ ಇದೆ. ಅಕ್ರಮವಾಗಿ ಕಟ್ಟಿದ್ದರೆ ಕೂಡಲೇ ತೆರವು ಮಾಡಬೇಕು. ಇಲ್ಲವಾದರೆ ತೆರವು ಮಾಡಿಸಲಾಗುವುದು. ಹೋಂ ಸ್ಟೇಗಳಲ್ಲಿ ಮಾಲಕರು ಇರುವುದು ಕಡ್ಡಾಯ. ಒಂದೊಮ್ಮೆ ಮಾಲಕರು ಇಲ್ಲದೇ ಇದ್ದರೆ ಈಗ ಕೇಂದ್ರ ಸರಕಾರ ರೂಪಿಸಿರುವ ಬ್ರೆಡ್ ಆ್ಯಂಡ್ ಬ್ರೇಕ್‌ಫಾಸ್ಟ್ ಯೋಜನೆ (ಬಿಆ್ಯಂಡ್‌ಬಿ)ಯಡಿ ನೋಂದಣಿ ಮಾಡಬೇಕು ಎಂದರು.
ಹೋಂಸ್ಟೇಗಳಿಗೆ ಬರುವ ಪ್ರವಾಸಿಗರನ್ನು ದಟ್ಟಾರಣ್ಯ, ನದಿ, ಬೀಚ್‌ಗಳಿಗೆ ರಾತ್ರಿ ವೇಳೆ ಕರೆದುಕೊಂಡು ಹೋಗಿ ಪಾರ್ಟಿ ಆಯೋ ಜನೆ ಮಾಡುವಂತಿಲ್ಲ. ನಡುರಾತ್ರಿ ಡಿಜೆ ಹಾಕಿ ಅಕ್ಕಪಕ್ಕದವರಿಗೆ ಸಮಸ್ಯೆ ನೀಡಬಾರದು ಎಂದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಅರುಣ್ ಕೆ. ಮಾತನಾಡಿ, ಹೋಂಸ್ಟೇಗಳಲ್ಲಿ ಪ್ರವಾಸಿಗರ ಮಾಹಿತಿ ಕಡ್ಡಾಯವಾಗಿ ದಾಖಲಿಸಿಕೊಳ್ಳಬೇಕು. ಸಿಸಿಟಿವಿ ಅಳವಡಿಕೆ ಕಡ್ಡಾಯ. ಪ್ರವಾಸಿಗರಿಂದ ನಿಮಗೇನಾದರೂ ಸಮಸ್ಯೆಯಾದರೆ ಕೂಡಲೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು ಎಂದರು.
ಜಿಪಂ ಸಿಇಒ ಪ್ರತೀಕ್ ಬಾಯಲ್ ಮಾತನಾಡಿ, ಪ್ರವಾಸಿಗರ ಸುರಕ್ಷತೆಯೂ ಅಷ್ಟೇ ಮುಖ್ಯ. ವಿದೇಶಿ ಪ್ರವಾಸಿಗರು ಬಂದಾಗ ಅವರಿಗೆ ಸಮಸ್ಯೆ ಆಗದಂತೆ ಎಚ್ಚರ ವಹಿಸಬೇಕು ಎಂದರು. ಪ್ರವಾಸೋದ್ಯಮ ಇಲಾಖೆಯ ಸ. ನಿರ್ದೇಶಕ ಕುಮಾರ್ ಸಿ.ಯು. ನಿರೂಪಿಸಿದರು.
ಹೋಂಸ್ಟೇ, ರೆಸಾರ್ಟ್‌ಗಳ ವಿವರ
ಚಟುವಟಿಕೆ ಅಧಿಕೃತ ಅನಧಿಕೃತ ನವೀಕರಣ ಬಾಕಿ
ಹೋಂ ಸ್ಟೇ 188 102 14
ರೆಸಾರ್ಟ್ 36 153 0
ಹೌಸ್‌ಬೋಟ್ 4 0 4
ಕಯಾಕಿಂಗ್ 21 0 3
ಪ್ರವಾಸಿ ಬೋಟ್ 11 0 3
ಟೂರ್/ಟ್ರಾವೆಲ್ಸ್ 4 23 0
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…