Featured

ಉಡುಪಿ :  ಜಿಲ್ಲೆಯ ಅಭಿವೃದ್ದಿಯಲ್ಲಿ ಯುವ ಜನತೆಯ ಪಾತ್ರ ಮಹತ್ವವಾದುದು: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ – Vishwanews24

ಉಡುಪಿ :  ಜಿಲ್ಲೆಯ ಅಭಿವೃದ್ದಿಯಲ್ಲಿ ಯುವ ಜನತೆಯ ಪಾತ್ರ ಮಹತ್ವವಾದುದು: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ – Vishwanews24

ಉಡುಪಿ : ಜಿಲ್ಲೆಯ ಅಭಿವೃದ್ದಿಗೆ ಯುವಜನತೆ ನೀಡುವ ಸಹಕಾರ ಅತ್ಯಂತ ಮಹತ್ವವಾಗಿದ್ದು, ಜಿಲ್ಲೆಯಲ್ಲಿನ ವಿವಿಧ ಯೋಜನೆಗಳ ಪ್ರಗತಿಗೆ ಯುವಜನತೆ ಉತ್ತಮ ಸಹಕಾರ ನೀಡುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.

ಅವರು ಇಂದು ಉಡುಪಿ ಪುರಭವನದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ,ಉಡುಪಿ, ಐಕ್ಯುಎಸಿ ಮತ್ತು ರಾಷ್ಟಿçÃಯ ಸೇವಾ ಯೋಜನೆ ಇವರ ಸಹಕಾರದೊಂದಿಗೆ ನಡೆದ ,ಉಡುಪಿ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜಿಲ್ಲೆಯ ಯುವ ಜನತೆ ಇತ್ತೀಚೆಗೆ ನಡೆದ ಫಿಟ್ ಇಂಡಿಯಾ,ಕ್ಲೀನ್ ಇಂಡಿಯಾ ಕಾರ್ಯಕ್ರಮ ಸೇರಿದಂತೆ ಹಲವು ಕಾರ್ಯಕ್ರಮಗಳ ಸಂಪೂರ್ಣ ಯಶಸ್ಸಿಗೆ ಉತ್ತಮ ಸಹಕಾರ ನೀಡಿದ್ದು, ಜಿಲ್ಲಾಡಳಿತ ಕೂಡಾ ಯುವಜನತೆ ನೀಡುವ ಸಲಹೆಗಳನ್ನು ಪರಿಗಣಿಸುತ್ತಿದ್ದು, ಯುವ ಜನತೆಯ ಕೋರಿಕೆ ಮೇರೆಗೆ ಇತ್ತೀಚೆಗೆ ಐ.ಎ.ಎಸ್. ಕೆ.ಎ.ಎಸ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗೆ ಅಗತ್ಯವಿರುವ ಮಾಹಿತಿ ಮತ್ತು ತರಬೇತಿಯನ್ನು ಏರ್ಪಡಿಸಲಾಗಿದೆ. ಸ್ವಚ್ಚತೆ ಕುರಿತಂತೆ ಜಿಲ್ಲೆಯ ಎಲ್ಲಾ ಕಾಲೇಜುಗಳ ಆವರಣ ಗೋಡೆಗಳ ಮೇಲೆ ಉತ್ತಮ ಸಂದೇಶ ಸಾರುವ ಆಕರ್ಷಕ ಚಿತ್ರಣ ಮತ್ತು ಸಂದೇಶಗಳನ್ನು ರಚಿಸುವಂತೆ ವಿದ್ಯಾರ್ಥಿಗಳಿಗೆ ತಿಳಿಸಿದ ಜಿಲ್ಲಾಧಿಕಾರಿ ಕೂರ್ಮಾರಾವ್, ಪ್ರತಿಯೊಂದು ಕ್ಷೇತ್ರದಲ್ಲೂ ಸಹ ಯುವ ಜನತೆ ತಮ್ಮಲ್ಲಿರುವ ಯುವಶಕ್ತಿ ಮತ್ತು ಪ್ರತಿಭೆಯನ್ನು ಸದ್ಬಳಕೆ ಮಾಡಬೇಕು ಎಂದರು.

ಜಿಲ್ಲೆಯಲ್ಲಿ ಸಂಪೂರ್ಣ 2 ಡೋಸ್ ಕೋವಿಡ್ ಲಸಿಕೆ ನೀಡುವ ಕಾರ್ಯ ಪ್ರಗತಿಯಲ್ಲಿದ್ದು,ಈಗಾಗಲೇ 93% ಪ್ರಥಮ ಡೋಸ್ ಮತ್ತು 68% ಎರಡನೇ ಡೋಸ್ ಸಾಧನೆ ಆಗಿದ್ದು,100% ಎರಡೂ ಡೋಸ್ ಲಸಿಕೆ ಸಾಧನೆ ಆಗುವ ನಿಟ್ಟಿನಲ್ಲಿ ಯುವ ಜನತೆ ಸಹಕಾರ ಅಗತ್ಯವಾಗಿದ್ದು, ಯುವಜನತೆ ತಮ್ಮ ಮನೆಗಳಲ್ಲಿ ಮತ್ತು ಸಮೀಪದ ಮನೆಗಳಲ್ಲಿ ಕೋವಿಡ್ ಲಸಿಕೆ ಪಡೆಯದವರಿಗೆ mಲಸಿಕೆ ಪಡೆಯುವ ಕುರಿತಂತೆ ಮತ್ತು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವಂತೆ ಪ್ರೇರೆಪಿಸಬೇಕು ಆ ಮೂಲಕ ಜಿಲ್ಲೆಯನ್ನು ಕೋವಿಡ್ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ಮಾತನಾಡಿ, ಯುವ ಜನತೆಯಲ್ಲಿನ ವ್ಯಕ್ತಿತ್ವ ಮತ್ತು ಕಲೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಇದರಿಂದ ಯುವ ಜನತೆಯ ವ್ಯಕ್ತಿತ್ವ ವಿಕಸನ ಕೂಡಾ ಆಗಲಿದೆ. ದೇಶದಲ್ಲಿ ಯುವ ಸಂಪತ್ತು ಅತ್ಯಧಿಕವಾಗಿದ್ದು ಇದರ ಸದ್ಬಳಕೆ ಆಗಬೇಕು, ಯುವಕರು ಎಲ್ಲಾ ಕಾರ್ಯಕ್ರಮಗಳ ರಾಯಭಾರಿಗಳಾಗಬೇಕು ,ಹೆಚ್ಚಿನ ಸಂಖ್ಯೆಯಲ್ಲಿ ಅತ್ಯುತ್ತಮ ನಾಯಕರು ಯುವ ಸಮುದಾಯದಿಂದ ಮೂಡಿಬರಬೇಕು ಎಂದರು.

ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ವಾಣಿ ಬಲ್ಲಾಳ್,ಎನ್.ಎಸ್.ಎಸ್. ಸಂಯೋಜನಾಧಿಕಾರಿ ಡಾ.ರಾಜೆಂದ್ರ ಉಪಸ್ಥಿತರಿದ್ದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಉಪನ್ಯಾಸಕಿ ತ್ರಿವೇಣಿ ನಿರೂಪಿಸಿದರು.

ಯುವಜನೋತ್ಸವದಲ್ಲಿ,ಜಾನಪದ ನೃತ್ಯ,ಜಾನಪದ ಹಾಡು, ಏಕಪಾತ್ರಾ ಅಭಿನಯ, ಶಾಸ್ತ್ರೀಯ ಸಂಗೀತ, , ಶಾಸ್ತ್ರೀಯ ನೃತ್ಯ, ಶಾಸ್ತ್ರೀಯ ವಾದ್ಯ,ಹಾರ್ಮೋನಿಯಂ, ಗಿಟಾರ್, ಆಶು ಭಾಷಣ ಮುಂತಾದ ಸ್ಪರ್ಧೆಗಳನ್ನು 3 ವಿವಿಧ ವೇದಿಕೆಗಳಲ್ಲಿ ಏರ್ಪಡಿಸಲಾಗಿತ್ತು.

Vishwa News 24

Recent Posts

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

12 hours ago

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ – vishwanews24

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ  ಸಂಭ್ರಮದ ನಡುವೆಯೇ…

13 hours ago

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ  – vishwanews24

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ   ಮಂಗಳೂರು:…

13 hours ago

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ – vishwanews24

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…

13 hours ago

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

2 days ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

2 days ago