ಉಡುಪಿ: ಪ್ರವಾಸೋದ್ಯಮ ಇಲಾಖೆಯಿಂದ ಜಿಲ್ಲೆಯ10 ಕಾಮಗಾರಿಗಳಿಗೆ 16.10 ಕೋಟಿ ರೂ. ಮಂಜೂರಾಗಿದ್ದು, 8.60 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಪ್ರವಾಸೋದ್ಯಮ ಮತ್ತು ಕನ್ನಡ-ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ. ರವಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಗ್ರಾಮಗಳ ಅಧ್ಯಯನ ನಡೆಸಿ ದಾಖಲೀಕರಣ ಮಾಡುವ ಯೋಜನೆ ಹಮ್ಮಿಕೊಳ್ಳಲಾಗಿದೆ. ಸ್ಥಳೀಯ ಪಿಯುಸಿ ಮತ್ತು ಪದವಿ ವಿದ್ಯಾರ್ಥಿಗಳ ಸಹಕಾರದಲ್ಲಿ ಗ್ರಾಮದ ಮೂಲ ಸಂಸ್ಕೃತಿ, ಸ್ಮಾರಕಗಳು, ವೈಶಿಷ್ಟೃತೆ ಬಗ್ಗೆ ದಾಖಲೆಗಳನ್ನು ಇದನ್ನು ವಿಕಿಪೀಡಿಯಾ ಮಾದರಿಯಲ್ಲಿ ಸಂಗ್ರಹಿಸಲಾಗುವುದು. ಆಯಾ ಜಿಲ್ಲಾಧಿಕಾರಿಗಳಿಗೆ ಇದರ ಜವಾಬ್ದಾರಿ ವಹಿಸಲಾಗಿದೆ ಎಂದರು.
ಸಚಿವನಾದ ಅನಂತರ ಇಲ್ಲಿಯವರೆಗೆ 12 ಜಿಲ್ಲೆಗಳಿಗೆ ಪ್ರವಾಸ ಮಾಡಿ ವಿವಿಧ ಸಮಸ್ಯೆಗಳನ್ನು ಆಲಿಸಿದ್ದೇನೆ. ರಾಜ್ಯದ ವಿವಿಧ ಇಲಾಖೆಗಳಲ್ಲಿನ ಶೇ. 81ರಷ್ಟು ಉದ್ಯೋಗಾವಕಾಶಗಳು ಖಾಲಿಯಿವೆ. ಈ ಬಗ್ಗೆ ಪರಿಣಿತರಲ್ಲಿ ಚರ್ಚಿಸಿ ಶೀಘ್ರ ಉದ್ಯೋಗಾವಕಾಶಗಳ ಭರ್ತಿಗೆ ಯತ್ನಿಸಲಾಗುವುದು ಎಂದರು.
ಅತಿವೃಷ್ಟಿ ಹಾನಿಗೀಡಾದ 10 ರಾಜ್ಯಗಳಿಗೆ ಮಧ್ಯಂತರ ಪರಿಹಾರ ನೀಡಲಾಗಿದೆ. ಫಲಾನುಭವಿಗಳಿಗೆ ನೇರವಾಗಿ ಸವಲತ್ತು ಸಿಗುವಂತಾಗಲು ಅವರ ಖಾತೆಗೆ ನೇರವಾಗಿ ಜಮೆ ಮಾಡುವ ಕೆಲಸ ನಡೆಯುತ್ತಿದೆ. ಈ ಪ್ರಕ್ರಿಯೆ ಎಲ್ಲ ರಾಜ್ಯಗಳಿಗೂ ಅನ್ವಯವಾಗಲಿದ್ದು, ಯಾರಿಗೂ ತಾರತಮ್ಯ ಮಾಡಲಾಗಿಲ್ಲ. ಮತ್ತಷ್ಟು ಪರಿಹಾರಕ್ಕೆ ಬೇಡಿಕೆ ಬಂದಲ್ಲಿ ಮುಖ್ಯಮಂತ್ರಿಗಳು, ಸಚಿವ, ಶಾಸಕರೊಂದಿಗೆ ಪ್ರಧಾನಿ ಇತೆಗೆ ಚರ್ಚಿಸಲೂ ಸಿದ್ಧ ಎಂದರು.
ಶಾಸಕರಾದ ರಘುಪತಿ ಭಟ್, ಲಾಲಾಜಿ ಮೆಂಡನ್, ಹಾಲಾಡಿ ಶ್ರೀನಿವಾಸ ಶೆಟ್ಟಿ, ಜಿ.ಪಂ. ಅಧ್ಯಕ್ಷ ದಿನಕರ ಬಾಬು ಉಪಸ್ಥಿತರಿದ್ದರು.
ಅನರ್ಹ ಶಾಸಕರ ವಿಷಯ ಕೋರ್ಟ್‌ನಲ್ಲಿದೆ. ತೀರ್ಪು ಬಂದ ಬಳಿಕ ಸ್ಪರ್ಧೆ ಬಗ್ಗೆ ಯೋಚನೆ ಮಾಡ್ತೇವೆ. ಸಂಸದೀಯ ಸಮಿತಿ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದರು. ಶಾಸಕ ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್, ಹಾಲಾಡಿ ಶ್ರೀನಿವಾಸ ಶೆಟ್ಟಿ, ಜಿಪಂ ಅಧ್ಯಕ್ಷ ದಿನಕರ ಬಾಬು ಉಪಸ್ಥಿತರಿದ್ದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…