Featured

ಉಡುಪಿ ಜಿಲ್ಲೆಯ ಅಭಿವೃದ್ಧಿಗೆ 8.60 ಕೋ.ರೂ. ಅನುದಾನ ಬಿಡುಗಡೆ: : ಸಿ.ಟಿ. ರವಿ -Vishwanews24

ಉಡುಪಿ: ಪ್ರವಾಸೋದ್ಯಮ ಇಲಾಖೆಯಿಂದ ಜಿಲ್ಲೆಯ10 ಕಾಮಗಾರಿಗಳಿಗೆ 16.10 ಕೋಟಿ ರೂ. ಮಂಜೂರಾಗಿದ್ದು, 8.60 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಪ್ರವಾಸೋದ್ಯಮ ಮತ್ತು ಕನ್ನಡ-ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ. ರವಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಗ್ರಾಮಗಳ ಅಧ್ಯಯನ ನಡೆಸಿ ದಾಖಲೀಕರಣ ಮಾಡುವ ಯೋಜನೆ ಹಮ್ಮಿಕೊಳ್ಳಲಾಗಿದೆ. ಸ್ಥಳೀಯ ಪಿಯುಸಿ ಮತ್ತು ಪದವಿ ವಿದ್ಯಾರ್ಥಿಗಳ ಸಹಕಾರದಲ್ಲಿ ಗ್ರಾಮದ ಮೂಲ ಸಂಸ್ಕೃತಿ, ಸ್ಮಾರಕಗಳು, ವೈಶಿಷ್ಟೃತೆ ಬಗ್ಗೆ ದಾಖಲೆಗಳನ್ನು ಇದನ್ನು ವಿಕಿಪೀಡಿಯಾ ಮಾದರಿಯಲ್ಲಿ ಸಂಗ್ರಹಿಸಲಾಗುವುದು. ಆಯಾ ಜಿಲ್ಲಾಧಿಕಾರಿಗಳಿಗೆ ಇದರ ಜವಾಬ್ದಾರಿ ವಹಿಸಲಾಗಿದೆ ಎಂದರು.

ಸಚಿವನಾದ ಅನಂತರ ಇಲ್ಲಿಯವರೆಗೆ 12 ಜಿಲ್ಲೆಗಳಿಗೆ ಪ್ರವಾಸ ಮಾಡಿ ವಿವಿಧ ಸಮಸ್ಯೆಗಳನ್ನು ಆಲಿಸಿದ್ದೇನೆ. ರಾಜ್ಯದ ವಿವಿಧ ಇಲಾಖೆಗಳಲ್ಲಿನ ಶೇ. 81ರಷ್ಟು ಉದ್ಯೋಗಾವಕಾಶಗಳು ಖಾಲಿಯಿವೆ. ಈ ಬಗ್ಗೆ ಪರಿಣಿತರಲ್ಲಿ ಚರ್ಚಿಸಿ ಶೀಘ್ರ ಉದ್ಯೋಗಾವಕಾಶಗಳ ಭರ್ತಿಗೆ ಯತ್ನಿಸಲಾಗುವುದು ಎಂದರು.

ಅತಿವೃಷ್ಟಿ ಹಾನಿಗೀಡಾದ 10 ರಾಜ್ಯಗಳಿಗೆ ಮಧ್ಯಂತರ ಪರಿಹಾರ ನೀಡಲಾಗಿದೆ. ಫ‌ಲಾನುಭವಿಗಳಿಗೆ ನೇರವಾಗಿ ಸವಲತ್ತು ಸಿಗುವಂತಾಗಲು ಅವರ ಖಾತೆಗೆ ನೇರವಾಗಿ ಜಮೆ ಮಾಡುವ ಕೆಲಸ ನಡೆಯುತ್ತಿದೆ. ಈ ಪ್ರಕ್ರಿಯೆ ಎಲ್ಲ ರಾಜ್ಯಗಳಿಗೂ ಅನ್ವಯವಾಗಲಿದ್ದು, ಯಾರಿಗೂ ತಾರತಮ್ಯ ಮಾಡಲಾಗಿಲ್ಲ. ಮತ್ತಷ್ಟು ಪರಿಹಾರಕ್ಕೆ ಬೇಡಿಕೆ ಬಂದಲ್ಲಿ ಮುಖ್ಯಮಂತ್ರಿಗಳು, ಸಚಿವ, ಶಾಸಕರೊಂದಿಗೆ ಪ್ರಧಾನಿ ಇತೆಗೆ ಚರ್ಚಿಸಲೂ ಸಿದ್ಧ ಎಂದರು.
ಶಾಸಕರಾದ ರಘುಪತಿ ಭಟ್‌, ಲಾಲಾಜಿ ಮೆಂಡನ್‌, ಹಾಲಾಡಿ ಶ್ರೀನಿವಾಸ ಶೆಟ್ಟಿ, ಜಿ.ಪಂ. ಅಧ್ಯಕ್ಷ ದಿನಕರ ಬಾಬು ಉಪಸ್ಥಿತರಿದ್ದರು.

ಅನರ್ಹ ಶಾಸಕರ ವಿಷಯ ಕೋರ್ಟ್‌ನಲ್ಲಿದೆ. ತೀರ್ಪು ಬಂದ ಬಳಿಕ ಸ್ಪರ್ಧೆ ಬಗ್ಗೆ ಯೋಚನೆ ಮಾಡ್ತೇವೆ. ಸಂಸದೀಯ ಸಮಿತಿ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದರು. ಶಾಸಕ ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್, ಹಾಲಾಡಿ ಶ್ರೀನಿವಾಸ ಶೆಟ್ಟಿ, ಜಿಪಂ ಅಧ್ಯಕ್ಷ ದಿನಕರ ಬಾಬು ಉಪಸ್ಥಿತರಿದ್ದರು.

Vishwa News 24

Recent Posts

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

2 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

5 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

6 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

6 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

7 hours ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

7 hours ago