Featured

ಉಡುಪಿ : ಜಿಲ್ಲೆಯ ಅಸಂಘಟಿತ ಕಾರ್ಮಿಕರನ್ನು ಪಿಂಚಣಿ ಯೋಜನೆಗೆ ಸೇರ್ಪಡೆ ಮಾಡಿ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ -Vishwanews24

ಉಡುಪಿ : ಜಿಲ್ಲೆಯ ಅಸಂಘಟಿತ ಕಾರ್ಮಿಕರನ್ನು ಪಿಂಚಣಿ ಯೋಜನೆಗೆ ಸೇರ್ಪಡೆ ಮಾಡಿ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ -Vishwanews24

ಉಡುಪಿ, : ಜಿಲ್ಲೆಯಲ್ಲಿನ ಎಲ್ಲಾ ಅರ್ಹ ಅಸಂಘಟಿತ ಕಾರ್ಮಿಕರನ್ನು ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ ಪಿಂಚಣಿ ಯೋಜನೆಯ ವ್ಯಾಪ್ತಿಗೆ ಸೇರ್ಪಡೆ ಮಾಡಲು ಹಾಗೂ ಇ-ಶ್ರಮ್ ಯೋಜನೆಯಲ್ಲಿ ನೋಂದಣಿ ಮಾಡುವಂತೆ ಕಾರ್ಮಿಕ ಇಲಾಖೆ ಮತ್ತು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ನಿರ್ದೇಶನ ನೀಡಿದರು.

ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್‌ನಲ್ಲಿ ನಡೆದ ಪ್ರಧಾನಮಂತ್ರಿ ಶ್ರಮಯೋಗಿ ಮಾನ್‌ಧನ್ ಯೋಜನೆ ಹಾಗೂ ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟಿçÃಯ ಡೇಟಾಬೇಸ್ ಇ-ಶ್ರಮ್ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ 18-40 ವರ್ಷದೊಳಗಿನ ವಿವಿಧ ವೃತ್ತಿಗಳಲ್ಲಿ ತೊಡಗಿರುವ ಅಸಂಘಟಿತ ಕಾರ್ಮಿಕರನ್ನು ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆಯ ಪಿಂಚಣಿ ಯೋಜನೆಯ ವ್ಯಾಪ್ತಿಗೆ ಸೇರ್ಪಡೆ ಮಾಡುವ ಕುರಿತಂತೆ ಅಸಂಘಟಿತ ಕಾರ್ಮಿಕರ ವೃತ್ತಿವಾರು ಸಂಘಗಳೊAದಿಗೆ ಸಮಾಲೋಚನೆ ನಡೆಸಿ, ನಿಗಧಿತ ಸ್ಥಳ ಮತ್ತು ದಿನಾಂಕವನ್ನು ನಿಗಧಿಪಡಿಸಿಕೊಂಡು ಕಾರ್ಯಕ್ರಮ ಆಯೋಜಿಸಿ, ಎಲ್ಲಾ ಕಾರ್ಮಿಕರಿಗೆ ಈ ಯೋಜನೆಯ ಪ್ರಯೋಜನಗಳ ಕುರಿತು ಅರಿವು ಮೂಡಿಸಿ, ಸ್ಥಳದಲ್ಲೇ ನೋಂದಣಿ ಕಾರ್ಯವನ್ನು ಮಾಡುವ ಮೂಲಕ ಪಿಂಚಣಿ ಸೌಲಭ್ಯ ಪಡೆಯಲು ಯೋಜನೆಗೆ ಸೇರ್ಪಡೆ ಮಾಡುವಂತೆ ಹೇಳಿದರು.

ಕಾರ್ಮಿಕರನ್ನು ಯೋಜನೆಯ ವ್ಯಾಪ್ತಿಗೆ ಒಳಪಡಿಸಲು ಕಾರ್ಯಕ್ರಮ ಆಯೋಜನೆಗೆ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಮತ್ತು ಪಂಚಾಯತ್‌ಗಳು ತಮ್ಮ ವ್ಯಾಪ್ತಿಯಲ್ಲಿ ನಿಗಧಿತ ಸ್ಥಳ ಗುರುತಿಸಿ ಎಲ್ಲಾ ಅಗತ್ಯ ಸಹಕಾರವನ್ನು ನೀಡಬೇಕು ಹಾಗೂ ಈ ಕಾರ್ಯಕ್ರಮಕ್ಕೆ ವಿವಿಧ ಸ್ವಯಂ ಸೇವಾ ಸಂಘಟನೆಗಳ ಸಹಕಾರ ಪಡೆಯುವಂತೆ ತಿಳಿಸಿದರು.

ಜಿಲ್ಲೆಯ ಎಲ್ಲಾ ಅಸಂಘಟಿತ ಕಾರ್ಮಿಕರನ್ನು ಇ-ಶ್ರಮ್ ಯೋಜನೆಯಲ್ಲಿ ನೊಂದಣಿ ಮಾಡುವ ಕುರಿತಂತೆ ಎಲ್ಲಾ ಇಲಾಖೆಗಳು ತಮ್ಮ ಅಧೀನದಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರಿಗೆ ಮಾಹಿತಿ ನೀಡಬೇಕು. ಅಲ್ಲದೇ ನೋಂದಣಿ ಶಿಬಿರಗಳನ್ನು ಆಯೋಜಿಸಿ, ಇ-ಶ್ರಮ್ ನೋಂದಣಿಯ ಪ್ರಯೋಜನಗಳ ಬಗ್ಗೆ ಕಾರ್ಮಿಕ ಇಲಾಖೆ ಮತ್ತು ಅಸಂಘಟಿತ ಕಾರ್ಮಿಕ ವಲಯದ ವಿವಿಧ ವೃತ್ತಿಗಳ ನಾಮ ನಿರ್ದೇಶಿತ ಸದಸ್ಯರು ತಮ್ಮ ವ್ಯಾಪ್ತಿಯಲ್ಲಿನ ಕಾರ್ಮಿಕರಿಗೆ ಅಗತ್ಯ ಮಾಹಿತಿ ನೀಡಬೇಕು ಎಂದರು.

ಜುಲೈ 25 ರ ನಂತರ ಜಿಲ್ಲೆಯಾದ್ಯಂತ ಕಾರ್ಮಿಕರ ಇ-ಶ್ರಮ್ ನೊಂದಣಿ ಮತ್ತು ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆಯ ಪಿಂಚಣಿ ಯೋಜನೆಗೆ ಸೇರ್ಪಡೆ ಮಾಡುವ ಕುರಿತಂತೆ ನಿರಂತರವಾಗಿ ಶಿಬಿರಗಳನ್ನು ಆಯೋಜಿಸಿ, ಅರ್ಹ ಎಲ್ಲಾ ಕಾರ್ಮಿಕರನ್ನು ನೊಂದಣಿ ಮಾಡಲು ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಹಾಗೂ ಇದೇ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಸ್ವ-ನಿಧಿ ಯೋಜನೆ ಕುರಿತೂ ಸಹ ಅರಿವು ಕಾರ್ಯಕ್ರಮಗಳನ್ನು ಆಯೋಜಿಸುವಂತೆ ತಿಳಿಸಿದರು.

ಪಿಂಚಣಿ ಯೋಜನೆಗೆ ಸೇರ್ಪಡೆಗೊಳ್ಳಲು ಹಾಗೂ ಇ-ಶ್ರಮ್‌ನಲ್ಲಿ ನೋಂದಾಯಿಸಲು ಕಾರ್ಮಿಕರು ಶಿಬಿರಗಳಲ್ಲಿ ಮಾತ್ರವಲ್ಲದೇ ತಮ್ಮ ಸಮೀಪದ ಕಾಮನ್ ಸರ್ವೀಸ್ ಸೆಂಟರ್‌ಗಳಲ್ಲೂ ಸಹ ನೋಂದಾಯಿಸಬಹುದಾಗಿದೆ ಎಂದರು.

ಅಸಂಘಟಿತ ಕಾರ್ಮಿಕ ವಲಯದಲ್ಲಿನ ಬೀದಿ ಬದಿ ವ್ಯಾಪಾರಿಗಳು, ಹಮಾಲಿಗಳು, ಮನೆ ಕೆಲಸ ಮಾಡುವವರು, ರಿಕ್ಷಾ ಚಾಲಕರು, ಕೃಷಿ ಕಾರ್ಮಿಕರು, ಕಟ್ಟಡ ಕಾರ್ಮಿಕರು, ಬೀಡಿ ಕಾರ್ಮಿಕರು, ಗೃಹ ಆಧಾರಿತ ಕಾರ್ಮಿಕರು ಸೇರಿದಂತೆ ಇತರೆ ವಿವಿಧ ವೃತ್ತಿಯಲ್ಲಿರುವವರು ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆಯ ಪಿಂಚಣಿ ಯೋಜನೆಯಲ್ಲಿ ಸೇರ್ಪಡೆಯಾಗುವ ಮೂಲಕ 60 ವರ್ಷದ ನಂತರ ಕನಿಷ್ಠ 3000 ರೂ. ಖಚಿತ ಮಾಸಿಕ ಪಿಂಚಣಿ ಪಡೆಯಲು ಸಾಧ್ಯವಾಗಲಿದೆ.

ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾಂiÀiðದರ್ಶಿ ಶರ್ಮಿಳಾ ಎಸ್, ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್, ವಿವಿಧ ಅನುಷ್ಠಾನಾಧಿಕಾರಿಗಳು ಹಾಗೂ ಅಸಂಘಟಿತ ಕಾರ್ಮಿಕ ವಲಯದ ವಿವಿಧ ವೃತ್ತಿಗಳ ನಾಮ ನಿರ್ದೇಶಿತ ಸದಸ್ಯರುಗಳು ಉಪಸ್ಥಿತರಿದ್ದರು.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

15 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

16 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

16 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

16 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

16 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago