Featured

ಉಡುಪಿ ಜಿಲ್ಲೆಯ ಎಲ್ಲಾ ಮೆಡಿಕಲ್ ಶಾಪ್‌ಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯ – vishwanews24

ಉಡುಪಿ ಜಿಲ್ಲೆಯ ಎಲ್ಲಾ ಮೆಡಿಕಲ್ ಶಾಪ್‌ಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯ

ಉಡುಪಿ  : ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ಕ್ರಿಮಿನಲ್ ಪ್ರೊಸೀಜರ್ ಕೋಡ್, 1973 ಕಲಂ 133 ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಜಿಲ್ಲೆಯಲ್ಲಿ X ಮತ್ತು H ಔಷಧಿಗಳನ್ನು ಮಾರಾಟ ಮಾಡುವ ಎಲ್ಲಾ ವೈದ್ಯಕೀಯ ಹಾಗೂ ಫಾರ್ಮಸಿ ಅಂಗಡಿಗಳಲ್ಲಿ ಕಡ್ಡಾಯವಾಗಿ ಸಿ.ಸಿ ಟಿವಿ ಅಳವಡಿಸುವಂತೆ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಆದೇಶಿಸಿದ್ದಾರೆ.

ಸಿ.ಸಿ.ಟಿವಿ ಕ್ಯಾಮೆರಾವನ್ನು ಅಳವಡಿಸಲು ಎಲ್ಲಾ ವೈದ್ಯಕೀಯ/ಫಾರ್ಮಸಿ ಅಂಗಡಿ ಮಾಲೀಕರಿಗೆ ಎರಡು ವಾರಗಳ ಕಾಲಾವಕಾಶ ನೀಡಲಾಗಿದ್ದು, ಜಿಲ್ಲಾ ಔಷಧ ನಿಯಂತ್ರಕರು ಸದ್ರಿ ಅಂಗಡಿಗಳಲ್ಲಿ ಸಿ.ಸಿ ಟಿವಿ ಅಳವಡಿಸಿರುವ ಕುರಿತು ತಪಾಸಣೆ ನಡೆಸಬೇಕು. ಈ ಆದೇಶವನ್ನು ಉಲ್ಲಂಘಿಸುವ ಮೆಡಿಕಲ್/ಫಾರ್ಮಸಿ ಅಂಗಡಿ ಮಾಲೀಕರ ವಿರುದ್ದ ನಿಯಮಾನುಸಾರ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

16 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

16 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

17 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

17 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

17 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

17 hours ago