ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ ದೀನ್ ದಯಾಳ್ ಉಪಾಧ್ಯಾಯ ಗ್ರಾಮ ವಿಕಾಸ್ ಪುರಸ್ಕಾರಕ್ಕೆ ರಾಜ್ಯದ ಒಟ್ಟು ಆರು ಗ್ರಾಮ ಪಂಚಾಯತ್‌ಗಳು ಆಯ್ಕೆಯಾಗಿದ್ದು, ಈ ಪೈಕಿ ಐದು ಪಂಚಾಯತ್‌ಗಳು ಉಡುಪಿ ಜಿಲ್ಲೆಯವು ಎಂಬುದು ವಿಶೇಷ.
ಹೆಬ್ರಿ ತಾಲೂಕಿನ ಮುದ್ರಾಡಿ ಮತ್ತು ಮಡಾಮಕ್ಕಿ, ಕುಂದಾಪುರ ತಾಲೂಕಿನ ವಂಡ್ಸೆ ಮತ್ತು ಹಕ್ಲಾಡಿ, ಕಾರ್ಕಳದ ಸಾಣೂರು ಹಾಗೂ ಬೆಂಗಳೂರಿನ ಹಳನಾಯಕಹಳ್ಳಿ ಗ್ರಾಮ ಪಂಚಾಯತ್‌ಗಳು ಈ ಗೌರವಕ್ಕೆ ಪಾತ್ರವಾಗಿವೆ. ಆಯ್ಕೆಯಾದ ಪ್ರತಿ ಗ್ರಾಮ ಪಂಚಾಯತ್‌ಗೆ ಕನಿಷ್ಠ 75 ಲಕ್ಷ ರೂ. ನಿಂದ ಗರಿಷ್ಠ 1.50 ಕೋಟಿ ರೂ. ವರೆಗೆ ನಗದು ಬಹುಮಾನ ದೊರೆಯಲಿದೆ.
ಮುದ್ರಾಡಿ ಗ್ರಾಮ ಪಂಚಾಯತ್ (ಬಡತನ ಮುಕ್ತ ಮತ್ತು ಸುಧಾರಿತ ಜೀವನೋಪಾಯ ಪಂಚಾಯತ್ ಪ್ರಶಸ್ತಿ):
ಸ್ತ್ರೀಶಕ್ತಿ ಸಂಘಗಳ ಮೂಲಕ ಸ್ವ-ಉದ್ಯೋಗಕ್ಕೆ ಉತ್ತೇಜನ, ಆಧುನಿಕ ಕೃಷಿ ಯಂತ್ರೋಪಕರಣಗಳ ಬಳಕೆ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸ್ವಯಂ ಉದ್ಯೋಗ ಯೋಜನೆಗಳ ಸಮರ್ಪಕ ಅನುಷ್ಠಾನ, ಅರ್ಹ ಫಲಾನುಭವಿಗಳಿಗೆ ಪಿಂಚಣಿ ಸೌಲಭ್ಯ ಹಾಗೂ ಪಡಿತರ ವಿತರಣೆಯಲ್ಲಿ ಶೇ. 100 ರಷ್ಟು ಪ್ರಗತಿ ಸಾಧಿಸಿರುವುದನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ.
ಮಡಾಮಕ್ಕಿ ಗ್ರಾಮ ಪಂಚಾಯತ್ (ಕುಡಿಯುವ ನೀರಿನ ಸುಸ್ಥಿರ ಯೋಜನೆಯ ಪ್ರಶಸ್ತಿ):
ತನ್ನ ವ್ಯಾಪ್ತಿಯಲ್ಲಿ ನೀರಿನ ಮೂಲಗಳನ್ನು ಸಂರಕ್ಷಿಸಿರುವುದು ಮತ್ತು ಸುಸಜ್ಜಿತ ಕ್ರಮಗಳ ಮೂಲಕ ಪ್ರತಿ ಮನೆಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡುತ್ತಿರುವುದಕ್ಕಾಗಿ ಈ ಮಾನ್ಯತೆ ದೊರೆತಿದೆ.
ವಂಡ್ಸೆ ಗ್ರಾಮ ಪಂಚಾಯತ್ (ಆರೋಗ್ಯ ಸೇವೆಗಳ ಪ್ರಶಸ್ತಿ):
ಆರೋಗ್ಯ ಕೇಂದ್ರದ ಸೇವೆಗಳು, ಘನತ್ಯಾಜ್ಯ ನಿರ್ವಹಣೆ, ಶಾಲೆ ಮತ್ತು ಅಂಗನವಾಡಿಗಳಲ್ಲಿ ಆರೋಗ್ಯ ಚಟುವಟಿಕೆಗಳು, ವಿಶೇಷ ಆರೋಗ್ಯ ಶಿಬಿರಗಳು ಹಾಗೂ ಮುಖ್ಯವಾಗಿ ‘ನೀರಾಮಯ ಸೊಸೈಟಿ’ ಮೂಲಕ ಮನೆಗಳಲಲಿರುವ ಅಶಕ್ತರಿಗೆ ನೀಡಲಾಗುತ್ತಿರುವ ಉಪಶಮನ ಆರೈಕೆ ಆರಂಭಿಸಿರುವುದನ್ನು ಗುರುತಿಸಿ ಈ ಪ್ರಶಸ್ತಿ ಘೋಷಿಸಲಾಗಿದೆ.
ಹಕ್ಲಾಡಿ ಗ್ರಾಮ ಪಂಚಾಯತ್ (ಸಾಮಾಜಿಕ ನ್ಯಾಯ ಮತ್ತು ಸಾಮಾಜಿಕ ಭದ್ರತೆಯುಳ್ಳ ಪಂಚಾಯತ್ ಪ್ರಶಸ್ತಿ):
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು, ವಿಕಲಚೇತನರು ಹಾಗೂ ದುರ್ಬಲ ವರ್ಗದವರಿಗೆ ಸರ್ಕಾರದ ಅನುದಾನಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡಿರುವುದು, ಎಲ್ಲಾ ಕ್ಷೇತ್ರಗಳಲ್ಲಿ ಶೇ. 80 ಕ್ಕೂ ಹೆಚ್ಚು ಪ್ರಗತಿ ಸಾಧಿಸಿರುವುದು ಮತ್ತು ಉದ್ಯೋಗ ಖಾತರಿ ಯೋಜನೆಗಳ ಯಶಸ್ವಿ ಅನುಷ್ಠಾನಕ್ಕಾಗಿ ಈ ಆಯ್ಕೆ ನಡೆದಿದೆ.
ಸಾಣೂರು ಗ್ರಾಮ ಪಂಚಾಯತ್ (ಮೂಲಸೌಕರ್ಯ ಕ್ಷೇತ್ರದ ಪ್ರಶಸ್ತಿ):
ಗ್ರಾಮದ ಎಲ್ಲಾ ಭಾಗಗಳಲ್ಲಿ ಬೀದಿದೀಪಗಳ ಅಳವಡಿಕೆ, ಸುಸ್ಥಿರ ಕುಡಿಯುವ ನೀರಿನ ಪೂರೈಕೆ, ವೈಜ್ಞಾನಿಕ ಒಳಚರಂಡಿ ವ್ಯವಸ್ಥೆ, ಗ್ರಾಮೀಣ ರಸ್ತೆಗಳ ಅಭಿವೃದ್ಧಿ, ಶಾಲೆ-ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ಹಾಗೂ ಸ್ಥಳೀಯ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿರುವುದಕ್ಕಾಗಿ ಈ ಪ್ರಶಸ್ತಿ ಲಭಿಸಿದೆ.
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…