Featured

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ

ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ ದೀನ್ ದಯಾಳ್ ಉಪಾಧ್ಯಾಯ ಗ್ರಾಮ ವಿಕಾಸ್ ಪುರಸ್ಕಾರಕ್ಕೆ ರಾಜ್ಯದ ಒಟ್ಟು ಆರು ಗ್ರಾಮ ಪಂಚಾಯತ್‌ಗಳು ಆಯ್ಕೆಯಾಗಿದ್ದು, ಈ ಪೈಕಿ ಐದು ಪಂಚಾಯತ್‌ಗಳು ಉಡುಪಿ ಜಿಲ್ಲೆಯವು ಎಂಬುದು ವಿಶೇಷ.

ಹೆಬ್ರಿ ತಾಲೂಕಿನ ಮುದ್ರಾಡಿ ಮತ್ತು ಮಡಾಮಕ್ಕಿ, ಕುಂದಾಪುರ ತಾಲೂಕಿನ ವಂಡ್ಸೆ ಮತ್ತು ಹಕ್ಲಾಡಿ, ಕಾರ್ಕಳದ ಸಾಣೂರು ಹಾಗೂ ಬೆಂಗಳೂರಿನ ಹಳನಾಯಕಹಳ್ಳಿ ಗ್ರಾಮ ಪಂಚಾಯತ್‌ಗಳು ಈ ಗೌರವಕ್ಕೆ ಪಾತ್ರವಾಗಿವೆ. ಆಯ್ಕೆಯಾದ ಪ್ರತಿ ಗ್ರಾಮ ಪಂಚಾಯತ್‌ಗೆ ಕನಿಷ್ಠ 75 ಲಕ್ಷ ರೂ. ನಿಂದ ಗರಿಷ್ಠ 1.50 ಕೋಟಿ ರೂ. ವರೆಗೆ ನಗದು ಬಹುಮಾನ ದೊರೆಯಲಿದೆ.

ಮುದ್ರಾಡಿ ಗ್ರಾಮ ಪಂಚಾಯತ್ (ಬಡತನ ಮುಕ್ತ ಮತ್ತು ಸುಧಾರಿತ ಜೀವನೋಪಾಯ ಪಂಚಾಯತ್ ಪ್ರಶಸ್ತಿ):
ಸ್ತ್ರೀಶಕ್ತಿ ಸಂಘಗಳ ಮೂಲಕ ಸ್ವ-ಉದ್ಯೋಗಕ್ಕೆ ಉತ್ತೇಜನ, ಆಧುನಿಕ ಕೃಷಿ ಯಂತ್ರೋಪಕರಣಗಳ ಬಳಕೆ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸ್ವಯಂ ಉದ್ಯೋಗ ಯೋಜನೆಗಳ ಸಮರ್ಪಕ ಅನುಷ್ಠಾನ, ಅರ್ಹ ಫಲಾನುಭವಿಗಳಿಗೆ ಪಿಂಚಣಿ ಸೌಲಭ್ಯ ಹಾಗೂ ಪಡಿತರ ವಿತರಣೆಯಲ್ಲಿ ಶೇ. 100 ರಷ್ಟು ಪ್ರಗತಿ ಸಾಧಿಸಿರುವುದನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ.

ಮಡಾಮಕ್ಕಿ ಗ್ರಾಮ ಪಂಚಾಯತ್ (ಕುಡಿಯುವ ನೀರಿನ ಸುಸ್ಥಿರ ಯೋಜನೆಯ ಪ್ರಶಸ್ತಿ):
ತನ್ನ ವ್ಯಾಪ್ತಿಯಲ್ಲಿ ನೀರಿನ ಮೂಲಗಳನ್ನು ಸಂರಕ್ಷಿಸಿರುವುದು ಮತ್ತು ಸುಸಜ್ಜಿತ ಕ್ರಮಗಳ ಮೂಲಕ ಪ್ರತಿ ಮನೆಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡುತ್ತಿರುವುದಕ್ಕಾಗಿ ಈ ಮಾನ್ಯತೆ ದೊರೆತಿದೆ.

ವಂಡ್ಸೆ ಗ್ರಾಮ ಪಂಚಾಯತ್ (ಆರೋಗ್ಯ ಸೇವೆಗಳ ಪ್ರಶಸ್ತಿ):
ಆರೋಗ್ಯ ಕೇಂದ್ರದ ಸೇವೆಗಳು, ಘನತ್ಯಾಜ್ಯ ನಿರ್ವಹಣೆ, ಶಾಲೆ ಮತ್ತು ಅಂಗನವಾಡಿಗಳಲ್ಲಿ ಆರೋಗ್ಯ ಚಟುವಟಿಕೆಗಳು, ವಿಶೇಷ ಆರೋಗ್ಯ ಶಿಬಿರಗಳು ಹಾಗೂ ಮುಖ್ಯವಾಗಿ ‘ನೀರಾಮಯ ಸೊಸೈಟಿ’ ಮೂಲಕ ಮನೆಗಳಲಲಿರುವ ಅಶಕ್ತರಿಗೆ ನೀಡಲಾಗುತ್ತಿರುವ ಉಪಶಮನ ಆರೈಕೆ ಆರಂಭಿಸಿರುವುದನ್ನು ಗುರುತಿಸಿ ಈ ಪ್ರಶಸ್ತಿ ಘೋಷಿಸಲಾಗಿದೆ.

ಹಕ್ಲಾಡಿ ಗ್ರಾಮ ಪಂಚಾಯತ್ (ಸಾಮಾಜಿಕ ನ್ಯಾಯ ಮತ್ತು ಸಾಮಾಜಿಕ ಭದ್ರತೆಯುಳ್ಳ ಪಂಚಾಯತ್ ಪ್ರಶಸ್ತಿ):
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು, ವಿಕಲಚೇತನರು ಹಾಗೂ ದುರ್ಬಲ ವರ್ಗದವರಿಗೆ ಸರ್ಕಾರದ ಅನುದಾನಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡಿರುವುದು, ಎಲ್ಲಾ ಕ್ಷೇತ್ರಗಳಲ್ಲಿ ಶೇ. 80 ಕ್ಕೂ ಹೆಚ್ಚು ಪ್ರಗತಿ ಸಾಧಿಸಿರುವುದು ಮತ್ತು ಉದ್ಯೋಗ ಖಾತರಿ ಯೋಜನೆಗಳ ಯಶಸ್ವಿ ಅನುಷ್ಠಾನಕ್ಕಾಗಿ ಈ ಆಯ್ಕೆ ನಡೆದಿದೆ.

ಸಾಣೂರು ಗ್ರಾಮ ಪಂಚಾಯತ್ (ಮೂಲಸೌಕರ್ಯ ಕ್ಷೇತ್ರದ ಪ್ರಶಸ್ತಿ):
ಗ್ರಾಮದ ಎಲ್ಲಾ ಭಾಗಗಳಲ್ಲಿ ಬೀದಿದೀಪಗಳ ಅಳವಡಿಕೆ, ಸುಸ್ಥಿರ ಕುಡಿಯುವ ನೀರಿನ ಪೂರೈಕೆ, ವೈಜ್ಞಾನಿಕ ಒಳಚರಂಡಿ ವ್ಯವಸ್ಥೆ, ಗ್ರಾಮೀಣ ರಸ್ತೆಗಳ ಅಭಿವೃದ್ಧಿ, ಶಾಲೆ-ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ಹಾಗೂ ಸ್ಥಳೀಯ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿರುವುದಕ್ಕಾಗಿ ಈ ಪ್ರಶಸ್ತಿ ಲಭಿಸಿದೆ.

Vishwa News 24

Recent Posts

ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ ಗೊತ್ತಿಲ್ಲ : ಶೋಭಾ ಕರಂದ್ಲಾಜೆ – vishwanews24

ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ  ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…

7 hours ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ – vishwanews24

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…

8 hours ago

ಕಾಪು ಶ್ರೀ ಹಳೇ ಮಾರಿಯಮ್ಮ ದೇವಿಗೆ ವಿಶೇಷ ಲಕ್ಷಪುಷ್ಪಾರ್ಚನೆ – vishwanews24

ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…

8 hours ago

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ – vishwanews24

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…

9 hours ago

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು – vishwanews24

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…

10 hours ago

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ – vishwanews24

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…

10 hours ago