Featured

ಉಡುಪಿ : ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿ ಪ್ರಕಟ: ಜಿಲ್ಲಾಧಿಕಾರಿ  – Vishwanews24

ಉಡುಪಿ : ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿ ಪ್ರಕಟ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ: ಚುನಾವಣಾ ಆಯೋಗದ ನಿರ್ದೇಶನ ಅನ್ವಯ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ವಿವಿಧ ರಾಜಕೀಯ ಪಕ್ಷಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

2023 ಜನವರಿ 1 ರ ಅರ್ಹತಾ ದಿನಾಂಕವನ್ನಾಗಿಟ್ಟುಕೊಂಡು ಐದು ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯನ್ನು ಜನವರಿ 5 ರಂದು ಎಲ್ಲಾ ಮತಗಟ್ಟೆಗಳಲ್ಲಿ, ಉಪ ವಿಭಾಗೀಯ, ತಾಲೂಕು ಕಚೇರಿ ಸೇರಿದಂತೆ ಜಿಲ್ಲಾಧಿಕಾರಿಯ ಕಚೇರಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದರು.

ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ 1,12,126 ಗಂಡಸರು, 1,17,421 ಮಹಿಳೆಯರು, 3 ಅಲ್ಪಸಂಖ್ಯಾತರು ಸೇರಿದಂತೆ ಒಟ್ಟು 2,29,550 ಮತದಾರರಿದ್ದಾರೆ. ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ 98,224 ಗಂಡಸರು, 1,06,298 ಮಹಿಳೆಯರು, 3 ಅಲ್ಪಸಂಖ್ಯಾತರು ಸೇರಿದಂತೆ ಒಟ್ಟು 2,04,525 ಮತದಾರರಿದ್ದಾರೆ. ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ 1,02,192 ಗಂಡಸರು, 1,09,439 ಮಹಿಳೆಯರು ಸೇರಿದಂತೆ ಒಟ್ಟು 2,11,631 ಮತದಾರರಿದ್ದು, ಅಲ್ಪಸಂಖ್ಯಾತ ಮತದಾರರಿರುವುದಿಲ್ಲ. ಕಾಪು ವಿಧಾನಸಭಾ ಕ್ಷೇತ್ರದಲ್ಲಿ 88,114 ಗಂಡಸರು, 95,968 ಮಹಿಳೆಯರು, 6 ಅಲ್ಪಸಂಖ್ಯಾತರು ಸೇರಿದಂತೆ ಒಟ್ಟು 1,84,088 ಮತದಾರರಿದ್ದಾರೆ. ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ 89,404 ಗಂಡಸರು, 97,047 ಮಹಿಳೆಯರು, ಸೇರಿದಂತೆ ಒಟ್ಟು 1,86,451 ಮತದಾರರಿದ್ದಾರೆ.

ಜಿಲ್ಲೆಯ ಒಟ್ಟು 5 ವಿಧಾನಸಭಾ ಕ್ಷೇತ್ರಗಳಿಂದ 4,90,060 ಗಂಡಸರು, 5,26173 ಮಹಿಳೆಯರು, 12 ಅಲ್ಪಸಂಖ್ಯಾತರು ಸೇರಿದಂತೆ ಒಟ್ಟು 10,16,245 ಮತದಾರರಿದ್ದಾರೆ ಎಂದರು. ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಅವಧಿಯಲ್ಲಿ ಹೊಸದಾಗಿ 16,827 ಮತದಾರರು ಸೇರ್ಪಡೆಯಾದರೆ, 5783 ಮತದಾರರನ್ನು ತೆಗೆದುಹಾಕಲಾಗಿದೆ. 13,321 ತಿದ್ದುಪಡಿ ಹಾಗೂ ವರ್ಗಾವಣೆಗೊಳಿಸಲಾಗಿದೆ. ಈ ಬಾರಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ಸಂದರ್ಭದಲ್ಲಿ 13,816 ಯುವ ಮತದಾರರು ಹಾಗೂ 11,331 ವಿಶೇಷ ಚೇತನರು ನೋಂದಣಿಯಾಗಿರುತ್ತಾರೆ ಎಂದರು. ಮತದಾರರ ಪಟ್ಟಿಗೆ ಸಂಬAದಿಸಿದ ಮಾಹಿತಿಗಳನ್ನು ಸಾರ್ವಜನಿಕರು ಪಡೆಯುವ ಸಲುವಾಗಿ , ಉಡುಪಿ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಮಟ್ಟದ ಮತದಾರರ ಸಹಾಯವಾಣಿ ಕೇಂದ್ರ ತೆರೆದು ಸಾರ್ವಜನಿಕರು ಮಾಹಿತಿಗಳನ್ನು ಉಚಿತವಾಗಿ ಕರೆಗಳ ಮೂಲಕ ಪಡೆಯಲು ಟೋಲ್ ಪ್ರೀ ಸಂಖ್ಯೆ 1950 ಅಳವಡಿಸಲಾಗಿದೆ ಸಾರ್ವಜನಿಕರು ಇದರ ಪ್ರಯೋಜನ ಪಡೆಯುವಂತೆ ತಿಳಿಸಿದರು. ಜನವರಿ 25 ರಂದು ರಾಷ್ಟ್ರೀಯ ಮತದಾರರ ದಿನಾಚರಣ ಕಾರ್ಯಕ್ರಮವನ್ನು ಅಜ್ಜರಕಾಡು ಪುರಭವನದಲ್ಲಿ ನಡೆಯುತ್ತಿದ್ದು, ಅದೇ ರೀತಿಯಲ್ಲಿ ತಾಲೂಕು ಮತ್ತು ಕತಗಟ್ಟೆಗಳ ವ್ಯಪ್ತಿಯಲ್ಲಿ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೆಕು ಎಂದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago