ಉಡುಪಿ : ಕರಾವಳಿಯಲ್ಲಿ ಇದೀಗ ಜಾತ್ರಾಮಹೋತ್ಸವಗಳ ಸೀಸನ್ ಪ್ರಾರಂಭವಾಗಿದ್ದು, ಅದರ ಬೆನ್ನಲ್ಲೇ ಅನ್ಯಧರ್ಮೀಯರಿಗೆ ಜಾತ್ರೆಗಳಲ್ಲಿ ವ್ಯಾಪಾರಕ್ಕೆ ಅವಕಾಶ ನೀಡಬಾರದೆಂದು
ಆಗ್ರಹ ಕೇಳಿ ಬಂದಿದೆ. ಕುಂದಾಪುರ ತಾಲೂಕಿನಲ್ಲಿ ನಡೆಯಲಿರುವ ಎರಡು ಮಹತ್ವದ ಜಾತ್ರೆಗಳಲ್ಲಿ ಈ ಬಹಿಷ್ಕಾರದ ಬಿಸಿ ತಟ್ಟಿದೆ. ಕರಾವಳಿಯಲ್ಲಿ ಅತಿ ದೊಡ್ಡ ಹಬ್ಬ ಎನಿಸಿರುವ ಕೋಟೇಶ್ವರದ ಕೊಡಿ ಹಬ್ಬ ಡಿಸೆಂಬರ್ 8ರಂದು ನಡೆಯಲಿದ್ದರೆ. ಡಿಸೆಂಬರ್ 9ರಂದು ಉಪ್ಪಂದ ಜಾತ್ರೆ ನಡೆಯಲಿದೆ. ಈಗಾಗಲೇ ಕೊಡಿ ಹಬ್ಬದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡಿದಂತೆ ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದ್ದು. ಆಡಳಿತ ಮಂಡಳಿಗೆ ಮನವಿಯನ್ನು ನೀಡಿದೆ.
ಹಿಂದೂ ಸಮಾಜದ ಮೇಲೆ ನಿರಂತರ ದಾಳಿ ಹಾಗೂ ದೇಶದಲ್ಲಿ ಭಯೋತ್ಪಾದನೆ, ಲವ್ ಜಿಹಾದ್ ನಂತಹ ಪ್ರಕರಣ ಹೆಚ್ಚಿರುವ ಕಾರಣಕ್ಕೆ ಮುಸ್ಲಿಂ ವ್ಯಾಪಾರಿಗಳಿಗೆ ಹಿಂದೂ ಜಾತ್ರೆಗಳಲ್ಲಿ ವ್ಯಾಪಾರಕ್ಕೆ ಅವಕಾಶ ನೀಡುವುದಿಲ್ಲ. ಈ ಹಿನ್ನಲೆ ಈಗಾಗಲೇ ದೇವಸ್ಥಾನದ ಆಡಳಿತ ಮಂಡಳಿಗೆ ಮನವಿಯನ್ನು ಮಾಡಿದ್ದಾರೆ.
ಕೋಟೇಶ್ವರದ ಜಾತ್ರೆಯಲ್ಲಿ ಅನ್ಯಧರ್ಮಿಯರಿಗೆ ಅವಕಾಶ ಇಲ್ಲ ಎಂದು ಈಗಾಗಲೇ ದೇವಸ್ಥಾನದ ಆಡಳಿತ ಮಂಡಳಿ ನಿರ್ಧಾರ ಕೈಗೊಂಡಿದೆ. ಸಹಾಯಕ ಕಮಿಷನರ್ ಗೆ ನಿರ್ಣಯವನ್ನು ರವಾನೆ ಮಾಡಿದೆ.
ಇನ್ನು ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲೂ ಧರ್ಮ ದಂಗಲ್ ನಡೆಯಲಿದ್ದು, ಡಿ 9 10 11ರಂದು ನೆರವೇರಲಿರುವ ಜಾತ್ರೆ ದೇವಸ್ಥಾನದ ಆವರಣದಲ್ಲಿ ಅನ್ಯಧರ್ಮೀಯರ ವ್ಯಾಪಾರಕ್ಕೆ ಅವಕಾಶ ನೀಡಬಾರದೆಂದು ಹಿಂದೂ ಸಂಘಟನೆಗಳು ಮನವಿ ಮಾಡಿವೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…