Featured

ಉಡುಪಿ: ಜಿಲ್ಲೆಯ ಟೋಲ್ ಗೇಟ್ ಗಳಲ್ಲಿ ಹಿಂದಿ ಭಾಷಿಕರಿಂದ ದೌರ್ಜನ್ಯ: ಕರವೇ ಎಚ್ಚರಿಕೆ – vishwanews24

ಉಡುಪಿ: ಜಿಲ್ಲೆಯ ಟೋಲ್ ಗೇಟ್ ಗಳಲ್ಲಿ ಹಿಂದಿ ಭಾಷಿಕರಿಂದ ದೌರ್ಜನ್ಯ: ಕರವೇ ಎಚ್ಚರಿಕೆ

ಉಡುಪಿ ಜಿಲ್ಲೆಯ ಟೋಲ್ ಗೇಟ್ ಗಳಲ್ಲಿ ಹಿಂದಿ ಭಾಷಿಕರಿಂದ ದೌರ್ಜನ್ಯ ಹೆಚ್ಚಾಗುತ್ತಿದ್ದು, ಕನ್ನಡಿಗರ ಮೇಲೆ ದರ್ಪ ತೋರಿಸುತ್ತಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಗೌರವಾಧ್ಯಕ್ಷ ಅನ್ಸಾರ್ ಅಹಮ್ಮದ್ ಹೇಳಿದರು. ಉಡುಪಿಯಲ್ಲಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಕೆಲ ದಿನಗಳ ಹಿಂದೆ ಸಾಸ್ತಾನ ಟೋಲ್ ಗೇಟ್ ನಲ್ಲಿ ಮಾಜಿ ಸೈನಿಕರೊಬ್ಬರನ್ನು ಅವಮಾನಿಸಲಾಯಿತು. ಅಲ್ಲದೇ ಕನ್ನಡಪರ ಸಂಘಟನೆ ವಾಹನವನ್ನು ಹೆಜಮಾಡಿ ಟೋಲ್ ಗೇಟ್ ನಲ್ಲಿ ಅವಮಾನಿಸಿದ್ದಾರೆ. ಹಿಂದಿ ಭಾಷಿಕರಿಂದ ಕನ್ನಡಿಗರ ಮೇಲೆ ಪದೇ ಪದೇ ದೌರ್ಜನ್ಯ ನಡೆಯುತ್ತಿದೆ. ಈ ಘಟನೆ ಪುನರಾವರ್ತನೆ ಆದರೆ ಟೋಲ್ ಗೇಟ್ ಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಸಿದರು. ಅಲ್ಲದೇ ಟೋಲ್ ಗೇಟ್ ಗಳಲ್ಲಿ ಅನ್ಯ ರಾಜ್ಯದವರನ್ನು ತೆಗೆದು ಹಾಕಿ ಎಂದು ಒತ್ತಾಯಿಸಿದರು. ಕನ್ನಡಿಗರ ಮೇಲೆ ದೌರ್ಜನ್ಯ ತೋರಿಸುವುದಕ್ಕಾಗಿಯೇ ಅನ್ಯ ಭಾಷಿಕರನ್ನು ಟೋಲ್ ಗೇಟ್ ಗಳಲ್ಲಿ ನೇಮಿಸಿದ್ದಾರೆಯೇ ಎನ್ನುವ ಸಂಶಯ ವ್ಯಕ್ತವಾಗುತ್ತಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಪುಮುಖರಾದ ಸುಜಯ್ ಪೂಜಾರಿ,ಜ್ಯೋತಿ ಶೇರಿಗಾರ್ತಿ, ಸಯ್ಯದ್ ಇಝಾಜ್, ಸುಧೀರ್ ಪೂಜಾರಿ, ದೇವಕಿ ಬಾರ್ಕೂರು ಉಪಸ್ಥಿತರಿದ್ದರು.

ಇದನ್ನೂ ಓದಿ:

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago