Featured

ಉಡುಪಿ: ಜಿಲ್ಲೆಯ ಪ್ರವಾಸಿ ಸ್ಥಳಗಳಿಗೆ ಹಾಗೂ ಕಡಲ ತೀರಗಳಿಗೆ ಭೇಟಿ ನೀಡುವ ಪ್ರವಾಸಿಗರ ಜೀವ ರಕ್ಷಣೆ ಕುರಿತು – vishwanews24

ಉಡುಪಿ: ಜಿಲ್ಲೆಯ ಪ್ರವಾಸಿ ಸ್ಥಳಗಳಿಗೆ ಹಾಗೂ ಕಡಲ ತೀರಗಳಿಗೆ ಭೇಟಿ ನೀಡುವ ಪ್ರವಾಸಿಗರ ಜೀವ ರಕ್ಷಣೆ ಕುರಿತು

  ಉಡುಪಿ: ಜಿಲ್ಲೆಗೆ ವಿವಿಧ ರಾಜ್ಯಗಳಿಂದ, ಜಿಲ್ಲೆಗಳಿಂದ ಪ್ರವಾಸಿಗರು ಹಾಗೂ ಶಾಲಾ ಮಕ್ಕಳು ಶೈಕ್ಷಣಿಕ ಪ್ರವಾಸಕ್ಕೆಂದು ಆಗಮಿಸುತ್ತಿರುತ್ತಾರೆ. ಬರುವಂತ ಪ್ರವಾಸಿಗರು ಹಾಗೂ ಶಾಲಾ ಮಕ್ಕಳು ಸಮುದ್ರ ತೀರದಲ್ಲಿ ಬಂದು ನೀರಿಗೆ ಇಳಿದು ನೀರಿನಲ್ಲಿ ಆಟ ಆಡುವುದು, ಸ್ನಾನ ಮಾಡುವುದು ಸರ್ವೆ ಸಾಮಾನ್ಯವಾಗಿರುತ್ತದೆ. ಆದರೆ ಬರುವಂತ ಪ್ರವಾಸಿಗರಿಗೆ ನೀರಿನ ಅಬ್ಬರದ ಬಗ್ಗೆ ತಿಳುವಳಿಕೆ ಇಲ್ಲದೇ ಇದ್ದು ನೀರಿಗೆ ಈಜಲು ಹೋಗಿ ಪ್ರಾಣಾಪಾಯ ತಂದುಕೊಳ್ಳುತ್ತಾರೆ. 

   ಜಿಲ್ಲೆಯ ಪ್ರವಾಸಿ ತಾಣಗಳಿಗೆ ಆಗಮಿಸುವ ಪ್ರವಾಸಿಗರು ನದಿ, ಜಲಪಾತಗಳು ಹಾಗೂ ಸಮುದ್ರದ ಅಲೆಗಳು ತುಂಬಾ ಅಪಾಯಕಾರಿಯಾಗಿರುವುದರಿಂದ ಸದರಿ ಸ್ಥಳಗಳಲ್ಲಿ ಪಾಲಕರು ತಮ್ಮ ಮಕ್ಕಳು ನೀರಿಗೆ ಇಳಿಯದಂತೆ ಹಾಗೂ ಶೈಕ್ಷಣಿಕ ಪ್ರವಾಸಕ್ಕೆ ಬರುವ ಶಾಲಾ–ಕಾಲೇಜುಗಳ ವಿದ್ಯಾರ್ಥಿಗಳೊಂದಿಗೆ ಆಗಮಿಸುವ ಶಿಕ್ಷಕರು / ಉಪನ್ಯಾಸಕರು ಹಾಗೂ ಮುಖ್ಯೋಪಾದ್ಯಾಯರು ತಮ್ಮ ಶಾಲಾ–ಕಾಲೇಜು ಮಕ್ಕಳಿಗೆ ಸೂಕ್ತ ತಿಳುವಳಿಕೆಯನ್ನು ನೀಡಿ ಹೆಚ್ಚಿನ ಜವಾಬ್ದಾರಿಯನ್ನು ವಹಿಸಿ, ನೀರಿಗೆ ಇಳಿಯದಂತೆ ನೋಡಿಕೊಳ್ಳಬೇಕು.  ಪ್ರವಾಸದ ಸಂಧರ್ಭದಲ್ಲಿ ಮಕ್ಕಳನ್ನು ಯಾವುದೇ ಅಪಾಯಕಾರಿ ಸ್ಥಳಗಳಿಗೆ ಕರೆದುಕೊಂಡು ಹೋಗಬಾರದು ಹಾಗೂ ಎಲ್ಲಾ ಸ್ಥಳಗಳಲ್ಲಿ ಪ್ರವಾಸಿ ಉಸ್ತುವಾರಿ ವಹಿಸಿದ ಸಿಬ್ಬಂದಿಯವರು ವಿದ್ಯಾರ್ಥಿಗಳ ಜೊತೆ ಇದ್ದು ವಿದ್ಯಾರ್ಥಿಗಳ ಸುರಕ್ಷತೆಯ ಕುರಿತು ಎಲ್ಲಾ ಅವಶ್ಯ ಕ್ರಮಗಳನ್ನು ಕೈಗೊಳ್ಳಬೇಕು. ಪ್ರವಾಸದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸಂಬ0ಧಿಸಿದ0ತೆ ಉಂಟಾಗುವ ಯಾವುದೇ ಅವಘಡಕ್ಕೆ / ಹಾನಿಗೆ ಶಾಲಾ ಮುಖ್ಯಸ್ಥರು ಮತ್ತು ಪ್ರವಾಸದ ಉಸ್ತುವಾರಿ ವಹಿಸಿದ ಸಿಬ್ಬಂದಿಯವರೇ ಜವಾಬ್ದಾರರಾಗಿರುತ್ತಾರೆ.

  ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯಿಂದ ಗುರುತಿಸಿದ ಪ್ರಮುಖ ಬೀಚ್‌ಗಳಾದ ಮಲ್ಪೆ ಬೀಚ್, ಕಾಪು ಬೀಚ್, ಪಡುಬಿದ್ರಿ ಬ್ಲೂ ಫ್ಲಾö್ಯಗ್ ಬೀಚ್, ಪಡುಬಿದ್ರಿ ಮುಖ್ಯ ಬೀಚ್ ಹಾಗೂ ತ್ರಾಸಿ ಮರವಂತೆ ಬೀಚ್‌ಗಳಲ್ಲಿ “BATHING ZONE” ವ್ಯಾಪ್ತಿಯನ್ನು ಗುರುತಿಸಲಾಗಿದ್ದು, ಪ್ರವಾಸಿಗರು ಪ್ರವಾಸೋದ್ಯಮ ಇಲಾಖೆಯಿಂದ ಗುರುತಿಸಿದ ಬೀಚುಗಳಲ್ಲಿ “BATHING ZONE” ವ್ಯಾಪ್ತಿಯಲ್ಲಿ ನಿಯೋಜಿಸಿದ ಪೊಲೀಸ್, ಲೈಫ್ ಗಾರ್ಡ್, ಪ್ರವಾಸಿಮಿತ್ರ ಹಾಗೂ ಭದ್ರತಾ ಸಿಬ್ಬಂದಿಗಳೂ ನೀಡುವ ಎಚ್ಚರಿಕೆಯ ಸೂಚನೆಯನ್ನು ಪಾಲಿಸುವುದರ ಮೂಲಕ ಪ್ರವಾಸಿ ತಾಣಗಳನ್ನು ದೂರದಿಂದಲೇ ವೀಕ್ಷಿಸಿ ಸಂಭ್ರಮಿಸಿ ಅಲ್ಲಿಂದ ಸುರಕ್ಷಿತವಾಗಿ ತೆರಳುವಂತೆ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago