ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿಯ ನಿಸ್ವಾರ್ಥ ಕಾರ್ಯಕರ್ತರಿಂದ ಮಾ.2 ರಂದು ಮಧ್ಯಾಹ್ನ 3 ಗಂಟೆಗೆ ಬೃಹತ್ ಬೈಕ್ ರ‍್ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ.
ಬಿಜೆಪಿಯ ಭದ್ರಕೋಟೆಯಾಗಿರುವ ಉಡುಪಿ ಜಿಲ್ಲೆಯ ಸ್ಥಳೀಯ ಅಭ್ಯರ್ಥಿಯನ್ನೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿಕೊಳ್ಳುವ ಉದ್ದೇಶದಿಂದ ಈ ರ‍್ಯಾಲಿ ಹಮ್ಮಿಕೊಳ್ಳಲಾಗಿದ್ದು, ಮಲ್ಪೆಯ ಏಳೂರು ಮೊಗುವೀರ ಭವನದ ಪಾರ್ಕಿಂಗ್ ಏರಿಯಾದಿಂದ ಆರಂಭಗೊಳ್ಳುವ ಈ ರ್ಯಾಲಿ ಉಡುಪಿಯ ಬಿಜೆಪಿ ಕಚೇರಿಯವರೆಗೆ ನಡೆಯಲಿದೆ. ಈ ರ‍್ಯಾಲಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್ ಕೂಡ ಭಾರೀ ವೈರಲ್ ಆಗಿದ್ದು, ಇದರ ಹಿಂದೆ ಇರುವ ನಿಸ್ವಾರ್ಥ ಕಾರ್ಯಕರ್ತರ ಹೆಸರು ಮಾತ್ರ ಬಹಿರಂಗವಾಗಿಲ್ಲ. ಆದರೆ ಇದರ ಹಿಂದೆ ಉಡುಪಿ ಜಿಲ್ಲೆಯ ಲೋಕಸಭಾ ಚುನಾವಣೆಯಲ್ಲಿ ಉಮೇದ್ವಾರಿಕೆ ಬಯಸಿದ ಮುಖಂಡನ ಪಾತ್ರವೂ ಇದೆ ಎನ್ನುವುದು ಚರ್ಚೆಗೆ ಕಾರಣವಾಗಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…