Featured

ಉಡುಪಿ ಜಿಲ್ಲೆಯ ಮಾಜಿ ಜಿಲ್ಲಾಧ್ಯಕ್ಷ -ಹಿರಿಯ ಮುಖಂಡರು ಸೇರಿದಂತೆ ಹಲವಾರು ಮಂದಿ ಕಾಂಗ್ರೆಸ್ ಸೇರ್ಪಡೆಯ ಬಗ್ಗೆ ರಹಸ್ಯ ಸಭೆ : vishwanews24

ಉಡುಪಿ ಜಿಲ್ಲೆಯ ಮಾಜಿ ಜಿಲ್ಲಾಧ್ಯಕ್ಷ -ಹಿರಿಯ ಮುಖಂಡರು ಸೇರಿದಂತೆ ಹಲವಾರು ಮಂದಿ ಕಾಂಗ್ರೆಸ್ ಸೇರ್ಪಡೆಯ ಬಗ್ಗೆ ರಹಸ್ಯ ಸಭೆ : vishwanews24

ಸ್ಪೋಟಕ ಮಾಹಿತಿ ಹೊರಬಿಟ್ಟ ರಹಸ್ಯ ಸಭೆಯಲ್ಲಿದ್ದ ಕಾರ್ಯಕರ್ತ

ಉಡುಪಿ: ಉಡುಪಿ ಜಿಲ್ಲೆಯ ಹಿರಿಯ ಬಿಜೆಪಿ ಮುಖಂಡರು ಮಾಜಿ ಜಿಲ್ಲಾಧ್ಯಕ್ಷರುಗಳು ಕಾರ್ಕಳ ಬ್ರಹ್ಮಾವರ ಭಾಗದ ಮಾಜಿ ತಾಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯರು ಮತ್ತು ಉಡುಪಿ ಭಾಗದ ಒಂದಿಷ್ಟು ಬಿಲ್ಲವ,ಬಂಟ ಸಮಾಜದ ಮುಖಂಡರು ಸೇರಿದಂತೆ ಅನೇಕರು ಕಾಂಗ್ರೆಸ್ ಸೇರ್ಪಡೆಯ ವಿಚಾರ ಚಾಲ್ತಿಯಲ್ಲಿರುವಾಗಲೇ ಮಾಜಿ ಶಾಸಕ ಬಿ ಎಂ ಸುಕುಮಾರ್ ಶೆಟ್ಟಿಯ ಮನೆಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಂದು ಹೋದ ನಂತರ ಈ ವಿಚಾರ ಮತ್ತಷ್ಟು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಬೈಂದೂರಿನ ಮಾಜಿ ಶಾಸಕ ಬಿಎಂ ಕುಮಾರ್ ಶೆಟ್ಟಿಯ ಜೊತೆ ಸಮಾಲೋಚನೆ ನಡೆಸಿದ್ದು ಮುಂದಿನ ದಿನದಲ್ಲಿ ಉಡುಪಿ ಸೇರಿದಂತೆ ವಿವಿಧ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರಸ್ ಪಕ್ಷವನ್ನ ಹೆಚ್ಚು ರೀತಿಯಲ್ಲಿ ಸಂಘಟಿಸುವ ಬಗ್ಗೆ ಮಾತುಕತೆ ನಡೆದಿರಬಹುದಾಗಿದೆ ಎನ್ನಲಾಗುತ್ತಿದೆ.

ಸದ್ಯ ಉಡುಪಿ ಜಿಲ್ಲಾ ಬಿಜೆಪಿಯಲ್ಲಿ ಕಡೆಗಣಿಸಲ್ಪಟ್ಟ ಹಿರಿಯ ಬಿಜೆಪಿ ಮುಖಂಡರು ಮಾಜಿ ಜಿಲ್ಲಾಧ್ಯಕ್ಷರುಗಳು ಮಾಜಿ ತಾಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತಿ ಸೇರಿದಂತೆ ವಿವಿಧ ಸಮಾಜದ ಮುಖಂಡರುಗಳು ಅತ್ಯಂತ ಬೇಸರಗೊಂಡಿದ್ದು ಇವರೆಲ್ಲರೂ ಒಂದುಗೂಡಿ ಉಡುಪಿಯಲ್ಲಿ ಬುಧವಾರ ರಹಸ್ಯ ಜಾಗದಲ್ಲಿ ಸಭೆ ನಡೆಸಿರುವ ಬಗ್ಗೆ ಮಾಹಿತಿ ಈಗಷ್ಟೇ ಹೊರ ಬಿದ್ದಿದೆ.

ಉಡುಪಿ ಜಿಲ್ಲಾ ಬಿಜೆಪಿಯಲ್ಲಿ ಕಡೆಗಣಿಸಲ್ಪಟ್ಟಿರುವ ಇವರುಗಳು ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಾರ್ಟಿ ಸೇರುವರೇ ಎಂಬುದು ಯಕ್ಷಪ್ರಶ್ನೆಯಾದರೂ ನಿನ್ನೇ ನಡೆದ ಸಭೆಯಲ್ಲಿ ಎಲ್ಲಾ ವಿಚಾರಗಳು ಪ್ರಸ್ತಾಪಗೊಂಡಿದೆ ಎನ್ನಲಾಗುತ್ತಿದೆ.

ಮುಂದಿನ ಲೋಕಸಭಾ ಚುನಾವಣೆಗೆ ಈ ಕಾರ್ಯತಂತ್ರ ನಡೆಯುತ್ತಿದೆ ಎನ್ನುವ ಮಾಹಿತಿ ಇದ್ದು ಸದ್ಯ ಈ ಬೆಳವಣಿಗೆ ಹೇಗೆ ಮುಂದುವರೆಯುತ್ತೆ ಎಂಬುದು ಕಾದು ನೋಡಬೇಕಾಗಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago