ಉಡುಪಿ

ಉಡುಪಿ:  ಜಿಲ್ಲೆಯ ಮೀನುಗಾರರಿಂದ ವಿವಿಧ ಬೇಡಿಕೆಗಳ ಬಗ್ಗೆ ಕೇಂದ್ರ ಮೀನುಗಾರಿಕಾ ಸಚಿವರಿಗೆ ಮನವಿ ಸಲ್ಲಿಕೆ – Vishwanews24

ಉಡುಪಿ:  ಜಿಲ್ಲೆಯ ಮೀನುಗಾರರಿಂದ ವಿವಿಧ ಬೇಡಿಕೆಗಳ ಬಗ್ಗೆ ಕೇಂದ್ರ ಮೀನುಗಾರಿಕಾ ಸಚಿವರಿಗೆ ಮನವಿ ಸಲ್ಲಿಕೆ

ಉಡುಪಿ: ಜಿಲ್ಲೆಯ ಮೀನುಗಾರರು ತಮ್ಮ ವಿವಿಧ ಬೇಡಿಕೆಗಳ ಬಗ್ಗೆ , ಸಾಗರ ಪರಿಕ್ರಮದ ಅಂಗವಾಗಿ ಇಂದು ಉಡುಪಿ ಭೇಟಿ ನೀಡಿದ ಕೇಂದ್ರ ಮೀನುಗಾರಿಕೆ, ಪಶು ಸಂಗೋಪನೆ ಮತ್ತು ಹೈನುಗಾರಿಕಾ ಸಚಿವ ಪರಷೋತ್ತಮ ರೂಪಾಲ ಅವರಿಗೆ ಮಲ್ಪೆ ಬಂದರಿನಲ್ಲಿರುವ ಮೀನುಗಾರರ ಸಂಘದಲ್ಲಿ ಮನವಿಗಳನ್ನು ಸಲ್ಲಿಸಿದರು.

ಮೀನುಗಾರರಿಗೆ ಡೀಸೆಲ್ ಸಬ್ಸಿಡಿ ನೀಡಲು ಬಿ.ಪಿಎಲ್. ಕಾರ್ಡ್ ಪರಿಗಣಿನೆ ಮಾಡದ ಬಗ್ಗೆ, ಬೋಟ್ ಗಳಿಗೆ ರೋಡ್ ಸೆಸ್ ವಿಧಿಸುವುದನ್ನು ತೆಗೆಯುವ ಬಗ್ಗೆ, ಅಂತರರಾಜ್ಯ ಸಮನ್ವಯ ಸಮಿತಿ ರಚನೆ ಬಗ್ಗೆ,ಅನಿಯಮಿತ ಸೀಮೆಎಣ್ಣೆ ಸರಬರಾಜು ಬಗ್ಗೆ, ಮಲ್ಪೆಯಲ್ಲಿ ಹೊರ ಬಂದರು ನಿರ್ಮಾಣ ಬಗ್ಗೆ, ಈಗಿರುವ ಬಂದರನ್ನು ಮೇಲ್ದರ್ಜೆಗೇರಿಸುವ ಬಗ್ಗೆ, ಮೀನುಗಾರಿಕ ಕೈಗಾರಿಕ ವಲಯ ಆರಂಭಿಸುವ ಬಗ್ಗೆ,ಹಳೆಯ ಬೋಟು ಗಳ ಪುರ್ನ ನಿರ್ಮಾಣಕ್ಕೆ ಸಹಾಯಧನ ನೀಡುವ ಬಗ್ಗೆ ಮತ್ತಿತರ ಬೇಡಿಕೆಗಳ ಬಗ್ಗೆ ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ ಸುವರ್ಣ ಮನವಿ ಸಲ್ಲಿಸಿದರು.

ಹಿರಿಯ ಮೀನುಗಾರರಿಗೆ ಪಿಂಚಣಿ ನೀಡುವ ಬಗ್ಗೆ, ನಾಡ ದೋಣಿ ಮೀನುಗಾರರಿಗೆ ಪರ್ಯಯ ಇಂಧನ ಒದಗಿಸುವುದು ಸೇರಿದಂತೆ ಮತ್ತಿತರ ಬೇಡಿಕೆಗಳ ಬಗ್ಗೆ ಕರ್ನಾಟಕ ಕರಾವಳಿ ಮೀನುಗಾರರ ಕ್ರಿಯಾ ಸಮಿತಿ ಅಧ್ಯಕ್ಷ ಜಯ ಸಿ ಸುವರ್ಣ ಮನವಿ ಸಲ್ಲಿಸಿದರು.

ಪ್ರಸ್ತುತ ಮೀನುಗಾರರ ಎಲ್ಲಾ ಮನವಿಗಳ ಬಗ್ಗೆ ಪರಿಶೀಲಿಸಿ, ಮೀನುಗಾರರಿಗೆ ಗರಿಷ್ಠ ಪ್ರಯೋಜನ ದೊರೆಯುವಂತೆ ಪ್ರಸ್ತುತ ಇರುವ ಯೋಜನೆಗಳಲ್ಲಿ ಬದಲಾವಣೆ ಮತ್ತು ಹೊಸ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಉಡುಪಿ ಶಾಸಕ ರಘುಪತಿ ಭಟ್, ಕಾಪು ಲಾಲಾಜಿ ಆರ್ ಮೆಂಡನ್, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ, ಮೈಸೂರು ಎಲೆಕ್ಟಿçಕಲ್ಸ್ ಇಂಡಸ್ಟಿçÃಸ್ ನಿಯಮಿತದ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶ್‌ಪಾಲ್ ಸುವರ್ಣ, ನಗರಸಭಾ ಅಧ್ಯಕ್ಷೆ ಸುಮಿತ್ರಾ ನಾಯಕ್, ಉಪಾಧ್ಯಕ್ಷೆ ಲಕ್ಷಿö್ಮ ಮಂಜುನಾಥ್ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ರಾಜ್ಯ ಮೀನುಗಾರಿಕೆ ಇಲಾಖೆಯ ಕಾರ್ಯದರ್ಶಿ ಸಲ್ಮಾ ಫಾಹಿಮ್, ಕೋಸ್ಟ್ ಗಾರ್ಡ್ ಡಿ.ಐ.ಜಿ. ಪಿ.ಕೆ.ಮಿಶ್ರಾ , ಮೀನುಗಾರಿಕೆ ಇಲಾಖೆ ನಿರ್ದೇಶಕ ರಾಮಾಚಾರ್ಯ ಮತ್ತಿತರರು ಇದ್ದರು.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

18 minutes ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

37 minutes ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

2 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

2 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

2 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

2 hours ago