Featured

ಉಡುಪಿ ಜಿಲ್ಲೆಯ ರಜತ ಮಹೋತ್ಸವ-2023 : ಜ. 21ರಂದು ಕಾಪು ಕಡಲ ಕಿನಾರೆಯಲ್ಲಿ ಸಂಭ್ರಮಾಚರಣೆ – Vishwanews24

ಉಡುಪಿ ಜಿಲ್ಲೆಯ ರಜತ ಮಹೋತ್ಸವ-2023 : ಜ. 21ರಂದು ಕಾಪು ಕಡಲ ಕಿನಾರೆಯಲ್ಲಿ ವೈಭವದ ಸಂಭ್ರಮಾಚರಣೆ

ಕಾಪು ಪುರಸಭೆಯಿಂದ ಕಾಪು ಪೇಟೆಯಾಗಿ ಕಾಪು ಬೀಚ್‌ವರೆಗೆ ವೈಭವದ ಶೋಭಾಯಾತ್ರೆ

ಕಾಪು: ಉಡುಪಿ ಜಿಲ್ಲೆ ರಚನೆಗೊಂಡು ರಜತ ವರ್ಷಾಚರಣೆ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಕಾಪು ಕಡಲ ಕಿನಾರೆಯಲ್ಲಿ ಜನವರಿ 21ರಂದು ಉಡುಪಿ ಜಿಲ್ಲೆಯ ರಜತ ಮಹೋತ್ಸವ-2023 ಸಂಭ್ರಮಾಚರಣೆ ಕಾರ್ಯಕ್ರಮ ನಡೆಯಲಿದೆ ಎಂದು ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಹೇಳಿದರು.

ಕಾಪು ತಾಲೂಕು ಕಛೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಉಡುಪಿ ಜಿಲ್ಲೆಯು ರಚನೆಯಾಗಿ ಇಪ್ಪತ್ತೈದು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ವೈಶಿಷ್ಟ್ಯ ಪೂರ್ಣವಾದ ರಜತ ವರ್ಷಾಚರಣೆ ಕಾರ್ಯಕ್ರಮ ಆಯೋಜಿಸಲು ಉಡುಪಿ ಜಿಲ್ಲಾಡಳಿತ, ಕೇಂದ್ರ, ರಾಜ್ಯ ಸಚಿವರು ಮತ್ತು ಶಾಸಕರೆಲ್ಲರೂ ಜೊತೆ ಸೇರಿ ತೀರ್ಮಾನಿಸಿದ್ದು ಅದರಂತೆ ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾರ್ಯಕ್ರಮವು ಕಾಪುವಿನಲ್ಲಿ ವೈಭವದಿಂದ ನಡೆಯಲಿದೆ ಎಂದರು.

ಕಾಪು ತಾಲೂಕು ಆಡಳಿತ, ವಿವಿಧ ಇಲಾಖೆಗಳು, ಪುರಸಭೆಯೂ ಸೇರಿದಂತೆ ಕಾಪು ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯತ್‌ಗಳು ಹಾಗೂ ವಿವಿಧ ಶಾಲಾ ಕಾಲೇಜುಗಳು, ಸಾರ್ವಜನಿಕ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಮಧ್ಯಾಹ್ನ 2 ಗಂಟೆಗೆ ವಿವಿಧ ಸಾಂಸ್ಕೃತಿಕ ತಂಡಗಳು, ಕಾಪು ಕ್ಷೇತ್ರದ ವೈಶಿಷ್ಟ್ಯತೆಯನ್ನು ಮೆರೆಯುವ ಟ್ಯಾಬ್ಲೊಗಳೊಂದಿಗೆ ಕಾಪು ಪುರಸಭೆಯಿಂದ ಕಾಪು ಪೇಟೆಯಾಗಿ ಕಾಪು ಬೀಚ್‌ವರೆಗೆ ವೈಭವದ ಶೋಭಾಯಾತ್ರೆ ನಡೆಯಲಿದೆ.

ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸಭಾ ಕಾರ್ಯಕ್ರಮ ಪ್ರಾರಂಭಗೊಳ್ಳಲಿದೆ. ಗ್ರಾಮ ಪಂಚಾಯತ್‌ಗಳ ಪ್ರಾಯೋಜಕತ್ವದಲ್ಲಿ ಮತ್ತು ಜನಪ್ರತಿನಿಧಿಗಳ ಪಾಲ್ಗೊಳ್ಳುವಿಕೆಯೊಂದಿಗೆ ಸಾಂಸ್ಕತಿಕ ಸಂಗಮ ಕಾರ್ಯಕ್ರಮ ನಡೆಯಲಿದೆ. ಬಳಿಕ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ನೇತೃತ್ವದಲ್ಲಿ ಮ್ಯೂಸಿಕಲ್ ನೈಟ್ ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಲಿದೆ. ಸುದ್ದಿಗೋಷ್ಟಿಯಲ್ಲಿ ಕಾಪು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸುಧಾಮ ಶೆಟ್ಟಿ, ಕಂದಾಯ ನಿರೀಕ್ಷಕ ಸುಧೀರ್ ಕುಮಾರ್ ಶೆಟ್ಟಿ, ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾವಡ  ಪ್ರವೀಣ್ ಕಾಪು ಉಪಸ್ಥಿತರಿದ್ದರು.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK

Vishwa News 24

Recent Posts

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ – vishwanews24

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ ಉಡುಪಿ : ಈ ಬಾರಿಯ ಎಸ್‌ಎಸ್‌ಎಲ್‌ಸಿ…

4 hours ago

ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್‌ – vishwanews24

ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್‌ ಮಂಗಳೂರು : ಕರಾವಳಿ ಕರ್ನಾಟಕವು ಪ್ರಸ್ತುತ ತೀವ್ರ…

6 hours ago

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ – vishwanews24

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…

1 day ago

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ – vishwanews24

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…

1 day ago

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ – vishwanews24

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ…

1 day ago

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ – vishwanews24

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ  ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…

1 day ago