Featured

ಉಡುಪಿ :ಜಿಲ್ಲೆಯ ಶಾಸಕ, ಸಂಸದರ ವೈಫಲ್ಯವನ್ನು ಮಿಥುನ್ ರೈ ಎತ್ತಿ ತೋರಿಸಿದ್ದು ಬಿಜೆಪಿಗರಿಗೆ ಇರುವೆ ಬಿಟ್ಟಂತಾಗಿದೆ :  ದೀಪಕ್ ಕೋಟ್ಯಾನ್ – Vishwanews24

ಜಿಲ್ಲೆಯ ಶಾಸಕ, ಸಂಸದರ ವೈಫಲ್ಯವನ್ನು ಕಾಂಗ್ರೆಸ್ ನಾಯಕ ಮಿಥುನ್ ರೈ ಎತ್ತಿ ತೋರಿಸಿದ್ದು ಬಿಜೆಪಿಗರಿಗೆ ಇರುವೆ ಬಿಟ್ಟಂತಾಗಿದೆ :  ದೀಪಕ್ ಕೋಟ್ಯಾನ್

ಉಡುಪಿ: ಜಿಲ್ಲೆಯ ಶಾಸಕ, ಸಂಸದರ ವೈಫಲ್ಯವನ್ನು ಕಾಂಗ್ರೆಸ್ ನಾಯಕ ಮಿಥುನ್ ರೈ ಎತ್ತಿ ತೋರಿಸಿದ್ದು ಬಿಜೆಪಿಗರಿಗೆ ಇರುವೆ ಬಿಟ್ಟಂತಾಗಿದೆ ಎಂದು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್ ಹೇಳಿದ್ದಾರೆ.

ಜಿಲ್ಲೆಯಲ್ಲಿ ಹಲವಾರು ಸಮಸ್ಯೆಗಳಿದ್ದರೂ ಕೂಡ ಕ್ಷೇತ್ರದತ್ತ ತಲೆಹಾಕಿಯೂ ಬರದ ಸಂಸದೆ ಶೋಭಾಕರಂದ್ಲಾಜೆ ರಾಷ್ಟ್ರೀಯ ಹೆದ್ದಾರಿ ವಿಚಾರದಲ್ಲಿ ದಿವ್ಯ ನಿರ್ಲಕ್ಷ್ಯ ತೋರಿದ್ದರು. ರಸ್ತೆಯ ಎಲ್ಲಾ ರಸ್ತೆಗಳು ಹೊಂಡಳಿಂದ ಕೂಡಿ ಕೆಲವು ಜೀವಗಳು ಬಲಿಯಾದಾಗ ಬಿಜೆಪಿಗರಿಗೆ ಯಾವುದೇ ರೀತಿಯ ಕಾಳಜಿ ಇರಲಿಲ್ಲ. ಒಂದು ರಾಷ್ಟ್ರೀಯ ಪಕ್ಷವಾಗಿ ರಸ್ತೆಯ ಸಮಸ್ಯೆಯನ್ನು ಜನರ ಮುಂದಿಡಲು ಹೋದಾಗ ಸಂಸದೆಯ ಬಗ್ಗೆ ವಿಪರೀತ ಕಾಳಜಿ ತೋರಿಸುತ್ತಿದ್ದಾರೆ. ಅದೇ ಸಂಸದೆಯ ವಿರುದ್ದ ಬಿಜೆಪಿಗರು ಗೋಬ್ಯಾಕ್ ಅಭಿಯಾನ ಮಾಡಿರುವುದನ್ನು ಮಾತ್ರ ಮರೆತಂತೆ ಕಾಣುತ್ತಿದೆ.

ಇದನ್ನೂ ಓದಿ: ಮಂಗಳ ಕಾರ್ಯಗಳಿಂದ ಶುಭ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಬಿಜೆಪಿಗರಿಗೆ ಅವರ ಆಡಳಿತದಲ್ಲಿ ನಡೆದ ವೈಫಲ್ಯಗಳನ್ನು ಜನಸಾಮಾನ್ಯರಿಗೆ ತಿಳಿಸುವ ಕೆಲಸವನ್ನು ಜವಾಬ್ದಾರಿಯುತ ಪ್ರತಿಪಕ್ಷವಾಗಿ ಮಾಡಿದಾಗ ಅಂತಹವರ ವಿರುದ್ದ ವೈಯುಕ್ತಿಕ ಟೀಕೆ ಮಾಡುವುದೇ ಬಿಜೆಪಿಗರ ಚಾಳಿಯಾಗಿದೆ. ಜನರ ಸಮಸ್ಯೆಗೆ ಸ್ಪಂದಿಸುವುದನ್ನು ಬಿಟ್ಟು ಬರೇ ಕಮೀಷನ್ ದಂಧೆಯಲ್ಲಿ ಮುಳುಗಿರುವ ಬಿಜೆಪಿಗರಿಗೆ ಯಾವುದೇ ರೀತಿಯ ಅಭಿವೃದ್ಧಿ ಬೇಕಾಗಿಲ್ಲ. ಚುನಾವಣೆಯಲ್ಲಿ ಸೋತರೂ ಕೂಡ ಮಿಥುನ್ ರೈ ಜನರೊಂದಿಗೆ ಇದ್ದು ಅವರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದರೆ ಬಿಜೆಪಿಗರು ಬರೀ ವೈಯುಕ್ತಿಕ ಪ್ರಚಾರವನ್ನು ಪಡೆದುಕೊಂಡು ತಮ್ಮ ಕಿಸೆಗಳನ್ನು ತುಂಬಿಸುವ ಕೆಲಸವನ್ನು ಮಾಡುತ್ತಿದ್ದಾರೆ.

ಸಂಸದೆಯಾಗಿ ಆಯ್ಕೆಯಾದ ಶೋಭಾ ಕರಂದ್ಲಾಜೆ ಎಷ್ಟು ಬಾರಿ ತನ್ನ ಕ್ಷೇತ್ರಕ್ಕೆ ಬಂದು ತನ್ನ ಮತದಾರರ ಸಮಸ್ಯೆಗೆ ಸ್ಪಂದಿಸುವ ಕೆಲಸವನ್ನು ಬಿಜೆಪಿಗರು ಮೊದಲು ಮಾಡಲಿ ಬಳಿಕ ಮಿಥುನ್ ರೈ ವಿರುದ್ದ ಅವಹೇಳನ ಮಾಡಲುವ ಕೆಲಸ ನಡೆಸಲಿ. ಹೀಗೆಯೇ ಸಂಸದೆ ತಮ್ಮ ನಿರ್ಲಕ್ಷ್ಯ ಧೋರಣೆ ಮುಂದುವರೆಸಿದಲ್ಲಿ ಯುವ ಕಾಂಗ್ರೆಸ್ ತನ್ನ ಪ್ರತಿಭಟನೆ ಮುಂದುವರೆಸಲಿದೆ ಎಂದು ಅವರು ಹೇಳಿದ್ದಾರೆ.

PFI ಸೇರಿದಂತೆ ವಿವಿಧ ರಾಷ್ಟ್ರ ದ್ರೋಹಿ ಸಂಘಟನೆ ನಿಷೇಧಸಿದ್ದು ಹರ್ಷ ತಂದಿದೆ: ನಯಾನ ಗಣೇಶ್ – Vishwanews24

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago