ಉಡುಪಿ : ವಿದ್ಯಾವಂತರ ಜಿಲ್ಲೆಯಾಗಿ ಗುರುತಿಸಿಕೊಂಡಿರುವ ಉಡುಪಿಯ ಯುವ ಜನತೆಗೆ ಸ್ಥಳೀಯವಾಗಿಯೇ ಉದ್ಯೋಗಾವಕಾಶ ಸೃಷ್ಟಿಗೆ ಪ್ರಥಮ ಆದ್ಯತೆ ನೀಡುವುದಾಗಿ ಬಿಜೆಪಿ ಅಭ್ಯರ್ಥಿ ಯಶ್‌ಪಾಲ್ ಸುವರ್ಣ ಹೇಳಿದರು.
ಮಣಿಪಾಲ ಇಂಡಸ್ಟಿÅಯಲ್ ಏರಿಯಾದಲ್ಲಿ ವಿವಿಧ ಘಟಕಗಳಿಗೆ ಭೇಟಿ ನೀಡಿ ಸಿಬಂದಿಗಳಲ್ಲಿ ಮತ ಯಾಚನೆ ಮಾಡಿ ಮಾತನಾಡಿದರು.
ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದಿಂದ ಉಡುಪಿಯಲ್ಲಿ ಐ ಟಿ ಪಾರ್ಕ್ ಸ್ಥಾಪನೆಗೆ ವಿಶೇಷ ಕಾರ್ಯ ಯೋಜನೆ ರೂಪಿಸಿದ್ದು ಈ ಮೂಲಕ ಮುಂದಿನ ದಿನಗಳಲ್ಲಿ ಉಡುಪಿ ಜಿಲ್ಲೆ ರಾಜ್ಯದಲ್ಲಿಯೇ ಮುಂಚೂಣಿಯ ಐ ಟಿ ಹಬ್ ಆಗಿ ರೂಪಿಸಲಿದ್ದೇವೆ ಎಂದರು.
ಶಿಕ್ಷಣ, ವೈದ್ಯಕೀಯ ಹಾಗೂ ಕೈಗಾರಿಕಾ ವಲಯ, ರಿಯಲ್ ಎಸ್ಟೇಟ್ ಮತ್ತು ಕರಾವಳಿಯ ಆರ್ಥಿಕತೆಯಲ್ಲಿ ಬಹು ದೊಡ್ಡ ಪಾತ್ರವಹಿಸುವ ಮೀನುಗಾರಿಕೆಯ ಅಭಿವೃದ್ಧಿಗಾಗಿ ಪ್ರತ್ಯೇಕ ಮೀನುಗಾರಿಕಾ ಕೈಗಾರಿಕಾ ವಲಯ ಸ್ಥಾಪಿಸಿ ಉದ್ಯೋಗಾವಕಾಶ ಸೃಷ್ಟಿಗೆ ಪೂರಕ ವಾತಾವರಣ ನಿರ್ಮಾಣಕ್ಕೆ ಬದ್ದವಾಗಿದೆ ಎಂದರು.
ಉಡುಪಿ ಜಿಲ್ಲೆಯಲ್ಲಿ ಈಗಾಗಲೇ 100 ಕ್ಕೂ ಮಿಕ್ಕಿ ಐಟಿ ಕ್ಷೇತ್ರದ ಸ್ಟಾರ್ಟ್ ಅಪ್ ಕಂಪೆನಿಗಳು ಕಾರ್ಯಾಚರಿಸುತ್ತಿದ್ದು ಮುಂದಿನ ದಿನಗಳಲ್ಲಿ ಯುವ ಉದ್ಯಮಿಗಳಿಗೆ ಪ್ರೋತ್ಸಾಹ ನೀಡುವ ಜತೆ ಜತೆಗೆ ಪ್ರವಾಸೋದ್ಯಮದ ಮೂಲಕ ಸ್ವ ಉದ್ಯೋಗದ ಕಲ್ಪನೆಗೂ ಶಕ್ತಿ ತುಂಬಲು ಡಬಲ್ ಇಂಜಿನ್ ಸರ್ಕಾರದ ಮೂಲಕ ಯೋಜನೆ ರೂಪಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ನಗರ ಸಭಾ ಸದಸ್ಯೆ ಕಲ್ಪನಾ ಸುಧಾಮ, ಉಡುಪಿ ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್, ಗ್ರಾಮಾಂತರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಚಿನ್ ಪೂಜಾರಿ, ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…