Featured

ಉಡುಪಿ: ಜಿ ಎಸ್ ಟಿ ಸರಳೀಕರಣಗೊಳಿಸಿ ದೇಶದ ಆರ್ಥಿಕ ಪ್ರಗತಿಗೆ ಮುನ್ನಡಿ ಬರೆದ ಕೇಂದ್ರ ಸರಕಾರ: ಯಶ್ಪಾಲ್ ಸುವರ್ಣ – vishwanews24

ಉಡುಪಿ: ಜಿ ಎಸ್ ಟಿ ಸರಳೀಕರಣಗೊಳಿಸಿ ದೇಶದ ಆರ್ಥಿಕ ಪ್ರಗತಿಗೆ ಮುನ್ನಡಿ ಬರೆದ ಕೇಂದ್ರ ಸರಕಾರ: ಯಶ್ಪಾಲ್ ಸುವರ್ಣ

ಉಡುಪಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ 56ನೇ ಜಿ ಎಸ್ ಟಿ ಕೌನ್ಸಿಲ್ ಸಭೆಯಲ್ಲಿ ಅಗತ್ಯ ವಸ್ತುಗಳ ಮೇಲಿನ ಸುಂಕವನ್ನು ಕಡಿತಗೊಳಿಸಿ, ಸರಳೀಕರಣ ಮಾಡುವ ಮೂಲಕ ದೇಶದ ಆರ್ಥಿಕ ಪ್ರಗತಿಗೆ ಮುನ್ನಡಿ ಬರೆದಿದೆ ಎಂದು ಉಡುಪಿ ಶಾಸಕರಾದ ಯಶ್ ಸುವರ್ಣ ಹರ್ಷ ವ್ಯಕ್ತಪಡಿಸಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆ ಸಂದರ್ಬದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದಂತೆ ದೇಶದ ಜನ ಸಾಮಾನ್ಯರು, ರೈತರಿಗೆ ಸಹಕಾರ ನೀಡುವ ನಿಟ್ಟಿನಲ್ಲಿ ಜಿ ಎಸ್ ಟಿ ಕಡಿತ ಮಾಡುವ ಭರವಸೆಯನ್ನು ಕೇಂದ್ರ ಸರ್ಕಾರ ಈಡೇರಿಸಿದೆ.

ಜಿ ಎಸ್ ಟಿ ಸರಳೀಕರಣ ಗೊಳಿಸುವ ನಿಟ್ಟಿನಲಿಪ್ರಸ್ತುತ ಇರುವ ಶೇ. 12 ಮತ್ತು ಶೇ. 28ರ ತೆರಿಗೆ ಸ್ಲ್ಯಾಬ್‌ಗಳನ್ನು ತೆಗೆದುಹಾಕಿ, ಕೇವಲ ಶೇ. 5 ಮತ್ತು ಶೇ. 18ರ ಎರಡು ಹಂತದ ತೆರಿಗೆ ರಚನೆಯನ್ನು ಜಾರಿಗೆ ತರಲು ಜಿ ಎಸ್ ಟಿ ಕೌನ್ಸಿಲ್ ಸಭೆ ಒಪ್ಪಿಗೆ ಸೂಚಿಸಿದೆ.

ಈ ಹಿಂದೆ ಜಿ ಎಸ್ ಟಿ ಜನಸಾಮಾನ್ಯರಿಗೆ ಹೊರೆ, ದರ ಏರಿಕೆ ಬಗ್ಗೆ ವ್ಯಾಪಕವಾಗಿ ಅಧಾರ ರಹಿತ ಟೀಕೆ ಮಾಡುತ್ತಿದ್ದ ಕಾಂಗ್ರೆಸ್ ಸಹಿತ ವಿರೋಧ ಪಕ್ಷಗಳು ಇದೀಗ ಕೇಂದ್ರ ಸರ್ಕಾರ ಜನಸಾಮಾನ್ಯರ ಪರವಾಗಿ ಜಿ ಎಸ್ ಟಿ ತೆರಿಗೆ ಕಡಿತ ಮಾಡಿದ ಬಳಿಕ ನೀರಿನಿಂದ ಹೊರತೆಗೆದ ಮೀನಿನನಂತೆ ಚಡಪಡಿಸುತ್ತಿದೆ.

ಜಿ ಎಸ್ ಟಿ ಕೌನ್ಸಿಲ್ ಸಭೆಯಲ್ಲಿ ರಾಜ್ಯದ ಪ್ರತಿನಿಧಿಯಾಗಿರುವ ಕಂದಾಯ ಸಚಿವರು ಜಿ ಎಸ್ ಟಿ ತೆರಿಗೆ ಕಡಿತದಿಂದ ರಾಜ್ಯಕ್ಕೆ 15 ಸಾವಿರ ಕೋಟಿ ಆದಾಯ ನಷ್ಟವಾಗುತ್ತದೆ ಅದನ್ನು ಕೇಂದ್ರ ಸರ್ಕಾರ ರಾಜ್ಯಕ್ಕೆ ಭರಿಸುವಂತೆ ಹೇಳಿಕೆ ನೀಡುವ ಮೂಲಕ ಪರೋಕ್ಷವಾಗಿ ಜಿ ಎಸ್ ಟಿ ತೆರಿಗೆ ಕಡಿತವನ್ನು ವಿರೋಧಿಸುತ್ತಿರುವುದು ದುರದೃಷ್ಟಕರ. ರಾಜ್ಯ ಕಾಂಗ್ರೆಸ್ ಸರಕಾರ ತಕ್ಷಣ ಜಿ ಎಸ್ ಟಿ ತೆರಿಗೆ ಕಡಿತದ ಬಗ್ಗೆ ತಮ್ಮ ನಿಲುವನ್ನು ಕೂಡಲೇ ಸ್ಪಷ್ಟ ಪಡಿಸಬೇಕು ಎಂದು ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.

Vishwa News 24

Recent Posts

ರಾಜ್ಯಸಭೆ ಸ್ಥಾನದಿಂದ ನನ್ನ ಮೋದಿ ಅವರ ಸಂಬಂಧ ಮುಕ್ತಾಯ ಆಗೋದಿಲ್ಲ : ಹೆಚ್.ಡಿ ದೇವೇಗೌಡ – vishwanews24

ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …

7 hours ago

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ – vishwanews24

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…

8 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…

8 hours ago

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ – vishwanews24

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…

8 hours ago

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ – vishwanews24

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…

9 hours ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ : ಪ್ರಧಾನಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಮನವಿ – vishwanews24

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…

10 hours ago