Featured

ಉಡುಪಿ: ಜಿ ಶಂಕರ್ ಮನೆ ಮೇಲೆ ಐಟಿ ರೈಡ್ – ಮೊಗವೀರ ಸಮುದಾಯಕ್ಕೆ ಬಿಜೆಪಿ ಸರಕಾರ ಮಾಡಿದ ಬಹುದೊಡ್ಡ ಅವಮಾನ :ರಮೇಶ್ ಕಾಂಚನ್  – Vishwanews24

ಉಡುಪಿ: ಜಿ ಶಂಕರ್ ಮನೆ ಮೇಲೆ ಐಟಿ ರೈಡ್ – ಮೊಗವೀರ ಸಮುದಾಯಕ್ಕೆ ಬಿಜೆಪಿ ಸರಕಾರ ಮಾಡಿದ ಬಹುದೊಡ್ಡ ಅವಮಾನ :ರಮೇಶ್ ಕಾಂಚನ್

ಉಡುಪಿ: ನಾಡೋಜ ಡಾ. ಜಿ. ಶಂಕರ್ ಅವರ ಮನೆ ಹಾಗೂ ಸಂಸ್ಥೆಗಳ ಮೇಲೆ ನಡೆದಿರುವ ಆದಾಯ ತೆರಿಗೆ ಇಲಾಖೆಯ ದಾಳಿಯನ್ನು ಉಡುಪಿ ಬ್ಲಾಕ್ ಕಾಂಗ್ರೆಸ್ ಖಂಡಿಸಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ಹಂಚಿಕೊಂಡಿರುವ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಅವರು, ಮೊಗವೀರ ಸಮುದಾಯದ ಮುಖಂಡರಾದ ನಾಡೋಜ ಡಾ. ಜಿ ಶಂಕರ್ ಅವರ ಮನೆ ಹಾಗೂ ಸಂಸ್ಥೆಗಳ ಮೇಲೆ ನಡೆದಿರುವ ಆದಾಯ ತೆರಿಗೆ ಇಲಾಖೆ ದಾಳಿಯು ಮೊಗವೀರ ಸಮುದಾಯಕ್ಕೆ ಬಿಜೆಪಿ ನೇತೃತ್ವದ ಮೋದಿ ಸರಕಾರ ಮಾಡಿದ ಬಹುದೊಡ್ಡ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಾಗೂ ಮೊಗವೀರ ಸಮುದಾಯವನ್ನು ತಳಮಟ್ಟದಿಂದ ಮೇಲೆತ್ತುವುದರೊಂದಿಗೆ, ಸರ್ವರನ್ನು ಒಗ್ಗೂಡಿಸುವ ಮೂಲಕ ಸಮಾಜದಲ್ಲಿ ಸಂಘಟನೆಯನ್ನು ಬಲ ಪಡಿಸುವ ಬಹುದೊಡ್ಡ ಕೆಲಸವನ್ನು ಡಾ. ಜಿ ಶಂಕರ್ ಕಳೆದ ಹಲವಾರು ವರ್ಷಗಳಿಂದ ಮಾಡಿಕೊಂಡು ಬಂದಿದ್ದಾರೆ. ಜಾತಿ, ಮತ, ಪಕ್ಷಬೇಧವನ್ನು ಲೆಕ್ಕಿಸದೆ ಕಷ್ಟದಲ್ಲಿರುವವರ ನೆರವಿಗೆ ಧಾವಿಸಿ ಬರುವ ಮಾನವೀಯ ಗುಣವನ್ನು ಹೊಂದಿರುವ ಜಿ ಶಂಕರ್ ಸಮುದಾಯದ ಹಾಗೂ ಇಡೀ ಸಮಾಜದ ಆಸ್ತಿಯಾಗಿದ್ದಾರೆ. ರಕ್ತದಾನ, ಆರೋಗ್ಯ ಚಿಕಿತ್ಸೆಗೆ ಸಹಾಯಧನ, ಉಚಿತ ಸಾಮೂಹಿಕ ವಿವಾಹ, ಗುರಿಕಾರರ ಸಮ್ಮಿಲನ, ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ, ಧಾರ್ಮಿಕ ಕಾರ್ಯಕ್ರಮ, ದೇವಸ್ಥಾನದ ಜೀರ್ಣೋದ್ಧಾರ ಸೇರಿದಂತೆ ಹಲವಾರು ಸಮಾಜ ಮುಖಿ ಕಾರ್ಯಕ್ರಮಗಳನ್ನು ಮಾಡಿಕೊಂಡು ಬಂದಿರುವ ಶಂಕರ್ ವಿರುದ್ದ ಕೇಂದ್ರದ ಬಿಜೆಪಿ ಸರಕಾರ ಕೆಂಗಣ್ಣು ಬೀರಿರುವುದು ನಿಜಕ್ಕೂ ಖಂಡನೀಯ. ಮೊಗವೀರ ಸಮುದಾಯ ಸಮಾಜದಲ್ಲಿ ತಲೆ ಎತ್ತಿ ನಿಂತರೆ ಬಿಜೆಪಿಗರಿಗೆ ಮುಂದೆ ಸಮಸ್ಯೆಯಾಗುತ್ತದೆ ಎಂಬ ಭ್ರಮೆಯಲ್ಲಿ ಡಾ. ಜಿ ಶಂಕರ್ ಅವರನ್ನು ಮಾನಸಿಕವಾಗಿ ಕುಗ್ಗಿಸಲು ಈ ದಾಳಿಯನ್ನು ನಡೆಸಿದ್ದು ಮೊಗವೀರ ಸಮುದಾಯ ಸೇರಿದಂತೆ ಎಲ್ಲರೂ ಕೂಡ ಬಿಜೆಪಿಯ ರಾಜಕೀಯ ಕುತಂತ್ರವನ್ನು ಅರ್ಥ ಮಾಡಿಕೊಂಡು ಚುನಾವಣೆಯಲ್ಲಿ ಸೂಕ್ತ ಉತ್ತರ ನೀಡಬೇಕು ಎಂದು ಅವರು ತಿಳಿಸಿದ್ದಾರೆ.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

5 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

13 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

13 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

14 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

14 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

14 hours ago