Featured

ಉಡುಪಿ : ಜೀವರಕ್ಷಕರಿಂದ ಕಡಲತೀರದಲ್ಲಿ ಸಂಭವಿಸುವ ಅಹಿತಕರ ಘಟನೆ ತಡೆಯಲು ಸಾಧ್ಯ: ಶಾಸಕ ಯಶ್‌ಪಾಲ್ ಎ ಸುವರ್ಣ – vishwanews24

ಉಡುಪಿ : ಜೀವರಕ್ಷಕರಿಂದ ಕಡಲತೀರದಲ್ಲಿ ಸಂಭವಿಸುವ ಅಹಿತಕರ ಘಟನೆ ತಡೆಯಲು ಸಾಧ್ಯ: ಶಾಸಕ ಯಶ್‌ಪಾಲ್ ಎ ಸುವರ್ಣ

ಉಡುಪಿ  : ಕಡಲ ತೀರದ ವಲಯಗಳಲ್ಲಿ ಪ್ರವಾಸಿಗರ ಸುರಕ್ಷತೆಯ ಕಾರ್ಯವನ್ನು ಜೀವರಕ್ಷಕ ತಂಡದವರು ಮಾಡಲಿದ್ದು, ಇದರಿಂದ ಭವಿಷ್ಯದಲ್ಲಾಗುವ ಅಹಿತಕರ ಘಟನೆಯನ್ನು ತಡೆಯಲು ಸಾಧ್ಯವಾಗಲಿದೆ ಎಂದು ಶಾಸಕ ಯಶ್‌ಪಾಲ್ ಎ ಸುವರ್ಣ ಹೇಳಿದರು.

ಅವರು ಇಂದು ಮಲ್ಪೆಯ ಕಡಲತೀರದಲ್ಲಿ ಜೀವ ರಕ್ಷಕ ಸಿಬ್ಬಂದಿಗಳಿಗೆ ತರಬೇತಿ ಹಾಗೂ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾತನಾಡುತ್ತಿದ್ದರು.

ಕಡಲ ಸೊಬಗನ್ನು ಸವಿಯಲು ಹೊರಗಿನಿಂದ ಬರುವ ಜನರಿಗೆ ಸಮುದ್ರ ಪ್ರದೇಶದ ಆಳ, ಅಲೆಗಳ ಹೊಡೆತಗಳನ್ನು ತಪ್ಪಿಸಿಕೊಳ್ಳುವ ಬಗ್ಗೆ ಅರಿವಿಲ್ಲದೇ ಅನಾಹುತಗಳು ಆಗುವ ಸಾಧ್ಯತೆಗಳಿದ್ದು, ಇವುಗಳನ್ನು ತಡೆಯುವ ಉದ್ದೇಶದಿಂದ ಜಿಲ್ಲಾಡಳಿತ ನುರಿತ ಹಾಗೂ ಪರಿಣಿತ ಜೀವ ರಕ್ಷಕ ಸಿಬ್ಬಂದಿಗಳನ್ನು ನಿಯೋಜನೆ ಮಾಡಿರುವುದು ಒಂದು ಅಭಿನಂದನೀಯ ಕಾರ್ಯ ಎಂದರು.

ದೇಶದಲ್ಲಿಯೇ ಮಲ್ಪೆ ಬೀಚ್ ಅತ್ಯಾಕರ್ಷಣೀಯವಾಗಿದ್ದು, ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ದಿನೇ ದಿನೇ ಇಲ್ಲಿಗೆ ಬರುವವರ ಸಂಖ್ಯೆ ಹೆಚ್ಚುತ್ತಿದೆ. ಇಲ್ಲಿಗೆ ಆಗಮಿಸುವ ಪ್ರವಾಸಿಗರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನೊಳಗೊಂಡ ಬೀಚ್‌ನ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ರೂಪಿಸುವ ಕಾರ್ಯವನ್ನು ಮಾಡಲಾಗುತ್ತಿದೆ ಎಂದರು.

ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಮಾತನಾಡಿ, ಪ್ರವಾಸಿಗರ ಸುರಕ್ಷತೆಯ ಹಿತದೃಷ್ಠಿಯಿಂದ ಜೀವರಕ್ಷಕರನ್ನು ಮಲ್ಪೆ, ಮರವಂತೆ, ಕಾಪು, ತ್ರಾಸಿ, ಬೀಚ್‌ಗಳಲ್ಲಿ ನೇಮಿಸಲಾಗುತ್ತಿದೆ ಎಂದ ಅವರು, ಈಗಾಗಲೇ ಮೊದಲ ಹಂತದಲ್ಲಿ 17 ಜನ ಜೀವರಕ್ಷಕರಿಗೆ ತರಬೇತಿಯನ್ನು ನೀಡಲಾಗಿದ್ದು, ತಮ್ಮ ಕಾರ್ಯಕ್ಕೆ ಶೀಘ್ರದಲ್ಲಿಯೇ ನಿಯೋಜನೆಗೊಳ್ಳಲಿದ್ದಾರೆ ಎಂದರು.

ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಯಾವುದೇ ರೀತಿಯ ತೊಂದರೆಯಾಗದoತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮದಾಗಿದೆ ಎಂದ ಅವರು, ಪ್ರವಾಸಿ ತಾಣಗಳ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ನಗರಸಭೆ ಪೌರಾಯುಕ್ತ ರಾಯಪ್ಪ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಸಿ.ಯು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ರಾಷ್ಟಿçÃಯ ಲೈಫ್ ಸೇವಿಂಗ್ಸ್ ಸೊಸೈಟಿಯಿಂದ ಮಾನ್ಯತೆ ಪಡೆದ ಪುತ್ತೂರಿನ ವಾರಾಣಾಸಿ ಡೆವಲಪ್‌ಮೆಂಟ್ ಅಂಡ್ ರಿಸರ್ಚ್ ಫೌಂಡೇಶನ್ ಸಂಸ್ಥೆಯ ವತಿಯಿಂದ ಜೀವ ರಕ್ಷಕ ತಂಡದವರಿಗೆ ಉತ್ತಮ ಈಜುಗಾರಿಕೆ, ಕೃತಕ ಉಸಿರಾಟ ನೀಡುವುದು, ಪ್ರಥಮಚಿಕಿತ್ಸೆ ನೀಡುವುದು, ಪ್ರಜ್ಞಾಹೀನರಿಗೆ ಸಾಗಿಸುವುದು ಸೇರಿದಂತೆ ಮತ್ತಿತರ ತರಬೇತಿಯನ್ನು ನೀಡುವುದರೊಂದಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು.

 

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

18 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

19 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

19 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

19 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

19 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

20 hours ago