Featured

ಉಡುಪಿ : ಜುಲೈ 10 ರಂದು ಲಸಿಕಾ ಲಭ್ಯತೆ ವಿವರ -Vishwanews24

ಉಡುಪಿ : ಜುಲೈ 10 ರಂದು ಲಸಿಕಾ ಲಭ್ಯತೆ ವಿವರ -Vishwanews24

ಉಡುಪಿ : ಜಿಲ್ಲೆಯಲ್ಲಿ ಜುಲೈ 10 ರಂದು ಉಡುಪಿ ನಗರ ಪ್ರದೇಶದ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು, ಆದ್ಯತಾ ಗುಂಪಿನವರು, ಆರೋಗ್ಯ ಕಾರ್ಯಕರ್ತರು, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರುಗಳಿಗೆ ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಕೋವಿಡ್-19 2ನೇ ಡೋಸ್ ಲಸಿಕೆ ಲಭ್ಯವಿರುತ್ತದೆ.

ನಗರದ ಜಿಲ್ಲಾ ಆಸ್ಪತ್ರೆಯಲ್ಲಿ (ಸೇಂಟ್ ಸಿಸಿಲಿ ಶಾಲೆ) 2 ನೇ ಡೋಸ್ ಕೋವಿಶೀಲ್ಡ್ 250 ಡೋಸ್, ಮಣಿಪಾಲದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ (ಮಾಧವ ಕೃಪಾ ಶಾಲೆ) 2 ನೇ ಡೋಸ್ ಕೋವಿಶೀಲ್ಡ್ -250 ಡೋಸ್ ಹಾಗೂ 2 ನೇ ಕೋವ್ಯಾಕ್ಸಿನ್ 150 ಡೋಸ್, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿಯ ಹಳೆ ಕಟ್ಟಡದಲ್ಲಿ (ಅಲಂಕಾರ್ ಥಿಯೇಟರ್ ಹತ್ತಿರ) 2 ನೇ ಡೋಸ್ ಕೋವಿಶೀಲ್ಡ್ 150 ಡೋಸ್, ಕುಕ್ಕಿಕಟ್ಟೆಯ ಎಫ್.ಪಿ.ಎ.ಐ ನಲ್ಲಿ ( ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ) 2 ನೇ ಡೋಸ್ ಕೋವಿಶೀಲ್ಡ್ 100 ಡೋಸ್ ಹಾಗೂ ನಗರದ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಜುಲೈ 15 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ 150 ಡೋಸ್ ಲಭ್ಯವಿದೆ.

ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು, ಆರೋಗ್ಯ ಕಾರ್ಯಕರ್ತರು, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರು ಕೋವಿಡ್-19 2 ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯಬಹುದು.

ಜಿಲ್ಲೆಯಲ್ಲಿ 18 ರಿಂದ 44 ವರ್ಷ ವಯೋಮಿತಿಯ ಸಾರ್ವಜನಿಕರಿಗೆ ಯಾವುದೇ ಕೋವಿಡ್-19 ಲಸಿಕೆ ಲಭ್ಯವಿರುವುದಿಲ್ಲ ಹಾಗೂ 45 ವರ್ಷ ಮೇಲ್ಪಟ್ಟ ವಯೋಮಿತಿಯ ಸಾರ್ವಜನಿಕರಿಗೆ ಪ್ರಥಮ ಡೋಸ್ ಕೋವಿಡ್-19 ಲಸಿಕೆ ಲಭ್ಯವಿರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

13 hours ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

22 hours ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

23 hours ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

23 hours ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

23 hours ago

ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ – vishwanews24

ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…

23 hours ago