Featured

ಉಡುಪಿ : ಜುಲೈ 7 ರಂದು ಲಸಿಕಾ ಲಭ್ಯತೆ ವಿವರ-Vishwanews24

ಉಡುಪಿ : ಜುಲೈ 7 ರಂದು ಲಸಿಕಾ ಲಭ್ಯತೆ ವಿವರ-Vishwanews24

ಉಡುಪಿ : ಜಿಲ್ಲೆಯಲ್ಲಿ ಜುಲೈ 7 ರಂದು ಉಡುಪಿ ನಗರ ಪ್ರದೇಶದ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು, ಆದ್ಯತಾ ಗುಂಪಿನವರು, ಆರೋಗ್ಯ ಕಾರ್ಯಕರ್ತರು, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರುಗಳಿಗೆ ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಕೋವಿಡ್-19 2ನೇ ಡೋಸ್ ಲಸಿಕೆ ಲಭ್ಯವಿರುತ್ತದೆ.

ನಗರದ ಜಿಲ್ಲಾ ಆಸ್ಪತ್ರೆಯಲ್ಲಿ (ಸೇಂಟ್ ಸಿಸಿಲಿ ಶಾಲೆ) 2 ನೇ ಡೋಸ್ ಕೋವಿಶೀಲ್ಡ್ 100 ಡೋಸ್, ಮಣಿಪಾಲದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ (ಮಾಧವ ಕೃಪಾ ಶಾಲೆ) 2 ನೇ ಡೋಸ್ ಕೋವಿಶೀಲ್ಡ್ -120 ಡೋಸ್, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿಯ ಹಳೆ ಕಟ್ಟಡದಲ್ಲಿ (ಅಲಂಕಾರ್ ಥಿಯೇಟರ್ ಹತ್ತಿರ) 2 ನೇ ಡೋಸ್ ಕೋವಿಶೀಲ್ಡ್ 100 ಡೋಸ್, ಕುಕ್ಕಿಕಟ್ಟೆಯ ಎಫ್.ಪಿ.ಎ.ಐ ನಲ್ಲಿ ( ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ) 2 ನೇ ಡೋಸ್ ಕೋವಿಶೀಲ್ಡ್ 100 ಡೋಸ್ ಹಾಗೂ ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಜುಲೈ 15 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ 100 ಡೋಸ್ ಲಭ್ಯವಿದೆ.

ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು, ಆರೋಗ್ಯ ಕಾರ್ಯಕರ್ತರು, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರು ಕೋವಿಡ್-19 2 ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯಬಹುದು.

ಜಿಲ್ಲೆಯಲ್ಲಿ 18 ರಿಂದ 44 ವರ್ಷ ವಯೋಮಿತಿಯ ಸಾರ್ವಜನಿಕರಿಗೆ ಯಾವುದೇ ಕೋವಿಡ್-19 ಲಸಿಕೆ ಲಭ್ಯವಿರುವುದಿಲ್ಲ ಹಾಗೂ 45 ವರ್ಷ ಮೇಲ್ಪಟ್ಟ ವಯೋಮಿತಿಯ ಸಾರ್ವಜನಿಕರಿಗೆ ಪ್ರಥಮ ಡೋಸ್ ಕೋವಿಡ್-19 ಲಸಿಕೆ ಲಭ್ಯವಿರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

4 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

4 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

5 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

5 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

5 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

5 hours ago