ಉಡುಪಿ : ಜಿಲ್ಲೆಯಲ್ಲಿ ಜುಲೈ 15 ರಂದು ಉಡುಪಿ ನಗರ ಪ್ರದೇಶದ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು, ಆದ್ಯತಾ ಗುಂಪಿನವರು, ಆರೋಗ್ಯ ಕಾರ್ಯಕರ್ತರು, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರುಗಳಿಗೆ ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಕೋವಿಡ್-19 2ನೇ ಡೋಸ್ ಲಸಿಕೆ ಲಭ್ಯವಿರುತ್ತದೆ.
ಮಣಿಪಾಲದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ (ಮಾಧವ ಕೃಪಾ ಶಾಲೆ) 2 ನೇ ಡೋಸ್ ಕೋವಿಶೀಲ್ಡ್ -100 ಡೋಸ್, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿಯ ಹಳೆ ಕಟ್ಟಡದಲ್ಲಿ (ಅಲಂಕಾರ್ ಥಿಯೇಟರ್ ಹತ್ತಿರ) 2 ನೇ ಡೋಸ್ ಕೋವಿಶೀಲ್ಡ್ 150 ಡೋಸ್, ಕುಕ್ಕಿಕಟ್ಟೆಯ ಎಫ್.ಪಿ.ಎ.ಐ ನಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ) 2 ನೇ ಡೋಸ್ ಕೋವಿಶೀಲ್ಡ್ 100 ಡೋಸ್ ಹಾಗೂ ನಗರದ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಜುಲೈ 20 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ 100 ಡೋಸ್ ಲಸಿಕೆ ಲಭ್ಯವಿರುತ್ತದೆ.
ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು, ಆರೋಗ್ಯ ಕಾರ್ಯಕರ್ತರು, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರು ಕೋವಿಡ್-19 2 ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…