Featured

ಉಡುಪಿ : ಜು.17 ರಂದು ಕೋವಿಡ್- 19 ಎರಡನೇ ಡೋಸ್ ಲಸಿಕೆ ಲಭ್ಯ -Vishwanews24

ಉಡುಪಿ : ಜು.17 ರಂದು ಕೋವಿಡ್- 19 ಎರಡನೇ ಡೋಸ್ ಲಸಿಕೆ ಲಭ್ಯ -Vishwanews24

ಉಡುಪಿ : ಜಿಲ್ಲೆಯಲ್ಲಿ ಜುಲೈ 17 ರಂದು ಉಡುಪಿ ನಗರ ಪ್ರದೇಶದ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು, ಆದ್ಯತಾ ಗುಂಪಿನವರು, ಆರೋಗ್ಯ ಕಾರ್ಯಕರ್ತರು, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರುಗಳಿಗೆ ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಕೋವಿಡ್-19 2ನೇ ಡೋಸ್ ಲಸಿಕೆ ಲಭ್ಯವಿರುತ್ತದೆ.

ಮಣಿಪಾಲದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ (ಮಾಧವ ಕೃಪಾ ಶಾಲೆ) 2 ನೇ ಡೋಸ್ ಕೋವಿಶೀಲ್ಡ್ -100 ಡೋಸ್, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿಯ ಹಳೆ ಕಟ್ಟಡದಲ್ಲಿ (ಅಲಂಕಾರ್ ಥಿಯೇಟರ್ ಹತ್ತಿರ) 2 ನೇ ಡೋಸ್ ಕೋವಿಶೀಲ್ಡ್ 100 ಡೋಸ್, ಕುಕ್ಕಿಕಟ್ಟೆಯ ಎಫ್.ಪಿ.ಎ.ಐ ನಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ) 2 ನೇ ಡೋಸ್ ಕೋವಿಶೀಲ್ಡ್ 150 ಡೋಸ್ ಹಾಗೂ ನಗರದ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಜುಲೈ 25 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ 100 ಡೋಸ್ ಲಸಿಕೆಯನ್ನು ಬೆಳಗ್ಗೆ 10.30 ರಿಂದ ಮಧ್ಯಾಹ್ನ 3.30 ರ ವರೆಗೆ ನೀಡಲಾಗುವುದು.

ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು, ಆರೋಗ್ಯ ಕಾರ್ಯಕರ್ತರು, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರು ಕೋವಿಡ್-19 2 ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

6 minutes ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

14 minutes ago

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ – vishwanews24

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…

21 minutes ago

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು – vishwanews24

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…

28 minutes ago

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ : ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ – vishwanews24

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ:  ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…

41 minutes ago

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ – vishwanews24

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…

53 minutes ago