ಉಡುಪಿ : ಜು. 21 ರಂದು ವಿದೇಶಕ್ಕೆ ತೆರಳುವವರಿಗೆ ಮಾತ್ರ ಲಸಿಕೆ -Vishwanews24
ಉಡುಪಿ : ಜು. 21 ರಂದು ವಿದೇಶಕ್ಕೆ ತೆರಳುವವರಿಗೆ ಮಾತ್ರ ಲಸಿಕೆ -Vishwanews24
ಉಡುಪಿ : ಜಿಲ್ಲೆಯಲ್ಲಿ ಜುಲೈ 21 ರಂದು ನಗರದ ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆಯಲ್ಲಿ ಜುಲೈ 25 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ ಮಾತ್ರ 2ನೇ ಡೋಸ್ ಕೋವಿಶೀಲ್ಡ್ 50 ಡೋಸ್ ಲಸಿಕೆಯು ಬೆಳಗ್ಗೆ 9 ರಿಂದ ಅಪರಾಹ್ನ 12.30 ರ ವರೆಗೆ ಲಭ್ಯವಿರುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
